Election ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಅಡ್ಡಿ ಪಡಿಸಿದರೆ ಕಠಿಣ ಕ್ರಮ:ADGP ಎಚ್ಚರಿಕೆ
Team Udayavani, Apr 6, 2023, 6:03 PM IST
ಕಾರವಾರ: ಚುನಾವಣೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಅಡ್ಡಿ ಮಾಡಿದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸಾಮಾಜಿಕ ಜಾಲತಾಣದ ಮೂಲಕ ಕೋಮು ಸೌಹಾರ್ದತೆಗೆ ಅಡ್ಡಿ ಮಾಡಿದರೂ ಕ್ರಮ ತಪ್ಪಲ್ಲ ಎಂದು ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಅಲೋಕಕುಮಾರ್ ಎಚ್ಚರಿಕೆ ನೀಡಿದರು.
ಕಾರವಾರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಗುರುವಾರ ಅಧಿಕಾರಿಗಳ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೋಮು ಸೌಹಾರ್ದತೆಗೆ ಅಡ್ಡಿ ಮಾಡಿದ್ದಲ್ಲಿ ಸರಿಯಾದ ಕ್ರಮ ಕೈಗೊಳ್ಳುತ್ತೇವೆ. ಇಂತಹ ಕೃತ್ಯಗಳಿಗೆ ಯಾವುದೇ ಕಾರಣಕ್ಕೂ ಆಸ್ಪದ ಇಲ್ಲ. ಇಂತಹ ಸಂದರ್ಭದಲ್ಲಿ ಕೋಮುಸೌಹಾರ್ದತೆ ಕೆಡಿಸಲು ಮುಂದಾದರೆ ಪೊಲೀಸ್ ಇಲಾಖೆ ಸರಿಯಾದ ಕ್ರಮ ಕೈಗೊಳ್ಳಲಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ನಮ್ಮ ಜವಾಬ್ದಾರಿ, ಯಾವ ಕಾರಣಕ್ಕೂ ಮುಲಾಜಿಲ್ಲದೇ ಕ್ರಮ ಜರುಗಿಸುತ್ತೇವೆ. ಎಲ್ಲರ ಮೇಲೆ ನಿಗಾ ಇರಿಸಿದ್ದು, ಯಾರೇ ಅತಿರೇಖವಾಗಿ ವರ್ತಿಸಿದಲ್ಲಿ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದರು.
ಈಗಾಗಲೇ ಕೇಂದ್ರದ ಕಾಯ್ದಿಟ್ಟ ಸಶಸ್ತ್ರ ಮೀಸಲು ಪಡೆಯ 4 ತುಕಡಿಗಳು ಜಿಲ್ಲೆಗೆ ಬಂದಿದ್ದು, ಎರಡನೇ ಹಂತದಲ್ಲಿ ಚುನಾವಣೆ ಹತ್ತಿರ ಬಂದಾಗ ಸಿಆರ್‌ಪಿಎಫ್‌ನ ಮತ್ತಷ್ಟು ಕಾಯ್‌ಗಳು ಜಿಲ್ಲೆಗೆ ಬರಲಿವೆ. ಸೂಕ್ಷ್ಮ ಮತಗಟ್ಟೆ ಪ್ರದೇಶಗಳು ಹಾಗೂ ಚೆಕ್‌ಪೋಸ್ಟ್‌ಗಳಲ್ಲಿ ಪೊಲೀಸ್ ಜತೆ ಸಿಆರ್‌ಪಿಎಫ್ ನಿಯೋಜನೆ ಮಾಡಲಾಗುವುದು. ಜಿಲ್ಲೆಯ 280 ಮತಗಟ್ಟೆಗಳಲ್ಲಿ ಸಿಎಪಿಎಫ್ ಹಾಗೂ ಸಿಆರ್‌ಪಿಎಫ್ ನಿಯೋಜನೆ ಮಾಡಲಾಗುವುದು ಎಂದರು.
ರೌಡಿಗಳ ಮೇಲೆ ಮತ್ತು ದಬ್ಬಾಳಿಕೆ ಮಾಡುವವರ ಮೇಲೆ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯ ಸುಮಾರು 31 ರೌಡಿ ಶೀಟರ್‌ಗಳನ್ನು ಚುನಾವಣೆ ಸಂದರ್ಭ ಗಡಿಪಾರು ಮಾಡಲು ವ್ಯವಸ್ಥೆ ಮಾಡಲಾಗುತ್ತಿದೆ. ಜಿಲ್ಲಾಧಿಕಾರಿ ವಿಚಾರಣೆ ಬಳಿಕ ಗಡಿಪಾರು ಆದೇಶ ಜಾರಿಯಾಗಲಿದೆ. ಗಡಿಪಾರು ಆದವರು ಯಾವ ಜಿಲ್ಲೆಗೆ ಸೂಚಿಸುತ್ತಾರೋ ಅಲ್ಲಿಗೆ ತೆರಳಬೇಕು ಎಂದರು.
ಜಿಲ್ಲೆಯ ಚೆಕ್‌ಪೋಸ್ಟ್‌ಗಳಲ್ಲಿ ಈಗಾಗಲೇ ಬಿಗಿ ಬಂದೋಬಸ್ತ್ ನಡೆಸಲಾಗಿದ್ದು, ತೀವ್ರ ತಪಾಸಣೆ ನಡೆಯುತ್ತಿದೆ. ಎಲೆಕ್ಷನ್ ಕಮಿಷನ್‌ನ ನಿಯಮದಂತೆ ಕ್ಯಾಶ್, ಲಿಕ್ಕರ್, ಫ್ರೀಭೀಸ್, ಮೌಲ್ಯಯುತ ವಸ್ತುಗಳ ಮೇಲೆ ನಿಗಾ ಇರಿಸಿದ್ದೇವೆ. ಗಾಂಜಾ ಸಾಗಾಟದ ವಿರುದ್ಧವೂ ನಿಗಾ ಇರಿಸಲಾಗಿದೆ. ಸಾರ್ವಜನಿಕರು ಮಾಹಿತಿ ಇದ್ದಲ್ಲಿ ಪೊಲೀಸರಿಗೆ ತಿಳಿಸಿ ಎಂದು ಕೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ನ. 11ರಂದು ಉಚಿತ ಕಣ್ಣಿನ ಪೊರೆ ತಪಾಸಣೆ ಹಾಗೂ ಶಸ್ತ್ರಚಿಕಿತ್ಸಾ ಶಿಬಿರ
Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Dandeli: ಸಾರಿಗೆ ಬಸ್ಸಿನಲ್ಲೇ ಪ್ರಯಾಣಿಕನಿಗೆ ಹೃದಯಾಘಾತ… ಆಸ್ಪತ್ರೆ ಮಾರ್ಗದಲ್ಲಿ ಮೃತ್ಯು
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
MUST WATCH
ಹೊಸ ಸೇರ್ಪಡೆ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Super App: ರೈಲು ಬುಕಿಂಗ್, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.