ತಪ್ಪಿದ congress ಟಿಕೆಟ್: ಅಭಿಮಾನಿಗಳ ಸಭೆ ಕರೆದ ದತ್ತಾ ಮೇಷ್ಟ್ರು
Team Udayavani, Apr 7, 2023, 12:04 PM IST
ಚಿಕ್ಕಮಗಳೂರು: ಕಾಂಗ್ರೆಸ್ ಟಿಕೆಟ್ ಕೈತಪ್ಪಿದ್ದಕ್ಕೆ ಬೇಸರಗೊಂಡರುವ ಹಿರಿಯ ರಾಜಕಾರಣಿ ವೈ.ಎಸ್.ವಿ.ದತ್ತಾ ಅವರು ಅಭಿಮಾನಿಗಳ ಸಭೆ ಕರೆದಿದ್ದಾರೆ.
ಅಭಿಮಾನಿಗಳಿಗೆ ಬಹಿರಂಗ ಪತ್ರ ಬರೆದಿರುವ ವೈ.ಎಸ್.ವಿ.ದತ್ತಾ, ‘ಇಂದು ನನ್ನ-ನಿಮ್ಮ ಆತ್ಮಗೌರವ, ಸ್ವಾಭಿಮಾನಕ್ಕೆ ಅಪಮಾನವಾಗಿದೆ’ ಎಂದಿದ್ದಾರೆ. ಆತ್ಮಗೌರವ ಹಾಗೂ ಸ್ವಾಭಿಮಾನಕ್ಕಾಗಿ ಅಭಿಮಾನಿಗಳ ಸಭೆ ಕರೆದ ವೈ.ಎಸ್.ವಿ.ದತ್ತಾ ಕಡೂರಿನಲ್ಲಿ ಭಾನುವಾರ ಬೆಳಗ್ಗೆ 11 ಗಂಟೆಗೆ ಸೇರುವಂತೆ ತಿಳಿಸಿದ್ದಾರೆ.
ನನ್ನ ಬಳಿ ಹಣ-ಜಾತಿ ಇಲ್ಲದಿದ್ದರೂ ದತ್ತಣ್ಣ ಎಂದು ಕರೆದಿದ್ದೀರಾ. ಆತ್ಮೀಯತೆಯಿಂದ ತಬ್ಬಿಕೊಂಡು ಬೆಳೆಸಿದ್ದೀರಾ, ಪ್ರಸ್ತುತ ರಾಜಕೀಯ ಸ್ಥಿತಿಯಲ್ಲಿ ಒಬ್ಬರ ಜೊತೆ ಒಬ್ಬರಿರಬೇಕು. ನನ್ನ ಜೊತೆ ನೀವು, ನಿಮ್ಮ ಜೊತೆ ನಾನಿರಬೇಕು ಎಂದು ದತ್ತಾ ಅವರು ಪತ್ರ ಬರೆದಿದ್ದಾರೆ.
ಇದನ್ನೂ ಓದಿ:Actress Akanksha Dubey ಪ್ರಕರಣ; ಗಾಜಿಯಾಬಾದ್ ನಲ್ಲಿ ಗಾಯಕ ಸಮರ್ ಸಿಂಗ್ ಬಂಧನ
ವೈ.ಎಸ್.ವಿ ದತ್ತಾ ಅವರು ಇತ್ತೀಚೆಗಷ್ಟೇ ಕಾಂಗ್ರೆಸ್ ಸೇರಿದ್ದರು. ಹೀಗಾಗಿ ಕಡೂರಿನ ಕಾಂಗ್ರೆಸ್ ಟಿಕೆಟ್ ಆಕಾಂಕ್ಷೆಯಾಗಿದ್ದರು. ಕಡೂರಿನ ಕಾಂಗ್ರೆಸ್ ಟಿಕೆಟ್ ದತ್ತಾ ಅವರಿಗೆ ಎಂದು ಹೇಳಲಾಗಿತ್ತು, ಆದರೆ ಕೊನೆಯ ಕ್ಷಣದಲ್ಲಿ ಕೆ.ಎಸ್. ಆನಂದ್ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಹೆಸರು ಘೋಷಿಸಿದೆ.
ದತ್ತಾ ಮೇಷ್ಟ್ರಿಗೆ ಟಿಕೆಟ್ ಕೈ ತಪ್ಪುತ್ತಿದ್ದಂತೆ ಅಭಿಮಾನಿಗಳು ಆಕ್ರೋಶ ವ್ಯಕ್ತ ಪಡಿಸಿದ್ದು, ನಿನ್ನೆ ತಡರಾತ್ರಿವರೆಗೆ ದತ್ತ ಮನೆಯಲ್ಲಿ ಜಮಾಯಿಸಿದ್ದರು. ದತ್ತಾ ಅವರಿಗೆ ಪಕ್ಷೇತರವಾಗಿ ನಿಲ್ಲುವಂತೆ ಅಭಿಮಾನಿಗಳು ಸಲಹೆ ನೀಡಿದ್ದಾರೆ. ಅಭಿಮಾನಿಗಳಿಗೆ ಎರಡು ದಿನ ಅವಕಾಶ ಕೇಳಿರುವ ಅವರು, ಭಾನುವಾರದ ಸಭೆ ಬಳಿಕ ಮುಂದಿನ ತೀರ್ಮಾನ ಪ್ರಕಟ ಮಾಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Chikkamagaluru: 5 ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ
Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.