![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Apr 7, 2023, 11:59 AM IST
ನವದೆಹಲಿ: ಜನಪ್ರಿಯ ಭೋಜ್ ಪುರಿ ನಟಿ ಆಕಾಂಕ್ಷಾ ದುಬೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಗಾಜಿಯಾಬಾದ್ ನ ಚಾರ್ಮ್ಸ್ ಕಾಸ್ಟಲ್ ಸೊಸೈಟಿಯ ಗಾಯಕ ಸಮರ್ ಸಿಂಗ್ ಅವರನ್ನು ಬಂಧಿಸಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:Suyash Sharma: ಆರ್ ಸಿಬಿ ಬ್ಯಾಟರ್ ಗಳನ್ನು ಕಾಡಿದ ನೀಲಕೇಶದ ಚೆಲುವ ಯಾರು?
2023ರ ಮಾರ್ಚ್ 26ರಂದು ಭೋಜ್ ಪುರಿ ನಟಿ ಆಕಾಂಕ್ಷಾ ದುಬೆ ತನ್ನ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು. ಘಟನೆ ಕುರಿತಂತೆ ಸಮರ್ ಸಿಂಗ್ ಸಹೋದರ ಸಂಜಯ್ ಸಿಂಗ್ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿಗೊಳಿಸಿದ್ದಾರೆ.
ಆಕಾಂಕ್ಷಾ ದುಬೆ ಪ್ರಕರಣದ ಕುರಿತು ಗಾಯಕ ಸಮರ್ ಸಿಂಗ್ ವಿರುದ್ಧ ಆರೋಪಿಸಿದ್ದು, ಸಮರ್ ಮತ್ತು ಆತನ ಸಹೋದರ ತಮ್ಮ ಮಗಳ ಸಾವಿಗೆ ಪ್ರಚೋದನೆ ನೀಡಿರುವುದಾಗಿ ಪೋಷಕರು ದೂರು ದಾಖಲಿಸಿದ್ದರು.
ವರದಿಯ ಪ್ರಕಾರ, ಆಕಾಂಕ್ಷಾ ದುಬೆ ಮತ್ತು ಸಮರ್ ಸಿಂಗ್ ಸಂಬಂಧ ಹೊಂದಿದ್ದು, ಆತನೇ ತಮ್ಮ ಮಗಳ ಸಾವಿಗೆ ಕಾರಣ ಎಂದು ಪೋಷಕರು ದೂರಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿಯಲ್ಲಿಯೂ ಉಲ್ಲೇಖವಾಗಿರುವ ಕೆಲವು ಅಂಶಗಳಿಗೆ ಸಂಬಂಧಿಸಿದಂತೆ ವೈದ್ಯಕೀಯ ತಜ್ಞರ ಸಲಹೆ ಪಡೆಯಲು ಆಕಾಂಕ್ಷಾ ತಾಯಿ ಮಧು ದುಬೆ ನಿರ್ಧರಿಸಿರುವುದಾಗಿ ವರದಿ ವಿವರಿಸಿದೆ.
25 ವರ್ಷದ ನಟಿ ಆಕಾಂಕ್ಷಾ ದುಬೆ ಪ್ರಕರಣದ ಕುರಿತು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೂ ಪತ್ರ ಬರೆಯಲಾಗಿದ್ದು, ಆರೋಪಿಗಳಿಗೆ ತಕ್ಕ ಶಿಕ್ಷೆ ನೀಡುವಂತೆ ಮನವಿ ಮಾಡಿಕೊಂಡಿರುವುದಾಗಿ ದುಬೆ ತಾಯಿ ಪರ ವಕೀಲರಾದ ಶಶಾಂಕ್ ಶೇಖರ್ ತ್ರಿಪಾಠಿ ತಿಳಿಸಿದ್ದಾರೆ.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
You seem to have an Ad Blocker on.
To continue reading, please turn it off or whitelist Udayavani.