IPL 2023 ರೀಸ್ ಟೋಪ್ಲೆಗೆ ಗಾಯ: ಆರ್ ಸಿಬಿ ಕ್ಯಾಂಪ್ ಸೇರಿದ ದ.ಆಫ್ರಿಕಾ ಎಡಗೈ ವೇಗಿ
Team Udayavani, Apr 7, 2023, 1:16 PM IST
ಬೆಂಗಳೂರು: ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಹೀನಾಯ ಸೋಲುಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಗಾಯದ ಮೇಲೆ ಬರೆ ಬಿದ್ದಂತಾಗಿದೆ. ಮೊದಲ ಪಂದ್ಯದಲ್ಲಿ ಗಾಯಗೊಂಡ ರೀಸ್ ಟೋಪ್ಲೆ ಅವರು ಸಂಪೂರ್ಣ ಕೂಟದಿಂದಲೇ ಹೊರಬಿದ್ದಿದ್ದಾರೆ.
ಗಾಯದಿಂದ ಚೇತರಿಕೆ ಕಾಣುತ್ತಿರುವ ವೇಗಿ ಜೋಶ್ ಹೇಜಲ್ ವುಡ್ ಅವರು ಇನ್ನೂ ತಂಡಕ್ಕೆ ಸೇರಿಕೊಂಡಿಲ್ಲ. ಇದೀಗ ಟಾಪ್ಲೆ ಕೂಡಾ ಗಾಯದಿಂದ ಕೂಟದಿಂದ ಹೊರಬಿದ್ದಿರುವುದು ತಂಡದ ಹಿನ್ನಡೆಗೆ ಕಾರಣವಾಗಿದೆ. ಹೀಗಾಗಿ ಆರ್ ಸಿಬಿ ಇದೀಗ ಮತ್ತೋರ್ವ ವಿದೇಶಿ ಆಟಗಾರನ ಮೊರೆ ಹೋಗಿದೆ.
ದಕ್ಷಿಣ ಆಫ್ರಿಕಾದ ಅನುಭವಿ ಎಡಗೈ ವೇಗಿ ವೇಯ್ನ್ ಪಾರ್ನೆಲ್ ಅವರನ್ನು ಆರ್ ಸಿಬಿ ಸೇರಿಸಿಕೊಂಡಿದೆ. ಈ ಬಗ್ಗೆ ಇಂದು ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ.
ವೇಯ್ನ್ ಪಾರ್ನೆಲ್ ಅವರು ಈ ಹಿಂದೆಯೂ ಐಪಿಎಲ್ ನಲ್ಲಿ ಆಡಿದ ಅನುಭವ ಹೊಂದಿದ್ದು, ಪುಣೆ ವಾರಿಯರ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಪರವಾಗಿ ಆಡಿದ್ದಾರೆ. 26 ಐಪಿಎಲ್ ಪಂದ್ಯವಾಡಿರುವ ಅವರು 26 ವಿಕೆಟ್ ಪಡೆದಿದ್ದಾರೆ.
1.9 ಕೋಟಿ ರೂ ಗಳಿಗೆ ಆರ್ ಸಿಬಿ ಕ್ಯಾಂಪ್ ಸೇರಿದ್ದ ಟೋಪ್ಲೆ ಅವರು ಮುಂಬೈ ವಿರುದ್ದ ಪಂದ್ಯದಲ್ಲಿ ಭುಜದ ನೋವಿಗೆ ಒಳಗಾಗಿದ್ದರು.
Fearsome with the ball and fearless on the field! We don’t just call you 🔝 lad Topley for nothing. 🙌
Thank you for putting your body on the line and giving your 100%. We will miss you and wish you a speedy recovery, mate. ❤️🩹#PlayBold #ನಮ್ಮRCB #IPL2023 pic.twitter.com/cvqxvA8ap1
— Royal Challengers Bangalore (@RCBTweets) April 7, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ
Eden Gardens; ‘ಬಿ’ ಬ್ಲಾಕ್‌ಗೆ ಜೂಲನ್ ಗೋಸ್ವಾಮಿ ಹೆಸರಿಡಲು ನಿರ್ಧಾರ
PCB; ಚಾಂಪಿಯನ್ಸ್ ಟ್ರೋಫಿಗೆ ಅಧಿಕಾರಿಯ ನೇಮಕ
MUST WATCH
ಹೊಸ ಸೇರ್ಪಡೆ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.