Election ನೀತಿ ಸಂಹಿತೆ ಉಲ್ಲಂಘನೆ;ಸಾಗರ Congress ಪ್ರಮುಖನ ವಿರುದ್ಧ ದೂರು ದಾಖಲು
ಅನುಮತಿ ಇಲ್ಲದೆ ಒಂದೂವರೆ ಸಾವಿರಕ್ಕೂ ಹೆಚ್ಚು ಜನರಿಗೆ ಊಟ...!
Team Udayavani, Apr 7, 2023, 10:29 PM IST
ಸಾಗರ: ಮಾ. 30 ರಂದು ನಗರದಲ್ಲಿ ಕಾಂಗ್ರೆಸ್ ಪಕ್ಷದವರು ನಡೆಸಿದ್ದ ಕಾರ‍್ಯಕರ್ತರ ಸಭೆಯಲ್ಲಿ ಅನುಮತಿ ಇಲ್ಲದೆ ಒಂದೂವರೆ ಸಾವಿರಕ್ಕೂ ಹೆಚ್ಚು ಜನರಿಗೆ ಊಟ ವಿತರಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ನಗರ ಠಾಣಾ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಮಹಾಬಲೇಶ್ವರ ಕೌತಿಯವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಕಳೆದ ಮಾರ್ಚ್ 30 ರಂದು ಸಾಗರದ ಮಹಿಳಾ ಸಮಾಜ ಆವರಣದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ ಆಯೋಜಿಸಲಾಗಿತ್ತು. ಕಾಗೋಡು ತಿಮ್ಮಪ್ಪ, ಬೇಳೂರು ಗೋಪಾಲಕೃಷ್ಣ, ಬಿ.ಆರ್. ಜಯಂತ್ ಸೇರಿದಂತೆ ಹಲವು ಮುಖಂಡರ ನೇತೃತ್ವದಲ್ಲಿ ಸಭೆ ನಡೆಯಿತು. ಈ ಕುರಿತಂತೆ ಕೌತಿಯವರ ಅರ್ಜಿಗೆ ಸಾಗರ ಉಪ ವಿಭಾಗದ ಸಹಾಯ ಆಯುಕ್ತರು ಷರತ್ತುಬದ್ಧ ಅನುಮತಿಯನ್ನು ನೀಡಿದ್ದರು.
ಕಾರ್ಯಕ್ರಮ ನಡೆಯುವಾಗ ಎಎಸ್‌ಟಿ ತಂಡದ ಅಧಿಕಾರಿಗಳು ಭೇಟಿ ನೀಡಿ, ವೀಕ್ಷಣೆ ನಡೆಸಿದಾಗ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವುದು ಕಂಡು ಬಂದಿದೆ. ಸಭೆಯಲ್ಲಿ ಒಂದೂವರೆ ಸಾವಿರಕ್ಕೂ ಹೆಚ್ಚು ಜನರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಚುನಾವಣಾಕಾರಿ ಪಲ್ಲವಿ ಸಾತೇನಹಳ್ಳಿಯವರು ನೋಟಿಸ್ ನೀಡಿದ್ದರು. ಇದಕ್ಕೆ ಕೌತಿಯವರು ನೀಡಿದ್ದ ಮಾಹಿತಿ ಸಮಂಜಸವಾಗಿಲ್ಲದ ಕಾರಣ ನಗರಸಭಾ ಪೌರಾಯುಕ್ತರು ನಗರ ಠಾಣೆಯಲ್ಲಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಎಂಸಿಸಿ ನೋಡಲ್ ಅಧಿಕಾರಿ ದೂರು ನೀಡಿದ್ದು, ಕೌತಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
B. Y. Raghavendra: 10 ವರ್ಷದಲ್ಲಿ ವಕ್ಫ್ ಆಸ್ತಿ ಶೇ.135 ಹೆಚ್ಚಳ
Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ
ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?
Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ
MUST WATCH
ಹೊಸ ಸೇರ್ಪಡೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.