ಖ್ಯಾತ ಸ್ವಾತಂತ್ರ್ಯ ಹೋರಾಟಗಾರ ರಾಜಗೋಪಾಲಾಚಾರಿಯವರ ಮರಿ ಮೊಮ್ಮಗ BJP ಸೇರ್ಪಡೆ
Team Udayavani, Apr 8, 2023, 3:52 PM IST
ಹೊಸದಿಲ್ಲಿ : ಖ್ಯಾತ ಸ್ವಾತಂತ್ರ್ಯ ಹೋರಾಟಗಾರ ಮತ್ತು ಭಾರತದ ಕೊನೆಯ ಗವರ್ನರ್ ಜನರಲ್ ಸಿ. ರಾಜಗೋಪಾಲಾಚಾರಿ ಅವರ ಮರಿ ಮೊಮ್ಮಗ ಸಿ.ಆರ್. ಕೇಶವನ್ ಅವರು ಶನಿವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಕೇಂದ್ರ ಸಚಿವ ವಿಕೆ ಸಿಂಗ್ ಮತ್ತು ಬಿಜೆಪಿ ಮುಖ್ಯ ವಕ್ತಾರ ಅನಿಲ್ ಬಲುನಿ ಅವರ ಸಮ್ಮುಖದಲ್ಲಿ ಅವರು ಪಕ್ಷಕ್ಕೆ ಸೇರ್ಪಡೆಗೊಂಡರು.
ದಕ್ಷಿಣ ಭಾರತದಲ್ಲಿ ತನ್ನ ಅಸ್ತಿತ್ವವನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ ಬಿಜೆಪಿ ದಿನ ನಿತ್ಯ ಎಂಬಂತೆ ಪ್ರಮುಖರ ಪಕ್ಷ ಸೇರ್ಪಡೆ ಮಾಡಿ ಗಮನ ಸೆಳೆಯುತ್ತಿದೆ.
ಈ ಹಿಂದೆ ಕಾಂಗ್ರೆಸ್ನಲ್ಲಿದ್ದ ಕೇಶವನ್, ತಮ್ಮ ಜನಕೇಂದ್ರಿತ ನೀತಿಗಳು ಮತ್ತು ಭ್ರಷ್ಟಾಚಾರ ಮುಕ್ತ ಮತ್ತು ಎಲ್ಲರನ್ನೂ ಒಳಗೊಳ್ಳುವ ಆಡಳಿತದೊಂದಿಗೆ ಭಾರತದಲ್ಲಿ “ಟೆಕ್ಟೋನಿಕ್” ಪರಿವರ್ತನೆಯನ್ನು ತಂದಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದ್ದಾರೆ.
ರಾಷ್ಟ್ರೀಯ ಭದ್ರತೆಗೆ ಪ್ರಾಮುಖ್ಯತೆ ನೀಡಲಾಗಿದೆ ಮತ್ತು ಭಾರತದ ಇತಿಹಾಸ ಮತ್ತು ಸಂಪ್ರದಾಯಗಳನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲಾಗುತ್ತಿದೆ ಎಂದು ತಮಿಳುನಾಡು ಮೂಲದ ಕೇಶವನ್ ಅವರು ಇತ್ತೀಚಿನ ‘ಕಾಶಿ-ತಮಿಳು ಸಮಾಗಮ’ ವನ್ನು ಉಲ್ಲೇಖಿಸಿ ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಿಂಗ್, ದೇಶಕ್ಕೆ ರಾಜಗೋಪಾಲಾಚಾರಿ ಅವರ ಕೊಡುಗೆಯನ್ನು ಉಲ್ಲೇಖಿಸಿದರು ಮತ್ತು ಸ್ವಾತಂತ್ರ್ಯದ ನಂತರ ಅವರನ್ನು ಪಕ್ಕಕ್ಕೆ ತಳ್ಳಲಾಯಿತು ಮತ್ತು ಇತಿಹಾಸದಿಂದ ಅದೃಶ್ಯರಾಗಿದ್ದರು. ಒಂದು ಕುಟುಂಬ ಎಲ್ಲವನ್ನೂ ತಾನೇ ಮಾಡಿದೆ ಎಂದು ಹೇಳಲು ಪ್ರಯತ್ನಿಸಿತು ಎಂದು ಆರೋಪಿಸಿದರು.ಕೇಶವನ್ ಅವರು ಬಿಜೆಪಿ ಮತ್ತು ತಮಿಳುನಾಡು ರಾಜಕೀಯದಲ್ಲಿ ಪ್ರಬಲ ಧ್ವನಿಯಾಗಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್ಐಟಿ ಭೇಟಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
MUST WATCH
ಹೊಸ ಸೇರ್ಪಡೆ
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.