Chhattisgarh ಸ್ಫೋಟಕಗಳ ಸಹಿತ ಇಬ್ಬರು ನಕ್ಸಲೀಯರ ಬಂಧನ
Team Udayavani, Apr 8, 2023, 4:36 PM IST
ಸುಕ್ಮಾ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಇಬ್ಬರು ನಕ್ಸಲೀಯರನ್ನು ಬಂಧಿಸಲಾಗಿದ್ದು, ಅವರಿಂದ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
ತಮ್ಮ ತಲೆಗಳ ಮೇಲೆ ತಲಾ 1 ಲಕ್ಷ ರೂಪಾಯಿ ಬಹುಮಾನವನ್ನು ಹೊತ್ತಿದ್ದ ಮುಚಕ್ ಸುಖರಾಮ್ (28) ಮತ್ತು ಮದ್ವಿ ಕೋಸಾ (30) ಭದ್ರತಾ ಸಿಬಂದಿಗಳನ್ನು ಗುರಿಯಾಗಿಸಲು ಸ್ಫೋಟಕಗಳನ್ನು ಸಂಗ್ರಹಿಸಿದ್ದರು.
ರಾಯ್‌ಪುರದಿಂದ ಸುಮಾರು 400 ಕಿಲೋಮೀಟರ್ ದೂರದಲ್ಲಿರುವ ಕುಕನಾರ್ ಪೊಲೀಸ್ ಠಾಣಾ ವ್ಯಾಪ್ತಿಯ ಕುನ್ನಾ ಗ್ರಾಮದ ಸಮೀಪದ ಬೆಟ್ಟದಲ್ಲಿ ಶುಕ್ರವಾರ ಜಿಲ್ಲಾ ಮೀಸಲು ಪಡೆ ಮತ್ತು ಸ್ಥಳೀಯ ಪೊಲೀಸರ ಜಂಟಿ ತಂಡದಿಂದ ಸುಳಿವಿನ ಮೇರೆಗೆ ಇಬ್ಬರನ್ನು ಬಂಧಿಸಲಾಯಿತು. ಕುಕನಾರ್‌ನಲ್ಲಿ ನಕ್ಸಲೀಯರು ಸುಧಾರಿತ ಸ್ಫೋಟಕ ಸಾಧನಗಳನ್ನು ತಯಾರಿಸುತ್ತಿರುವ ಬಗ್ಗೆ ನಮಗೆ ಮಾಹಿತಿ ಸಿಕ್ಕಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದರು.
ಇಬ್ಬರಿಂದ ಸುಮಾರು 10 ಕಿಲೋಗ್ರಾಂ ತೂಕದ ಟಿಫಿನ್ ಬಾಂಬ್, 12 ಡಿಟೋನೇಟರ್‌ಗಳು, 60 ಕಿಲೋಗ್ರಾಂಗಳಷ್ಟು ಅಮೋನಿಯಂ ನೈಟ್ರೇಟ್, ಸ್ವಿಚ್‌ಗಳು, ಫೈರ್ ಕ್ರ್ಯಾಕರ್‌ಗಳು ಇತ್ಯಾದಿಗಳನ್ನು ವಶಪಡಿಸಿಕೊಳ್ಳಲಾಗಿದೆ. ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿರುವ ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ಐಇಡಿ ತಯಾರಿಸಿರುವುದಾಗಿ ಅವರು ಒಪ್ಪಿಕೊಂಡಿದ್ದಾರೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.