ನೀತಿ ಸಂಹಿತೆ ಉಲ್ಲಂಘನೆ 20.50 ಲಕ್ಷ ಕ್ಕೂ ಹೆಚ್ಚು ನಗದು ವಶ
Team Udayavani, Apr 8, 2023, 5:11 PM IST
ತುಮಕೂರು: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಕೊರಟಗೆರೆ ಹಾಗೂ ತಿಪಟೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿ ಯಲ್ಲಿ ನೀತಿ ಸಂಹಿತೆ ಉಲ್ಲಂಘನೆಯಡಿ ವಿವಿಧ ಪ್ರಕರಣಗಳಲ್ಲಿ ಅಕ್ರಮವಾಗಿ 20.50ಲಕ್ಷ ನಗದು ಸಾಗಿಸುವ ವೇಳೆಯಲ್ಲಿ ವಶಕ್ಕೆ ಪಡೆಯಲಾಗಿದೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ತಿಳಿಸಿದರು.
ಏ.5ರಂದು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆಯಲ್ಲಿ ಚೆಕ್‌ಪೋಸ್ಟ್ ಬಳಿ ಪೊಲೀಸರು ತಪಾಸಣೆ ಮಾಡಿದಾಗ 2 ಪ್ರಕರಣಗಳಲ್ಲಿ 20.50ಲಕ್ಷ ರೂ. ನಗದನ್ನುಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಕೊರಟಗೆರೆ ಕ್ಷೇತ್ರ ವ್ಯಾಪ್ತಿಯ ಕಾಟೇನಹಳ್ಳಿ ಚೆಕ್‌ಪೋಸ್ಟ್‌ನಲ್ಲಿ ಏ. 5ರಂದು ಕೆಎ-06-ಎ- 4597 ಸ್ವಿಫ್ಟ್ ವಾಹನವನ್ನು ನಿಲ್ಲಿಸಿ ತಪಾಸಣೆ ನಡೆಸಿದಾಗ 1.50ಲಕ್ಷ ರೂ. ನಗದು ದೊರೆತಿದ್ದು, ವಾಹನದಲ್ಲಿದ್ದ ರುದ್ರೇಶ್ ಬಿನ್ ಶಿವಣ್ಣ ಅವರನ್ನು ವಿಚಾರಿಸಿದಾಗ ಸಮಂಜಸವಾದ ಉತ್ತರವನ್ನು ನೀಡದೇ ಇರುವುದರಿಂದ ನಿಯೋಜಿತ ಸ್ಥಿರ ಕಣ್ಗಾವಲು ತಂಡದ ಸದಸ್ಯರು ಹಣವನ್ನು ವಶಕ್ಕೆ ಪಡೆದು ಮುಂದಿನ ಕ್ರಮಕ್ಕಾಗಿ ಕೊರಟಗೆರೆ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.
ಅದೇ ರೀತಿ ತಿಪಟೂರು ನಗರ ಮಾಲ್ ಮುಂಭಾಗ ಏ. 5ರ ಬೆಳಿಗ್ಗೆ 11 ಗಂಟೆಗೆ ಒಂದು ಎಟಿಎಂ ವಾಹನವನ್ನು ತಪಾಸಣೆ ನಡೆಸಿದಾಗ ಯಾವುದೇ ಭದ್ರತಾ ಸಿಬ್ಬಂದಿ ಇಲ್ಲದೆ 19ಲಕ್ಷ ರೂ. ಗಳನ್ನು ಸಾಗಿಸುತ್ತಿದ್ದುದು ಕಂಡು ಬಂದಿದ್ದು, ಸರಿಯಾದ ದಾಖಲೆಗಳನ್ನು ಒದಗಿಸದೇ ಇದ್ದುದರಿಂದ ಅನುಮಾನದ ಮೇರೆಗೆ ಸದರಿ ವಾಹನ ಮತ್ತು ಹಣವನ್ನು ಪೊಲೀಸ್ ಠಾಣೆ ವಶಕ್ಕೆ ಪಡೆಯಲಾಗಿದೆ ಎಂದು ಡಾ. ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Koratagere: ಕಂದಾಯ ಇಲಾಖೆ ಸಿಬ್ಬಂದಿ ಸೇರಿ ನಾಲ್ವರ ಮೇಲೆ ಹೆಜ್ಜೇನು ದಾಳಿ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್ ಹೇಳಿದ್ದೇನು?
Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್
Mangaluru: 7 ಕೆರೆ, ಪಾರ್ಕ್ ಅಭಿವೃದ್ಧಿಗೆ ಅಮೃತ 2.0
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.