Karnataka Election ಯುವಕರಿಗೆ ಹೆಚ್ಚಿನ ಸ್ಥಾನ ನೀಡುವಂತೆ ಮನವಿ: ತೇಜಸ್ವಿ ಸೂರ್ಯ
Team Udayavani, Apr 8, 2023, 5:59 PM IST
ಕಲಬುರಗಿ: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಯುವಕರಿಗೆ ಹೆಚ್ಚಿನ ಸ್ಥಾನಗಳಲ್ಲಿ ಸ್ಪರ್ಧಿಸಲು ಅವಕಾಶ ನೀಡುವಂತೆ ಪಕ್ಷದ ವರಿಷ್ಠ ಮಂಡಳಿಗೆ ಮನವಿ ಸಲ್ಲಿಸಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಯುವ ಘಟಕದ ಅಧ್ಯಕ್ಷರು ಹಾಗೂ ಸಂಸದ ತೇಜಸ್ವಿ ಸೂರ್ಯ ತಿಳಿಸಿದರು.
ಡಿಜಿಟಲ್ ಕಾರ್ಯಕರ್ತರ ಸಮ್ಮೇಳನದ ಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಪಕ್ಷದ ವೇದಿಕೆಯಲ್ಲಿ ಇಂತಿಷ್ಟು ಸೀಟುಗಳನ್ನು ಯುವಕರಿಗೆ ನೀಡಬೇಕೆಂದು ವಿನಂತಿಸಲಾಗಿದೆ. ಅದನ್ನು ಬಹಿರಂಗವಾಗಿ ಪ್ರಸ್ತಾಪಿಸುವುದಿಲ್ಲ ಎಂದರು.
ಬಿಜೆಪಿ ಕಳೆದ ವಾರದಿಂದ ಸ್ಪರ್ಧಾ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ಟಿಕೆಟ್ ಯಾರಿಗೆ ನೀಡಬೇಕೆಂಬ ಅಭಿಯಾನದಲ್ಲಿ ಶಕ್ತಿ ಕೇಂದ್ರದ 22 ಸಾವಿರ ಕಾರ್ಯಕರ್ತರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ತದನಂತರ ಜಿಲ್ಲಾ ಹಾಗೂ ರಾಜ್ಯ ಕೋರ್ ಕಮಿಟಿಯಲ್ಲಿ ಚರ್ಚೆಯಾಗಿದೆ. ಈಗ ಏ.10 ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯುವ ಸಂಸದೀಯ ಮಂಡಳಿ ಸಭೆಯಲ್ಲಿ ಚರ್ಚೆಯಾಗಿ ಪಟ್ಟಿ ಅಂತೀಮಗೊಳ್ಳಲಿದೆ ಎಂದು ತೇಜಸ್ವಿ ಸೂರ್ಯ ವಿವರಣೆ ನೀಡಿದರು.
ಇದನ್ನೂ ಓದಿ:Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕಾಂಗ್ರೆಸ್ ಪಕ್ಷ ಬಣಕ್ಕೊಂದು ಟಿಕೆಟ್ ನೀಡಿದ್ದರಿಂದ ಅವರ ಜಗಳ ಬೀದಿಗೆ ಬಂದು ನಿಂತಿದೆ. ಪರಿಣಾಮ ಭಿನ್ನಮತ ಸ್ಪೋಟಗೊಂಡಿದೆ. ಅದೇ ರೀತಿ ಮನೆಯಲ್ಲಿ ಕುಳಿತು ಟಿಕೆಟ್ ಅಂತೀಮಗೊಳಿಸುತ್ತಿದ್ದ ಜೆಡಿಎಸ್ ಪಕ್ಷದಲ್ಲೂ ಭಿನ್ನ ಹಾದಿ ಹಿಡಿದಿದೆ. ಆದರೆ ಬಿಜೆಪಿ ಹಾಗಿಲ್ಲ. ಕೆಳ ಹಂತದ ಕಾರ್ಯಕರ್ತರನ್ನು ಗುರುತಿಸುವ ಪಕ್ಷ ಯಾವುದಾದರೂ ಇದ್ದರೆ ಅದು ಬಿಜೆಪಿ. ಅದಕ್ಕೆ ತಾವೊಬ್ಬರು ಉದಾಹರಣೆ. ತಾವು ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಂಸದನಾಗಿರುವುದೇ ಸಾಕ್ಷಿ ಎಂದು ಹೇಳಿದರು.
ಬಿಜೆಪಿ ಚುನಾವಣೆ ಸಂಬಂಧ ಯಾವುದೇ ರಣತಂತ್ರ ರೂಪಿಸುವುದಿಲ್ಲ. ಯಾಕೆಂದರೆ ಸದಾ ಜನರೊಂದಿಗ ಬಿಜೆಪಿಗೆ ರಣತಂತ್ರ ರೂಪಿಸುವ ಅಗತ್ಯವಿಲ್ಲ. ಕಾಂಗ್ರೆಸ್ ಪಕ್ಷವೇ ರಣತಂತ್ರ ರೂಪಿಸಬೇಕಾಗಿದೆ ಎಂದು ವ್ಯಂಗ್ಯವಾಡಿದರು.
ಸಿದ್ದರಾಮಯ್ಯ ಈ ಹಿಂದೆ ಸಿಎಂ ಆಗಿದ್ದಾಗ ನಂದಿನಿ ಮತ್ತು ಕೆಎಂಎಫ್ ಎಷ್ಟರ ಮಟ್ಟಿಗೆ ಲಾಭದಲ್ಲಿತ್ತು ಎಂಬುದನ್ನು ಕಾಂಗ್ರೆಸ್ ಸ್ಪಷ್ಟ ಪಡಿಸಲಿ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ
Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ
ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ
MUST WATCH
ಹೊಸ ಸೇರ್ಪಡೆ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
BBK11: ಬಿಗ್‌ಬಾಸ್ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ
Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.