ಬಂಟ್ವಾಳ: MISSING CASE; ಬಾಲಕನ ಮೃತದೇಹ ಕೆರೆಯಲ್ಲಿ ಪತ್ತೆ
Team Udayavani, Apr 9, 2023, 7:37 AM IST
ಬಂಟ್ವಾಳ: ಶನಿವಾರ ಮಧ್ಯಾಹ್ನ ನಾಪತ್ತೆಯಾಗಿದ್ದ ಬಿ.ಸಿ.ರೋಡ್ ಸಮೀಪದ ಮಿತ್ತಬೈಲು ನಿವಾಸಿ, ಶಾಲಾ ಬಾಲಕನೋರ್ವನ ಮೃತದೇಹ ಕಳ್ಳಿಗೆ ಗ್ರಾಮದ ಕುಪ್ಪಿಲ ಎಂಬಲ್ಲಿನ ಕೆರೆಯಲ್ಲಿ ಪತ್ತೆಯಾದ ಘಟನೆ ಶನಿವಾರ ತಡರಾತ್ರಿ ನಡೆದಿರುವುದಾಗಿ ವರದಿಯಾಗಿದೆ.
ಸ್ಥಳೀಯ ನಿವಾಸಿ ಅಬ್ದುಲ್ ರಝಾಕ್ ಎಂಬವರ ಪುತ್ರ, ಬಿ.ಸಿ.ರೋಡಿನ ಖಾಸಗಿ ಆಂಗ್ಲ ಮಾಧ್ಯಮ ಶಾಲಾ 8ನೇ ತರಗತಿ ವಿದ್ಯಾರ್ಥಿ ಅಝೀಂ (13) ಮೃತ ಬಾಲಕ ಎಂದು ಗುರುತಿಸಲಾಗಿದೆ.
ಶನಿವಾರ ಮಧ್ಯಾಹ್ನದ ವೇಳೆಗೆ ಪಾಣೆಮಂಗಳೂರು ಅಜ್ಜಿ ಮನೆಗೆ ಬಂದಿದ್ದ ಬಾಲಕ ಅಲ್ಲಿ ತನ್ನ ಸ್ನೇಹಿತರೊಂದಿಗೆ ಇದ್ದುದನ್ನು ಆ ಪರಿಸರದ ಮಂದಿ ಗಮನಿಸಿದ್ದರು. ಆದರೆ ಮಧ್ಯಾಹ್ನದ ಬಳಿಕ ಬಾಲಕ ಹಠಾತ್ ಕಾಣೆಯಾಗಿದ್ದ.
ಬಾಲಕನನ್ನು ಸಂಪರ್ಕಿಸಲು ಮನೆಮಂದಿ ಸಾಕಷ್ಟು ಪ್ರಯತ್ನಿಸಿದ್ದರೂ ಸಫಲರಾಗಿರಲಿಲ್ಲ ಎನ್ನಲಾಗಿದೆ. ಬಾಲಕನ ಕೈಯಲ್ಲಿದ್ದ ಮೊಬೈಲ್ ರಿಂಗಿಣಿಸುತ್ತಿದ್ದರೂ ಕರೆ ಸ್ವೀಕಾರ ಆಗದ ಹಿನ್ನಲೆ ಆತಂಕಗೊಂಡ ಮನೆ ಮಂದಿ ಬಂಟ್ವಾಳ ನಗರ ಠಾಣೆಯಲ್ಲಿ ನಾಪತ್ತೆಯಾದ ಬಗ್ಗೆ ದೂರು ದಾಖಲಿಸಿದ್ದರು.
ಪೊಲೀಸರು ಬಾಲಕನ ಕೈಯಲ್ಲಿದ್ದ ಮೊಬೈಲ್ ಟ್ರೇಸ್ ಮಾಡಿದಾಗ ದೊರೆತ ಮಾಹಿತಿಯಂತೆ ಕಳ್ಳಿಗೆ ಗ್ರಾಮದ ಕೆರೆಯ ಬಳಿ ಹುಡುಕಾಟ ನಡೆಸಿದಾಗ ಕೆರೆಯ ಮೇಲ್ಭಾಗದಲ್ಲಿ ಬಾಲಕ ಧರಿಸಿದ್ದ ವಸ್ತ್ರ, ಪಾದರಕ್ಷೆ ಹಾಗೂ ಮೊಬೈಲ್ ಪತ್ತೆಯಾಗಿದೆ. ಬಳಿಕ ಕೆರೆಯಲ್ಲಿ ಹುಡುಕಾಟ ನಡೆಸಿದಾಗ ಬಾಲಕನ ಮೃತದೇಹ ತಡರಾತ್ರಿ ವೇಳೆ ಪತ್ತೆಯಾಗಿದೆ.
ಮೃತದೇಹವನ್ನು ನೀರಿನಿಂದ ಮೇಲಕ್ಕೆತ್ತಿ ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.