ಗೋಬ್ಯಾಕ್‌ ಅಮುಲ್‌ ಹೋರಾಟಕ್ಕೆ ನಿರ್ಧಾರ


Team Udayavani, Apr 9, 2023, 2:48 PM IST

tdy-16

ಕೋಲಾರ: ಕನ್ನಡಿಗರ ಆಸ್ತಿಯಾದ ನಂದಿನಿಯನ್ನು ಗುಜರಾತಿನ ಮಾರ್ವಾಡಿಗಳ ಅಮುಲ್‌ ಉತ್ಪನ್ನಗಳಿಗೆ ಅಡ ಇಡಲು ಹೊರಟಿರುವ ಕೇಂದ್ರ ಸರ್ಕಾರದ ರೈತ ವಿರೋಧಿ ಧೋರಣೆ ಖಂಡಿಸಿ, ಏ.13ರಂದು ಜಾನುವಾರಗಳ ಸಮೇತ ಸಂಸದರ ಕಚೇರಿ ಮುತ್ತಿಗೆ ಹಾಕಲು ರೈತಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು.

ನಗರದ ಎಪಿಎಂಸಿ ಆವರಣದಲ್ಲಿ ನಡೆದ ರೈತಸಂಘದ ಸಭೆಯಲ್ಲಿ ತಾಲೂಕು ಅಧ್ಯಕ್ಷ ಯಲುವಳ್ಳಿ ಪ್ರಭಾಕರ್‌ ಮಾತನಾಡಿ, ಗೋ ಬ್ಯಾಕ್‌ ಅಮುಲ್‌ ಎಂಬ ಘೋಷಣೆಯೊಂದಿಗೆ ಕನ್ನಡಿಗರ ಆಸ್ತಿ, ರೈತ ಕೂಲಿ ಕಾರ್ಮಿಕರ ಸ್ವಾಭಿಮಾನದ ಬದುಕು ಕಲ್ಪಿಸಿ ಕೊಟ್ಟಿರುವ ನಂದಿನಿ ಹಾಲಿಗೆ ಪರ್ಯಾಯವಾಗಿ, ಗುಜರಾತಿನ ಅಮುಲ್‌ ಹಾಲಿನ ಉತ್ಪನ್ನಗಳ ಮಾರಾಟಕ್ಕೆ ಮಾರುಕಟ್ಟೆ ಒದಗಿಸಲು ಹೊರಟಿರುವ ಆದೇಶ ವಾಪಸ್‌ ಪಡೆಯದೇ ಇದ್ದರೆ, ಮತ ಕೇಳಲು ಬರುವ ಬಿಜೆಪಿ ನಾಯಕರಿಗೆ ಗ್ರಾಮೀಣ ಪ್ರದೇಶಗಳಲ್ಲಿ ಪೊರಕೆ ಚಳುವಳಿ ಮಾಡುವ ಎಚ್ಚರಿಕೆಯನ್ನು ಜನಪ್ರತಿನಿ ಧಿಗಳಿಗೆ ನೀಡಿದರು.

ದೇಶದಲ್ಲಿನ ಬಹಳಷ್ಟು ಕೆಟ್ಟು ಕಣ್ಣುಗಳು ಕರ್ನಾಟಕದ ಮೇಲೆಯೇ ಬೀಳುತ್ತಿರುವುದು ವಿಪರ್ಯಾಸ. ಬೆಳಗಾವಿ ಮೇಲೆ ಮಹಾರಾಷ್ಟ್ರದ ಕಾಕದೃಷ್ಠಿ, ಅದು ಭೀಕರತೆ ಪಡೆಯುವ ಸಮಯದಲ್ಲಿ ಮತ್ತೆ ನಮ್ಮ ರಾಜ್ಯದ ಹೆಮ್ಮೆಯ ನಂದಿನಿ ಹಾಲಿಗೆ ಸಂಬಂಧಿಸಿದಂತೆ ಕೆಲವರ ವಕ್ರದೃಷ್ಠಿ ಬೀಳುತ್ತಲೇ ಬಂದಿದೆ ಎಂದರು.

ಸರ್ಕಾರದ ವಿರುದ್ಧ ಆಕ್ರೋಶ: ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ, ಕೋಟ್ಯಾಂತರ ಗ್ರಾಮೀಣ ಪ್ರದೇಶದ ರೈತಾಪಿ ಕುಟುಂಬಗಳಿಗೆ ಸಾಂಕ್ರಾಮಿಕ ರೋಗಗಳು ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ಆರ್ಥಿಕವಾಗಿ ಸಂಸಾರದ ಕೈ ಹಿಡಿದ ಏಕೈಕ ಉದ್ಯಮ ಹೈನುಗಾರಿಕೆ. ಅಂತಹ ಉದ್ಯಮವನ್ನೇ ಹೊರ ರಾಜ್ಯದವರು ಕಿತ್ತುಕೊಳ್ಳಲು ಹೊರಟಿರುವುದು ದುರಾದೃಷ್ಟಕರ. ಕೇಂದ್ರ ಸರ್ಕಾರದ ಆದೇಶವನ್ನು ತಿರಸ್ಕರಿಸದೆ ಅವರ ಮಾತಿಗೆ ಬೆನ್ನೆಲುಬಾಗಿ ರಾಜ್ಯದ ರೈತರೇ ಅಮುಲ್‌ ಉತ್ಪನ್ನಗಳನ್ನು ಬಯಸಿದ್ದಾರೆಂದು ಹೇಳಿಕೆ ನೀಡುತ್ತಿರುವುದು ನೋಡಿದರೆ, ಮುಂದಿನ ದಿನಗಳಲ್ಲಿ ಕರ್ನಾಟಕವನ್ನೇ ಮಹಾರಾಷ್ಟ್ರಕ್ಕೆ ಮಾರಾಟ ಮಾಡುವ ಕಾಲ ದೂರವಿಲ್ಲವೆಂದು ಏಕ ನಿರ್ಣಯ ತೆಗೆದುಕೊಳ್ಳು ತ್ತಿರುವ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಂದಿನಿ ಉಳಿಸಲು ಏಕೆ ಮನಸ್ಸು ಮಾಡುತ್ತಿಲ್ಲ: ಯಾವ ರಾಜಕಾರಣಿಯೂ ಹಸುಗಳನ್ನು ಸಾಕಾಣಿಕೆ ಮಾಡಿ ಸಗಣಿ, ಗಂಜಲ ಎತ್ತಿಲ್ಲ. ಆದರೂ ಅವರಿಗೆ ಪ್ರತಿದಿನ ಪೌಷ್ಟಿಕ ಹಾಲು ಕೊಡುವ ಕರ್ನಾಟಕದ ನಂದಿನಿಯನ್ನು ಉಳಿಸಿಕೊಳ್ಳಲು ಏಕೆ ಮನಸ್ಸು ಮಾಡುತ್ತಿಲ್ಲ ಎಂಬುದು ಕನ್ನಡಿಗರ ಪ್ರಶ್ನೆ. ಭಾಷೆಯಿಂದ ಹಿಡಿದು ಆಹಾರದವರೆಗೂ ಕರ್ನಾಟಕವನ್ನೇ ಗುರಿಯಾಗಿಸಿಕೊಂಡಿರುವುದಕ್ಕೆ ಕಾರಣವಾದರೂ ಏನು. ಹಿರಿಯರು ಕಟ್ಟಿ ಬೆಳೆಸಿದಂತಹ ನಂದಿನಿಯನ್ನೇ ಉಳಿಸಿಕೊಳ್ಳಲಾಗದ ಜನಪ್ರತಿನಿಧಿ ಗಳಿಗೆ ಮಾನ ಮರ್ಯಾದೆ ಇದೆಯೇ? ಇವು ಇದ್ದರೆ ಕೂಡಲೇ ಅಮುಲ್‌ ಉತ್ಪನ್ನಗಳನ್ನು ಏಕಪಕ್ಷಿಯವಾಗಿ ಕನ್ನಡಿಗರ ಸ್ವಾಭಿಮಾನ ರೈತಾಪಿ ವರ್ಗದ ಜೀವನ ಉಳಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಇಲ್ಲವಾದರೆ ಕನ್ನಡಿಗರ ಆಸ್ತಿಯನ್ನು ಉಳಿಸಲು ಕನ್ನಡಿಗರೇ ಕಾನೂನನ್ನು ಕೈಗೆತ್ತಿಕೊಳ್ಳಬೇಕಾದ ದಿನಗಳು ದೂರವಿಲ್ಲವೆಂದು ರಾಜಕಾರಣಿಗಳಿಗೆ ಎಚ್ಚರಿಕೆಯ ಸಂದೇಶ ರವಾನಿಸಿದರು.

ನಂದಿನಿ ಉಳಿವಿಗಾಗಿ ನಮ್ಮ ಹೋರಾಟ: 24 ಗಂಟೆಯಲ್ಲಿ ಕನ್ನಡಿಗರ ನಂದಿನಿಯನ್ನು ನಿರ್ಲಕ್ಷ್ಯ ಮಾಡಿ ಅಮುಲ್‌ ಉತ್ಪನ್ನಗಳ ಮಾರಾಟಕ್ಕೆ ಅವಕಾಶ ನೀಡಿರುವ ಆದೇಶವನ್ನು ವಾಪಸ್‌ ಪಡೆಯದೇ ಇದ್ದರೆ, ಜಾನುವಾರುಗಳ ಸಮೇತ ಸಂಸದ ಕಚೇರಿ ಏ.13ರಂದು ಮುತ್ತಿಗೆ ಹಾಕಿ ನ್ಯಾಯ ಪಡೆದುಕೊಳ್ಳುತ್ತೇವೆ. ನಮ್ಮ ಹೋರಾಟ ನಮ್ಮ ಕನ್ನಡಿಗರ ಆಸ್ತಿಯಾದ ನಂದಿನಿಯ ಉಳಿವಿಗಾಗಿ ಎಂದು ಹೇಳಿದರು.

ರಾಜ್ಯ ಪ್ರ.ಕಾ. ಫಾರೂಖ್‌ ಪಾಷ, ರಾಜ್ಯ ಕಾರ್ಯಾಧ್ಯಕ್ಷ ಬಂಗಾರಿ ಮಂಜು, ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್‌, ಹೆಬ್ಬಣಿ ಆನಂದರೆಡ್ಡಿ, ಭಾಸ್ಕರ್‌, ರಾಜೇಶ್‌, ಆದಿಲ್‌ ಪಾಷ, ವಿಜಯ್‌ ಪಾಲ್‌, ಜುಬೇರ್‌ ಪಾಷ, ಪದ್ಮಘಟ್ಟ ಧರ್ಮ, ನಂಗಲಿ ನಾಗೇಶ್‌, ಗಿರೀಶ್‌, ರಾಮಸಾಗರ ವೇಣು, ಮಾಸ್ತಿ ವೆಂಕಟೇಶ್‌, ಯಲ್ಲಣ್ಣ, ಹರೀಶ್‌ ಇದ್ದರು.

ಟಾಪ್ ನ್ಯೂಸ್

vikr

Naxal: ಸರ್ಕಾರಿ ಬಸ್‌ ಅಡ್ಡ ಹಾಕಿ ಬೆಂಕಿ ಹಚ್ಚಿ ಕರಪತ್ರ ಹಂಚಿದ್ದ ವಿಕ್ರಂಗೌಡ ಮತ್ತು ತಂಡ!

Bar-Associatin

Wine Merchants: ನಾಳೆಯ ಮದ್ಯ ಮಾರಾಟ ಬಂದ್‌ ನಿರ್ಧಾರ ವಾಪಸ್‌ ಪಡೆದ ಅಸೋಸಿಯೇಷನ್‌

vital

Vitla: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

IFFI Goa 2024: ಕೋಟ ಫ್ಯಾಕ್ಟರಿಯಿಂದ ಬೊಮಾನ್‌ ಇರಾನಿವರೆಗೆ

IFFI Goa 2024: ಕೋಟ ಫ್ಯಾಕ್ಟರಿಯಿಂದ ಬೊಮಾನ್‌ ಇರಾನಿವರೆಗೆ

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

MUST WATCH

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

ಹೊಸ ಸೇರ್ಪಡೆ

Mahaveera Hanuma: ಆಲ್ಬಂನಲ್ಲಿ ಹನುಮ ಗಾನ

Mahaveera Hanuma: ಆಲ್ಬಂನಲ್ಲಿ ಹನುಮ ಗಾನ

Tribanadhari Barbarik: ತ್ರಿಬಾಣಧಾರಿ ಬಾರ್ಬರಿಕದಲ್ಲಿ ವಸಿಷ್ಠ

Tribanadhari Barbarik: ತ್ರಿಬಾಣಧಾರಿ ಬಾರ್ಬರಿಕದಲ್ಲಿ ವಸಿಷ್ಠ

vikr

Naxal: ಸರ್ಕಾರಿ ಬಸ್‌ ಅಡ್ಡ ಹಾಕಿ ಬೆಂಕಿ ಹಚ್ಚಿ ಕರಪತ್ರ ಹಂಚಿದ್ದ ವಿಕ್ರಂಗೌಡ ಮತ್ತು ತಂಡ!

Bar-Associatin

Wine Merchants: ನಾಳೆಯ ಮದ್ಯ ಮಾರಾಟ ಬಂದ್‌ ನಿರ್ಧಾರ ವಾಪಸ್‌ ಪಡೆದ ಅಸೋಸಿಯೇಷನ್‌

vital

Vitla: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.