ಪ್ರಧಾನಿ Modi ಸಂಚಾರ; ಬಂದ್ ಆಗಿದ್ದ ಮೈಸೂರಿನ ಪ್ರಮುಖ ರಸ್ತೆಗಳು
ನೀತಿ ಸಂಹಿತೆ ಎಫೆಕ್ಟ್ ; ನಾಯಕರು ಕಾಣಿಸಿಕೊಳ್ಳಲಿಲ್ಲ...
Team Udayavani, Apr 9, 2023, 5:05 PM IST
ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರ ನಗರ ಸಂಚಾರದಿಂದ ನಗರದ ಹೃದಯ ಭಾಗ ಸೇರಿದಂತೆ ಪ್ರಮುಖ ರಸ್ತೆಗಳು ಬಂದ್ ಆಗಿದ್ದವು. ಸತತ ಆರು ಗಂಟೆಗಳ ಕಾಲ ಮೈಸೂರು ನಗರಕ್ಕೆ ಸಂಪರ್ಕ ಕಲ್ಪಿಸುವ ಹೆದ್ದಾರಿ ಕೂಡ ಬಂದ್ ಆಗಿದ್ದು, ವಾಹನ ಸವಾರರು ಪರ್ಯಾಯ ಮಾರ್ಗದಲ್ಲಿ ಸಂಚರಿಸುವ ಮೂಲಕ ಪರದಾಡುವಂತಾಯಿತು. ಭಾನುವಾರವಾಗಿದ್ದರಿಂದ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಮೈಸೂರಿನತ್ತ ಆಗಮಿಸಿದ್ದು, ಬದಲಿ ಮಾರ್ಗದಲ್ಲಿ ಸಂಚರಿಸಲು ಪರದಾಡುವಂತಾಯಿತು.
ಮುಂಜಾನೆ 6 ಗಂಟೆಯಿಂದ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಿದ ಪೊಲಿಸರು, ಹುಣಸೂರು ಮಾರ್ಗವಾಗಿ ಮೈಸೂರು ನಗರದ ಕಡೆ ಬರುವ ವಾಹನಗಳಿಗೆ ನಿರ್ಬಂಧ ವಿಧಿಸಿ ಪರ್ಯಾಯ ಮಾರ್ಗದಲ್ಲಿ ಸಂಚರಿಸುವ ವ್ಯವಸ್ಥೆ ಮಾಡಿದ್ದರು.ವೇದಿಕೆ ಕಾರ್ಯಕ್ರಮ ವಿದ್ದ ಮುಕ್ತ ವಿವಿಯ ಘಟಿಕೋತ್ಸವ ಭವನ ಸಂಪರ್ಕಿಸುವ ರಸ್ತೆಗಳಲ್ಲಿ ಸಾರ್ವಜನಿಕರ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿತ್ತು.
ಇತ್ತ ಪ್ರಧಾನಿ ಮೋದಿ ಅವರು ಹೆಲಿಕಾಪ್ಟರ್‌ನಲ್ಲಿ ಬಂದಿಳಿದ ನಗರದ ಒವೆಲ್ ಮೈದಾನದಲ್ಲಿ ಸುತ್ತಲಿನ ಎಲ್ಲಾ ರಸ್ತೆಗಳನ್ನು ಬಂದ್ ಮಾಡಲಾಗಿತ್ತು. ಮೆಟ್ರೋಪೋಲ್ ವೃತ್ತ, ಡಿಸಿ ಕಚೇರಿ, ಕೌಟಿಲ್ಯ ವೃತ್ತ ಮುಡಾ ಜಂಕ್ಷನ್, ರಾಮ ಸ್ವಾಮಿ ವೃತ್ತ ವ್ಯಾಪ್ತಿಯಲ್ಲಿನ ರಸ್ತೆಗಳಲ್ಲಿ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿತ್ತು.
ಸಾರ್ವಜನಿಕ ವೀಕ್ಷಣೆಗೆ ಅವಕಾಶ
ಹೆಲಿಕಾಪ್ಟರ್ ಮೂಲಕ ಒವೆಲ್ ಮೈದಾನಕ್ಕೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ನೋಡಲು ಜಿಲ್ಲಾಧಿಕಾರಿ ಕಚೇರಿ ಬಳಿ ಅಳವಡಿಸಲಾಗಿದ್ದ ಬ್ಯಾರಿಕೇಡ್ ಬಳಿ ನೂರಾರು ಮಂದಿ ಬಿಜೆಪಿ ಕಾರ್ಯಕರ್ತರು ಮತ್ತು ಮೋದಿ ಅಭಿಮಾನಿಗಳು ನೆರೆದಿದ್ದದ್ದು ಕಂಡು ಬಂತು. ಅಲ್ಲದೇ ಘಟಿಕೋತ್ಸವ ಭವನದ ಎದುರಿನ ಹುಣಸೂರು ರಸ್ತೆ ಬಳಿಕ ಕೂಡ ಜನ ನೆರೆದಿದ್ದು, ಮೋದಿ ಅವರು ಕಾರಿನಲ್ಲಿ ಸಂಚರಿಸಿದ್ದನ್ನು ಕಣ್ತುಂಬಿ ಕೊಂಡು ಸಂತಸ ಪಟ್ಟರು.
ನೀತಿ ಸಂಹಿತೆ ಎಫೆಕ್ಟ್
ಪ್ರಧಾನಿ ಮೋದಿ ಅವರ ಕಾರ್ಯಕ್ರಮದ ವೇಳೆ ಬಿಜೆಪಿಯ ನಾಯಕರು ಮತ್ತು ಮುಖಂಡರು ಚುನಾವಣೆ ನೀತಿ ಸಂಹಿತೆ ಹಿನ್ನಲೆಯಲ್ಲಿ ಕಾಣಿಸಿಕೊಳ್ಳಲಿಲ್ಲ. ಶನಿವಾರ ರಾತ್ರಿ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಆಗಮಿಸಿದ ಪ್ರದಾನಿ ಅವರನ್ನು ಸ್ವಾಗತಿಸಲು ಮೇಯರ್ ಶಿವಕುಮಾರ್ ಅನುಮತಿ ಕೇಳಿದರೂ ಜಿಲ್ಲಾಡಳಿತ ನೀತಿ ಸಂಹಿತೆ ಹಿನ್ನಲೆಯಲ್ಲಿ ನಿರಾಕರಿಸಿದೆ.
ಪ್ರಧಾನಿ ಆಗಮನದ ಹಿನ್ನಲೆಯಲ್ಲಿ ಎಲ್ಲಿಯೂ ಬಿಜೆಪಿ ಪಕ್ಷದ ಬಾವುಟಗಳು ಹಾರಾಡಲಿಲ್ಲ.ನಗರದ ರಸ್ತೆಗಳೇಲ್ಲಾ ಫ್ಲೆಕ್ಸ್ ಮತ್ತು ಕಟೌಟ್ ಮುಕ್ತವಾಗಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.