16ನೇ ಹಣಕಾಸು ಆಯೋಗ ರಚನೆ ಪ್ರಕ್ರಿಯೆ ಆರಂಭ
Team Udayavani, Apr 10, 2023, 6:48 AM IST
ಹೊಸದಿಲ್ಲಿ: ಈ ವರ್ಷದಲ್ಲೇ ಕೇಂದ್ರ ಸರಕಾರವು 16ನೇ ಹಣಕಾಸು ಆಯೋಗವನ್ನು ರಚಿಸುವ ನಿರೀಕ್ಷೆಯಿದೆ. ಈಗಾಗಲೇ ಆಯೋಗ ರಚನೆಯ ಕುರಿತ ಪ್ರಕ್ರಿಯೆ ಆರಂಭವಾಗಿದ್ದು, ಆಯೋಗದ ಸದಸ್ಯರು ಮತ್ತು ಉಲ್ಲೇಖಿತ ನಿಯಮಗಳ ಬಗ್ಗೆ ಚರ್ಚೆಗಳು ನಡೆದಿವೆ ಎಂದು ಹೆಸರು ಹೇಳಲು ಇಚ್ಛಿಸದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕೇಂದ್ರ ಮತ್ತು ರಾಜ್ಯ ಸರಕಾರಗಳ ನಡುವಿನ ಆದಾಯ ಹಂಚಿಕೆಯ ಸೂತ್ರವನ್ನು ಈ ಆಯೋಗ ಶಿಫಾರಸು ಮಾಡಲಿದೆ. ಹಣಕಾಸು ಆಯೋಗ ಎನ್ನುವುದು ಕೇಂದ್ರ-ರಾಜ್ಯಗಳ ಹಣಕಾಸು ಸಂಬಂಧದ ಕುರಿತು ಸಲಹೆ ನೀಡುವ ಸಾಂವಿಧಾನಿಕ ಸಂಸ್ಥೆಯಾಗಿದೆ.
2026ರ ಎಪ್ರಿಲ್ 1ರಿಂದ ಐದು ವರ್ಷಗಳ ಕಾಲ ಕೇಂದ್ರ ಮತ್ತು ರಾಜ್ಯ ಸರಕಾರಗಳ ನಡುವೆ ತೆರಿಗೆ ಮೊತ್ತವು ಯಾವ ಅನುಪಾತದಲ್ಲಿ ಹಂಚಿಕೆಯಾಗಬೇಕು ಎಂಬುದನ್ನು ಈ ಆಯೋಗವು ತಿಳಿಸಲಿದೆ.
ಈ ಹಿಂದಿನ ಹಣಕಾಸು ಆಯೋಗವು 2020ರ ನವೆಂಬರ್ 9ರಂದು ತನ್ನ ವರದಿಯನ್ನು ಸಲ್ಲಿಸಿತ್ತು. 2021-22ರಿಂದ 2025-26ರ ವರೆಗಿನ ಒಟ್ಟು 5 ಹಣಕಾಸು ವರ್ಷಗಳ ವರದಿಯನ್ನು ರಾಷ್ಟ್ರಪತಿಯವರಿಗೆ ಹಸ್ತಾಂತರಿಸಿತ್ತು. ಎನ್.ಕೆ.ಸಿಂಗ್ ನೇತೃತ್ವದ 15ನೇ ಹಣಕಾಸು ಆಯೋಗವು ತೆರಿಗೆ ಹಂಚಿಕೆ ಅನುಪಾತವನ್ನು ಶೇ.42ರಲ್ಲಿಟ್ಟಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Sambhal: ಮಸೀದಿ ಸರ್ವೇ ವಿರೋಧಿಸಿ ಗಲಾಟೆ: ಅಶ್ರುವಾಯು ಸಿಡಿಸಿದ ಪೊಲೀಸರು
Varanasi: ಕುಟುಂಬಿಕರ ಎದುರಿಗೆ ಪೊಲೀಸ್ ಅಧಿಕಾರಿಗೆ ಥಳಿಸಿದ ಗುಂಪು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.