Perne Tragedy:ಪೆರ್ನೆ ಗ್ಯಾಸ್ ಟ್ಯಾಂಕರ್ ದುರಂತ-ಹತ್ತು ವರ್ಷ ಸಂದರೂ ಮಾಸದ ಕಹಿ ನೆನಪು
Team Udayavani, Apr 10, 2023, 7:56 AM IST
ಉಪ್ಪಿನಂಗಡಿ: ಸಮೀಪದ ಪೆರ್ನೆಯಲ್ಲಿ 2013 ಎಪ್ರಿಲ್ 9ರಂದು ಅಡುಗೆ ಅನಿಲ ಸಾಗಾಟ ಮಾಡುತ್ತಿದ್ದ ಟ್ಯಾಂಕರ್ ಅಪಘಾತಕ್ಕೀಡಾಗಿ ಅನಿಲ ಸೋರಿಕೆಯೊಂದಿಗೆ ಅಗ್ನಿ ಅನಾಹುತ ಸಂಭವಿಸಿದ ಭೀಕರ ಘಟನೆಯಿಂದ ಹಲವು ಕುಟುಂಬಗಳಿಗೆ ಸೇರಿದ 13 ಮಂದಿ ಸಾವನ್ನಪ್ಪಿ ಹಲವು ಮಂದಿ ಗಾಯಗೊಂಡ ಘಟನೆಗೆ 10 ವರ್ಷ ಸಂದರೂ ಅದರ ಕಹಿ ನೆನಪು ಇನ್ನೂ ಅಚ್ಚಳಿಯದೆ ಉಳಿದಿದೆ.
ಮಂಗಳೂರಿನಿಂದ ಬೆಂಗಳೂರಿನತ್ತ ಅನಿಲ ಸಾಗಿಸುತ್ತಿದ್ದ ಟ್ಯಾಂಕರ್ ಪೆರ್ನೆ ತಿರುವಿನಲ್ಲಿ ಮಗುಚಿ ಬಿದ್ದಿದ್ದು, ಅನಿಲ ಸೋರಿಕೆ ಆರಂಭವಾಗಿ ಅಗ್ನಿ ಸ್ಪರ್ಶವಾಗಿತ್ತು. ಧಗಧಗಿಸಲಾರಂಭಿಸಿದನ ಬೆಂಕಿಯ ಕೆನ್ನಾಲಗೆ ಪರಿಸರದಾದ್ಯಂತ ವ್ಯಾಪಿಸಿ ಮನೆ ಅಂಗಡಿಯೊಳಗಿದ್ದ ಜನರೆಲ್ಲಾ ಬೆಂಕಿಗೆ ಸಿಲುಕಿದರು. ಮಹಿಳೆ, ಮಕ್ಕಳನ್ನು ಒಳಗೊಂಡಂತೆ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದರೆ, ಗಾಯಾಳುಗಳ ಪೈಕಿ ನಾಲ್ವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು.
ಘಟನೆಯಲ್ಲಿ ಸಿಲುಕಿ ಮೈಯಲ್ಲಿದ್ದ ಬಟ್ಟೆ ಬರೆಯೆಲ್ಲಾ ಸುಟ್ಟು, ಮೈ ಚರ್ಮ ಸುಟ್ಟು ಜೀವ ಉಳಿಸಲು ಯುವಕನೋರ್ವ ಹೆದ್ದಾರಿಯಲ್ಲಿ ಓಡೋಡಿ ಬರುತ್ತಿರುವ ಹೃದಯ ವಿದ್ರಾವಕ ಘಟನೆಯು ವೀಡಿಯೋ ಚಿತ್ರೀಕರಣದಲ್ಲಿ ಸೆರೆಯಾಗಿದ್ದು, ಮನ ಕಲಕುವಂತಿತ್ತು.
ಗ್ರಾಮದ ದೈವವೊಂದರ ಆರಾಧನೆ ನಿಂತಿರುವುದರಿಂದ ಸ್ವಲ್ಪ ಸಮಯದಲ್ಲೇ ಗ್ರಾಮದಲ್ಲಿ ಭೀಕರ ಅನಾಹುತವೊಂದು ಸಂಭವಿಸಲಿದೆ ಎಂದು ಪ್ರಶ್ನಾ ಚಿಂತನೆಯಲ್ಲಿ ವ್ಯಕ್ತಗೊಂಡ ಎಚ್ಚರಿಕೆಯ ಬೆನ್ನಲ್ಲೇ ಈ ಅವಘಡ ಸಂಭವಿಸಿತ್ತು!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.