ಮಣಿಪಾಲದ ಡಾ| ಟಿಎಂಎ ಪೈ ಪಾಲಿಟೆಕ್ನಿಕ್‌ – ಮುಂಬಯಿ ದೇವು ಟೂಲ್ಸ್‌ ಪ್ರೈ.ಲಿ. ಒಡಂಬಡಿಕೆ

Team Udayavani, Apr 10, 2023, 6:55 AM IST

ಮಣಿಪಾಲದ ಡಾ| ಟಿಎಂಎ ಪೈ ಪಾಲಿಟೆಕ್ನಿಕ್‌ – ಮುಂಬಯಿ ದೇವು ಟೂಲ್ಸ್‌ ಪ್ರೈ.ಲಿ. ಒಡಂಬಡಿಕೆ

ಮಣಿಪಾಲ: ಮಣಿಪಾಲದ ಡಾ| ಟಿಎಂಎ ಪೈ ಪಾಲಿಟೆಕ್ನಿಕ್‌ನ ಮೆಕ್ಯಾನಿಕಲ್‌ ಎಂಜಿನಿಯರಿಂಗ್‌ ವಿಭಾಗದೊಂದಿಗೆ ತಿಳಿವಳಿಕೆ ಒಡಂಬಡಿಕೆಗೆ ಮುಂಬಯಿಯ ದೇವು ಟೂಲ್ಸ್‌ ಪ್ರೈ.ಲಿ. ಸಹಿ ಹಾಕಿತು.

ದೇವು ಟೊಲ್ಸ್ ಪ್ರೈ.ಲಿ.ನ ಆಡಳಿತ ನಿರ್ದೇಶಕ ದೇವರಾಯ ಮಂಜುನಾಥ ಶೇರಿಗಾರ್‌ ಮಾತನಾಡಿ, ಪ್ರತಿಯೊಬ್ಬನಿಗೂ ಸಮಯ ಅಮೂಲ್ಯವಾದುದು. ಅದನ್ನು ಪರಿಣಾಮಕಾರಿಯಾಗಿ ಬಳಸುವುದು ಮುಖ್ಯ. ಕಠಿನ ಪರಿಶ್ರಮ ಮತ್ತು ಸಂಘಟಿತರಾಗುವ ಮೂಲಕ ಇದನ್ನು ಸಾಧಿಸಬಹುದು ಎಂದರು.

ಕಾಲೇಜಿನ ಉಪಪ್ರಾಂಶುಪಾಲರು ಮತ್ತು ಮೆಕ್ಯಾನಿಕಲ್‌ ಮತ್ತು ಮೆಕಾ ಟ್ರಾನಿಕ್ಸ್ ವಿಭಾಗದ ಮುಖ್ಯಸ್ಥ ಡೆರಿಕ್‌ ಮಸ್ಕರೇನ್ಹಸ್‌ ಅವರು ಒಡಂಬಡಿಕೆಗೆ ಸಹಿ ಹಾಕಿದ ಬಗ್ಗೆ ಸಂತೋಷ ವ್ಯಕ್ತಪಡಿಸಿದರು.

ಮಣಿಪಾಲದ ಎಂಐಟಿಯ ಜಂಟಿ ನಿರ್ದೇಶಕ ಡಾ| ಸೋಮಶೇಖರ್‌ ಭಟ್‌ ಅವರು ಒಡಂಬಡಿಕೆಗೆ ಸಹಿ ಹಾಕಿದ್ದಕ್ಕಾಗಿ ಕಾಲೇಜಿಗೆ ಅಭಿನಂದನೆ ಸಲ್ಲಿಸಿ, ಪ್ರಸ್ತುತ ಸಮರ್ಥ ಮತ್ತು ನುರಿತ ಡಿಪ್ಲೊಮಾದಾರರನ್ನು ಉತ್ಪಾ ದಿಸುವುದು ಮುಖ್ಯವಾಗಿದೆ. ಇದರಿಂದಾಗಿ ಅವರು ಉದ್ಯಮದ ನಿರಂತರ ಬೇಡಿಕೆಗಳನ್ನು ಪೂರೈಸಲು ಸಾಧ್ಯವಾಗುತ್ತದೆ ಎಂದರು.

ಸ್ಕಿಲ್‌ ಡೆವಲಪ್‌ಮೆಂಟ್‌ ಸೆಂಟರ್‌ನ ಅಧ್ಯಕ್ಷ ಬ್ರಿ| ಡಾ| ಎಸ್‌.ಎಸ್‌. ಪಾಬ್ಲಾ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಟಿ. ನರೇಂದ್ರ ಪೈ ಅವರು ದೇವರಾಯ ಮಂಜುನಾಥ್‌ ಅವರನ್ನು ಅಭಿನಂದಿಸಿದರು.

ಪ್ರಸ್ತುತ ಡಾ| ಟಿಎಂಎ ಪೈ ಪಾಲಿಟೆಕ್ನಿಕ್‌ 8 ವಿವಿಧ ಎಂಜಿನಿಯರಿಂಗ್‌ ವಿಭಾಗಗಳಲ್ಲಿ 3 ವರ್ಷಗಳ ಕೌಶಲಾಧಾರಿತ ಡಿಪ್ಲೊಮಾ ಕಾರ್ಯಕ್ರಮಗಳನ್ನು ನೀಡುತ್ತಿದೆ.

ಮೆಕ್ಯಾನಿಕಲ್‌ ಮತ್ತು ಮೆಕಟ್ರಾನಿಕ್‌ ಎಂಜಿನಿಯರಿಂಗ್‌ ವಿಭಾಗದ ವಿದ್ಯಾರ್ಥಿಗಳು, ಅಧ್ಯಾಪಕರು, ಇತರ ಎಲ್ಲ ವಿಭಾಗಗಳ ಮುಖ್ಯಸ್ಥರು ಭಾಗವಹಿಸಿದ್ದರು.
ಪ್ರಾಧ್ಯಾಪಿಕೆ ಸಿಜಿ ಕೆ. ಸತ್ಯನ್‌ ಅತಿಥಿಗಳನ್ನು ಪರಿಚಯಿಸಿದರು. ಉಪ ನ್ಯಾಸಕರಾದ ಅಪರ್ಣಾ ನಾಯಕ್‌ ನಿರೂಪಿಸಿ, ಕಿಶನ್‌ ಸದಾಶಿವ ವಂದಿಸಿದರು.

ತರಬೇತಿ, ಉದ್ಯೋಗಾವಕಾಶ
ಮೆಕ್ಯಾನಿಕಲ್‌ ಎಂಜಿನಿಯರಿಂಗ್‌ ವಿಭಾಗದ ವಿದ್ಯಾರ್ಥಿಗಳಿಗೆ ಉತ್ತಮ ತರಬೇತಿ ಮತ್ತು ಉದ್ಯೋಗಾವ ಕಾಶಗಳನ್ನು ಒದಗಿಸುವ ಉದ್ದೇಶ ದಿಂದ ಒಡಂಬಡಿಕೆಗೆ ಸಹಿ ಹಾಕಲಾ ಗಿದೆ. ವಿದ್ಯಾರ್ಥಿಗಳಿಗೆ ಉತ್ತಮ ಉದ್ಯಮ ಪಡೆಯಲು ಮತ್ತು ಮೆಕ್ಯಾ ನಿಕಲ್‌ ಎಂಜಿನಿಯರಿಂಗ್‌ ಕ್ಷೇತ್ರದಲ್ಲಿ ಇತ್ತೀಚೆಗಿನ ತಂತ್ರಜ್ಞಾನಗಳನ್ನು ಕಲಿಯಲು ಇದು ಸಹಕಾರಿಯಾಗಿದೆ.

ಟಾಪ್ ನ್ಯೂಸ್

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

vidan-soudha-kannada

Golden Jubilee: ಕನ್ನಡವೇ ಅಧಿಕಾರಿಗಳ‌ ಹೃದಯದ ಭಾಷೆ ಆಗಲಿ

KSRTC

Transport: ಕೆಎಸ್ಸಾರ್ಟಿಸಿ ದಾಖಲೆ: ಒಂದೇ ದಿನ 1.23 ಕೋಟಿ ಮಂದಿ ಪ್ರಯಾಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿಯಲ್ಲಿ ಕಾಶ್ಮೀರಿ ಕೇಸರಿ ಬೆಳೆದ ಟೆಕ್ಕಿಗಳು; ಹೊಸ ಪ್ರಯೋಗದಲ್ಲಿ ಮೊದಲ ಯಶಸ್ಸು !

ಕರಾವಳಿಯಲ್ಲಿ ಕಾಶ್ಮೀರಿ ಕೇಸರಿ ಬೆಳೆದ ಟೆಕ್ಕಿಗಳು; ಹೊಸ ಪ್ರಯೋಗದಲ್ಲಿ ಮೊದಲ ಯಶಸ್ಸು !

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

fraud-2

ಆನ್‌ಲೈನ್‌ನಲ್ಲಿ ಅಧಿಕ ಲಾಭಾಂಶದ ಆಮಿಷ: ಬ್ಯಾಂಕ್‌ ಮ್ಯಾನೇಜರ್‌ಗೆ ಲಕ್ಷಾಂತರ ರೂ. ವಂಚನೆ

Udupi: ಹೂಡೆ ಬೀಚ್‌ನಲ್ಲಿ ಪ್ರವಾಸಿಗರ ಮೇಲೆ ಸ್ಥಳೀಯರಿಂದ ಹಲ್ಲೆ

Udupi: ಹೂಡೆ ಬೀಚ್‌ನಲ್ಲಿ ಪ್ರವಾಸಿಗರ ಮೇಲೆ ಸ್ಥಳೀಯರಿಂದ ಹಲ್ಲೆ

2

Hiriydaka: ಒಟಿಪಿ ನೀಡಿ 5 ಲಕ್ಷ ರೂ. ಕಳೆದುಕೊಂಡ ಯುವತಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.