ಗುಜರಾತ್‌ನಲ್ಲಿ ದ್ವೇಷ ಭಾಷಣ; Kajal Hindustani ಗೆ ನ್ಯಾಯಾಂಗ ಬಂಧನ
Team Udayavani, Apr 10, 2023, 3:53 PM IST
ಉನಾ : ಪಟ್ಟಣದಲ್ಲಿ ಕೋಮು ಘರ್ಷಣೆಗೆ ಕಾರಣವಾದ ರಾಮ ನವಮಿಯಂದು ದ್ವೇಷಪೂರಿತ ಭಾಷಣ ಮಾಡಿದ ಆರೋಪದ ಮೇಲೆ ಬಲಪಂಥೀಯ ಕಾರ್ಯಕರ್ತೆ ಕಾಜಲ್ ಹಿಂದೂಸ್ಥಾನಿ ಅವರನ್ನು ಬಂಧಿಸಿದ ನಂತರ ಗುಜರಾತ್‌ನ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಭಾನುವಾರ ಉನಾದಲ್ಲಿ ಹಿಂದೂಸ್ಥಾನಿ ಪೊಲೀಸರ ಮುಂದೆ ಶರಣಾಗಿದ್ದರು. ನಂತರ ಅವರನ್ನು ಬಂಧಿಸಿ ಉನಾದ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಆಕೆಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಉನಾ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಎನ್‌ಕೆ ಗೋಸ್ವಾಮಿ ತಿಳಿಸಿದ್ದಾರೆ.
ಅವರನ್ನು ಜುನಾಗಢ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಯಿತು ಎಂದು ಗೋಸ್ವಾಮಿ ಹೇಳಿದರು. ಮಾರ್ಚ್ 30 ರಂದು ರಾಮ ನವಮಿ ಹಬ್ಬದಂದು ಹಿಂದೂಸ್ಥಾನಿ ಅವರು ಮಾಡಿದ ಭಾಷಣವು ಎಪ್ರಿಲ್ 1 ರ ರಾತ್ರಿ ಉನಾ ಪಟ್ಟಣದಲ್ಲಿ ಕೋಮು ಘರ್ಷಣೆಗೆ ಕಾರಣವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.