Muskmelon Fruit: ಕರ್ಬೂಜ ಹಣ್ಣು ಸೇವಿಸುವುದರಿಂದ ಆರೋಗ್ಯಕ್ಕೆ ಹಲವು ಉಪಯೋಗವಿದೆ…


Team Udayavani, Apr 11, 2023, 5:40 PM IST

muskmelon

ಕಲ್ಲಂಗಡಿಯಂತೆಯೇ ಹೆಚ್ಚಿನ ನೀರಿನಾಂಶವನ್ನು ಹೊಂದಿರುವ ಹಣ್ಣು ಕರ್ಬೂಜ . ಹೊರಗಿನಿಂದ ಬೂದು, ಹಸಿರು ಮಿಶ್ರಿತ ಸಿಪ್ಪೆ ಹಾಗೂ ಕಿತ್ತಳೆ ಬಣ್ಣದ ತಿರುಳಿನೊಂದಿಗೆ ಕೂಡಿರುತ್ತದೆ.

ಬೇಸಿಗೆಯ ನಿರ್ಜಲೀಕರಣ ದೂರ ಮಾಡುವ ವಿಶೇಷ ಗುಣ ಈ ಹಣ್ಣು ಹೊಂದಿದೆ. ಈ ಹಣ್ಣಿನಲ್ಲಿ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ 6, ಪೊಟ್ಯಾಶಿಯಂ, ಬೀಟಾ ಕ್ಯಾರೋಟೀನ್, ಕಬ್ಬಿಣ, ಮ್ಯಾಂಗನೀಸ್, ಫೋಲಿಕ್  ಆಮ್ಲ  ಮತ್ತು ಅಧಿಕ ನಾರಿನಂಶ ಹಾಗೂ ಇತರ ಪ್ರಮುಖ ಪೋಷಕಾಂಶಗಳನ್ನು ಹೊಂದಿದೆ.

ಈ ಹಣ್ಣಿನಲ್ಲಿ ಪೋಷಕಾಂಶಗಳು ಹೆಚ್ಚಿದ್ದರೂ ಕ್ಯಾಲೋರಿಯು ಕಡಿಮೆ ಇರುವ ಕಾರಣದಿಂದಾಗಿ ಕೊಬ್ಬಿನಾಂಶ ಹೆಚ್ಚಿಸದೆ ದೇಹಕ್ಕೆ ಹೆಚ್ಚಿನ ಶಕ್ತಿಯನ್ನು ಒದಗಿಸುತ್ತದೆ. ಇದರ ಸೇವನೆಯಿಂದ ಅನೇಕ ಪ್ರಯೋಜನಗಳಿವೆ.

ಕಿಡ್ನಿ ಸಮಸ್ಯೆ ನಿವಾರಣೆ:

ಮೂತ್ರ ಕೋಶದಲ್ಲಿ ಕಲ್ಲಿರುವವರು ಈ ಹಣ್ಣಿನ ರಸ ಕುಡಿಯಬೇಕು. ಮಲಬದ್ದಿತೆ ಇರುವವರು ಈ ಹಣ್ಣನ್ನು ಸೇವಿಸುವುದು ಒಳ್ಳೆಯದು. ಈ ಹಣ್ಣಿನ ಬೀಜದ ತಿರುಳು ಮೂತ್ರಪಿಂಡ ಮತ್ತು ಯಕೃತ್ತಿನ ತೊಂದರೆಗಳ ನಿವಾರಣೆಗೆ ಉಪಯುಕ್ತ. ದೀರ್ಘಕಾಲದಲ್ಲಿ ಜ್ವರದ ನಿವಾರಣೆಗೂ ಇದು ಉಪಯುಕ್ತ. ಕಿಡ್ನಿ ಸಮಸ್ಯೆ ಇರುವವರಿಗೆ ಈ ಹಣ್ಣು ಅತ್ಯುತ್ತಮ ಮೂತ್ರವರ್ಧಕ ಶಕ್ತಿ ಹೊಂದಿದೆ. ಹಾಗಾಗಿ ಇದು ಮೂತ್ರಕೋಶದ ಸಂಬಂಧಿ ಕಾಯಿಲೆ ಮತ್ತು ಇತರ ಅಪಾಯಕಾರಿ ಕಾಯಿಲೆ ಬರದಂತೆ ತಡೆಯುತ್ತವೆ. ನಿಂಬೆಹಣ್ಣಿನ ಜೊತೆಗೆ ಕರ್ಬೂಜ ಹಣ್ಣನ್ನು ಸೇವಿಸುವುದರಿಂದ ಸಂಧಿವಾತ ಗುಣಪಡಿಸಬಹುದು.

ಕ್ಯಾನ್ಸರ್ ರೋಗ ತಡೆಗಟ್ಟಲು:

ಕ್ಯಾನ್ಸರ್ ಬರುವುದರಿಂದ ರಕ್ಷಣೆ ಒದಗಿಸುತ್ತದೆ. ಇದರಲ್ಲಿರುವ ವಿಟಮಿನ್ ಸಿ ಹಾಗೂ ಬೀಟಾ ಕ್ಯಾರೋಟೀನ್ ಎಂಬ ಆಂಟಿ ಆಕ್ಸಿಡೆಂಟ್ ಹೊಂದಿದೆ. ಇದು ದೇಹದಲ್ಲಿ ಕ್ಯಾನ್ಸರ್ ಉಂಟುಮಾಡಬಹುದಾದ ಫ್ರೀ ರ್‍ಯಾಡಿಕಲ್ ಎಂಬ ಕಣಗಳನ್ನು ಹಿಮ್ಮೆಟ್ಟಿಸುವ ಕ್ಷಮತೆ ಹೊಂದಿದ್ದು, ಈ ಮೂಲಕ ದೇಹದ ಜೀವಕೋಶಗಳಿಗೆ ಈ ಕಣಗಳು ಹಾನಿ ಮಾಡುವುದರಿಂದ ರಕ್ಷಿಸುತ್ತದೆ. ಈ ಹಾನಿ ಮುಂದುವರೆದರೆ ಕ್ಯಾನ್ಸರ್ ಗೂ ತಿರುಗಬಹುದು. ಈ ಮೂಲಕ ಕರ್ಬೂಜದ ಹಣ್ಣು ಕ್ಯಾನ್ಸರ್ ಬರುವುದರಿಂದಲೂ ರಕ್ಷಣೆ ಒದಗಿಸುತ್ತದೆ.

ಮಧುಮೇಹ ಸಮಸ್ಯೆ:

ಮಧುಮೇಹ ರೋಗಿಗಳಿಗೆ ಕರ್ಬೂಜ ಹಣ್ಣಿನ ಜ್ಯೂಸ್ ಪೂರಕ ಆಹಾರ.‌ ವೈದ್ಯರು  ಮಧುಮೇಹಿಗಳಿಗೆ ಸ್ವಲ್ಪ ಕಹಿಯಾದ ಕರ್ಬೂಜ ಹಣ್ಣಿನ ರಸವನ್ನು ತೆಗೆದುಕೊಳ್ಳಲು ಸೂಚಿಸುತ್ತಾರೆ. ಏಕೆಂದರೆ ಇದು ಮಧುಮೇಹಿಗಳ ದೇಹದಲ್ಲಿರುವ ಸಕ್ಕರೆಯಂಶವನ್ನು ಕಡಿಮೆ ಮಾಡಲು ಸಹಕರಿಸುತ್ತದೆ.

ರೋಗ ನಿರೋಧಕ ಶಕ್ತಿ ಹೆಚ್ಚಳ:

ಈ ಹಣ್ಣು ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಕ್ಷಮತೆ ಹೊಂದಿದ್ದು ಇದಕ್ಕೆ ಈ ಹಣ್ಣಿನಲ್ಲಿರುವ ವಿಟಮಿನ್ ಸಿ ಪ್ರಮುಖ ಕಾರಣ. ಈ ಹಣ್ಣಿನ ಸೇವನೆಯಿಂದ ದೇಹದಲ್ಲಿ ಹೆಚ್ಚಿನ ಪ್ರಮಾಣದ ಬಿಳಿರಕ್ತಕಣಗಳನ್ನು ಉತ್ಪತ್ತಿಸಲು ಸಾಧ್ಯವಾಗುತ್ತದೆ.

ಜೀರ್ಣಶಕ್ತಿಗೆ ಸಹಕಾರಿ:

ಕರ್ಬೂಜ ಜಠರದಲ್ಲಿ ಪಚನ ಕ್ರಿಯೆಯನ್ನು ಉದ್ದೀಪಿಸುತ್ತದೆ. ಜೀರ್ಣಕ್ರಿಯೆಯಲ್ಲಿ ಏನಾದರು ತೊಂದರೆ ಇದ್ದಲ್ಲಿ ಕರ್ಬೂಜ ಹಣ್ಣು ಸೇವಿಸಬೇಕು . ಆಗ ಜೀರ್ಣಕ್ರಿಯೆ ಸರಾಗವಾಗುತ್ತದೆ. ಕರ್ಬೂಜದಲ್ಲಿರುವ ನೀರಿನಂಶ ಜೀರ್ಣಕ್ರಿಯೆಗೆ ನೆರವು ನೀಡುತ್ತದೆ. ಇದರಲ್ಲಿರುವ ಖನಿಜಾಂಶವು ದೇಹದಲ್ಲಿನ, ಅದರಲ್ಲೂ ಮುಖ್ಯವಾಗಿ ಜಠರದಲ್ಲಿ ಜೀರ್ಣಕ್ರಿಯೆಗೆ ತಡೆಯೊಡ್ಡುವ ಆಮ್ಲೀಯತೆ (ಅಸಿಡಿಟಿ) ಯನ್ನು ನಿವಾರಿಸುತ್ತದೆ. ಊಟದ ನಂತರ ಈ ಹಣ್ಣನ್ನು ಸೇವಿಸುವುದರಿಂದ ಆಹಾರ ಚೆನ್ನಾಗಿ ಜೀರ್ಣವಾಗುತ್ತದೆ.

ಗರ್ಭಿಣಿಯರಿಗೆ ಉತ್ತಮ:

ಗರ್ಭಾವಸ್ಥೆಯಲ್ಲಿ ಗರ್ಭಿಣಿಯ ದೇಹಕ್ಕೆ ಹೆಚ್ಚಿನ ಪ್ರಮಾಣದ ಫೋಲಿಕ್ ಆಮ್ಲದ ಅಗತ್ಯವಿರುತ್ತದೆ. ಈ ಹಣ್ಣಿನಲ್ಲಿ ಫೋಲಿಕ್ ಆಮ್ಲ ಉತ್ತಮ ಪ್ರಮಾಣದಲ್ಲಿದ್ದು ಗರ್ಭಿಣಿಯ ದೇಹಕ್ಕೆ ಅಗತ್ಯ ಪೋಷಣೆ ಒದಗಿಸಲು ಸಹಾಯ ಮಾಡುತ್ತದೆ. ಗರ್ಭಿಣಿಯಾಗಬಯಸುವ ಮಹಿಳೆಯರಲ್ಲಿ ಒಂದು ವೇಳೆ ಗರ್ಭನಾಳದ ತೊಂದರೆ ಇದ್ದು ಗರ್ಭ ನಿಲ್ಲದೇ ಇದ್ದರೆ ಈ ಹಣ್ಣಿನ ಸೇವನೆಯಿಂದ ಗರ್ಭ ನಿಲ್ಲುವ ಸಾಧ್ಯತೆ ಹೆಚ್ಚುತ್ತದೆ. ಬಾಣಂತಿಯರು ಈ ಹಣ್ಣನ್ನು ಸೇವಿಸಿದರೆ. ಎದೆಹಾಲಿನ ಉತ್ಪತ್ತಿ ಕೂಡಾ ಹೆಚ್ಚಿಸಲು ಉತ್ತಮ ಆಹಾರ.

ಸೌಂದರ್ಯಕ್ಕೆ ಸಹಕಾರಿ:

ಒಂದು ಮಧ್ಯಮ ಗಾತ್ರದ ಖರ್ಬೂಜದ ಹಣ್ಣಿನ ಕಾಲುಭಾಗದ ತಿರುಳು, ಮೂರು ಸ್ಟ್ರಾಬೆರಿ ಹಣ್ಣು, ಒಂದು ದೊಡ್ಡ ಚಮಚ ಓಟ್ಸ್, ಸ್ವಲ್ಪ  ಜೇನುತುಪ್ಪ ಸೇರಿಸಿ ಚೆನ್ನಾಗಿ ಬೆರೆಸಿ ಲೇಪನ ತಯಾರಿಸಿಕೊಳ್ಳಿ. ಈ ಲೇಪನವನ್ನು ಮುಖ, ಕುತ್ತಿಗೆ, ಕೈ ಕಾಲುಗಳಿಗೆ ಹಚ್ಚಿ ಸುಮಾರು ಹದಿನೈದು ನಿಮಿಷ ಬಿಟ್ಟು ತಣ್ಣೀರಿನಿಂದ ತೊಳೆದುಕೊಳ್ಳಿ. ಈ ಲೇಪನದ ಮೂಲಕ ಚರ್ಮ ಪೋಷಕಾಂಶಗಳನ್ನು ಪಡೆದು ಕೋಮಲತೆ ಮತ್ತು ಕಾಂತಿ ಪಡೆಯುತ್ತದೆ.

ಕಣ್ಣಿನ ಆರೋಗ್ಯಕ್ಕೆ :

ಉತ್ತಮ ದೃಷ್ಟಿ ಕಾಪಾಡಿಕೊಳ್ಳಲು  ಬೀಟಾ ಕೆರೋಟಿನ್ ಎಂಬ ಅಂಶ ಈ ಹನ್ಣಿನಲ್ಲಿದೆ. ಈ ಬೀಟಾ ಕೆರೊಟಿನ್ ಗಳು ವಿಟಮಿನ್ ಎ ಆಗಿ ಮಾರ್ಪಾಡಾಗಿ ಕಣ್ಣಿನ ಪೊರೆ ಮತ್ತು ದೃಷ್ಟಿ ಸುಧಾರಿಸುವಲ್ಲಿ  ಸಹಾಯ ಮಾಡುತ್ತದೆ. ಉತ್ತಮ ವಿಟಮಿನ್ ಹೊಂದಿರುವ ಆಹಾರಗಳನ್ನು ಸೇವಿಸುವುದರಿಂದ ಶೇಕಡಾ 40 ರಷ್ಟು ಕಣ್ಣಿನ ಪೊರೆಯ ಅಪಾಯ ತಡೆಗಟ್ಟಬಹುದು ಎಂದು ಸಂಶೋಧನೆಗಳಿಂದ ತಿಳಿದು ಬಂದಿದೆ. ಈ ಹಣ್ಣಿನಲ್ಲಿ ವಿಟಮಿನ್ ‘ಎ’ ಅಧಿಕವಿರುವುದರಿಂದ ಮಕ್ಕಳಲ್ಲಿ ರಾತ್ರಿ ಕುರುಡಿನ ಪ್ರಾರಂಭಿಕ ಲಕ್ಷಣಗಳು ಕಂಡಕೂಡಲೇ ಈ ಹಣ್ಣನ್ನು ಅಧಿಕವಾಗಿ ಸೇವಿಸಲು ಕೂಡಬೇಕು.

*ಕಾವ್ಯಶ್ರೀ

ಟಾಪ್ ನ್ಯೂಸ್

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ

Re-Release: ಈ ವರ್ಷ ರೀ ರಿಲೀಸ್‌ ಆದ ಬಾಲಿವುಡ್‌ ಸಿನಿಮಾಗಳ ಬಾಕ್ಸ್‌ ಆಫೀಸ್‌ ಗಳಿಕೆ ಎಷ್ಟು?

Re-Release: ಈ ವರ್ಷ ರೀ ರಿಲೀಸ್‌ ಆದ ಬಾಲಿವುಡ್‌ ಸಿನಿಮಾಗಳ ಬಾಕ್ಸ್‌ ಆಫೀಸ್‌ ಗಳಿಕೆ ಎಷ್ಟು?

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

Border Gavaskar Trophy: India ready for Kangaroo Challenge; What is the team’s strength?

Border Gavaskar Trophy: ಕಾಂಗರೂ ಚಾಲೆಂಜ್‌ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ

6-tulsi

Tulsi Health Benefits: ತುಳಸಿ ಗಿಡದ ಔಷಧೀಯ ಗುಣಗಳ ಮಾಹಿತಿ ಇಲ್ಲಿವೆ…

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.