ನಂದಿನಿ-ಅಮುಲ್‌ ವಿಲೀನ ಇಲ್ಲ: Balachandra Jarkiholi

ಅಂಥ ಪ್ರಸ್ತಾವ ಬಂದರೆ ನಾನೇ ತಿರಸ್ಕರಿಸುತ್ತೇನೆ ; ಗೊಂದಲ ಸೃಷ್ಟಿಸುವ ಕುತಂತ್ರ ರಾಜಕೀಯ

Team Udayavani, Apr 12, 2023, 6:49 AM IST

ನಂದಿನಿ-ಅಮುಲ್‌ ವಿಲೀನ ಇಲ್ಲ: Balachandra Jarkiholi

ಬೆಳಗಾವಿ: ರಾಜ್ಯದಲ್ಲಿ ಸಾಕಷ್ಟು ಚರ್ಚೆ ಹಾಗೂ ವಿವಾದಕ್ಕೆ ಗ್ರಾಸವಾಗಿರುವ ಕೆಎಂಎಫ್‌ ಮತ್ತು ಅಮುಲ್‌ ವಿಲೀನದ ಮಾತೇ ಇಲ್ಲ. ಚುನಾವಣೆ ಸಮಯದಲ್ಲಿ ಅನಗತ್ಯವಾಗಿ ಇದರಲ್ಲಿ ರಾಜಕೀಯ ಮಾಡಬೇಡಿ. ರೈತರಲ್ಲಿ ಗೊಂದಲ ಮೂಡಿಸಬೇಡಿ ಎಂದು ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.

ಸರಕಾರ ಮತ್ತು ಕೆಎಂಎಫ್‌ ಮುಂದೆ ಯಾವುದೇ ವಿಲೀನದ ಪ್ರಸ್ತಾವವೇ ಇಲ್ಲ. ಅಂಥ ಪ್ರಸ್ತಾವ ಬಂದದ್ದೇ ಆದರೆ ಮೊದಲು ನಾನೇ ತಿರಸ್ಕಾರ ಮಾಡುತ್ತೇನೆ. ಈ ವಿಲೀನ ಎಂಬ ವಿವಾದದ ಹಿಂದೆ ರಾಜಕೀಯ ಷಡ್ಯಂತ್ರ ಇದೆ. ಕೆಎಂಎಫ್‌ ವ್ಯಾಪ್ತಿಯಲ್ಲಿ ರಾಜ್ಯದಲ್ಲಿ ಸುಮಾರು 40ರಿಂದ 50 ಲಕ್ಷ ಮತದಾರರಿದ್ದಾರೆ. ಚುನಾವಣೆ ಸಮಯದಲ್ಲಿ ಅವರನ್ನು ಗುರಿಯಾಗಿಟ್ಟುಕೊಂಡು ಬಿಜೆಪಿಗೆ ಕೆಟ್ಟ ಹೆಸರು ತರಬೇಕು ಎಂಬ ಉದ್ದೇಶದಿಂದ ಕೆಲವರು ಈ ರೀತಿಯ ಕುತಂತ್ರ ನಡೆಸಿದ್ದಾರೆ. ಇದಕ್ಕೆ ರಾಜ್ಯದ ಜನರು ಕಿವಿಗೊಡಬಾರದು ಎಂದು ಪತ್ರಿಕಾಗೋಷ್ಠಿಯಲ್ಲಿ ಅವರು ಸ್ಪಷ್ಟಪಡಿಸಿದರು.

ಕೆಎಂಎಫ್‌ನಲ್ಲಿ ಯಾವುದೇ ಸಮಸ್ಯೆ ಇಲ್ಲ. ನಂದಿನಿ ಹಾಲಿಗೆ ಅತೀ ಹೆಚ್ಚಿನ ಬೇಡಿಕೆ ಇದೆ. ಎ. 1ರಿಂದ ಇವತ್ತಿನವರೆಗೆ ಹಾಲು ಶೇಖರಣೆಯಲ್ಲಿ ಎರಡು ಲಕ್ಷ ಲೀಟರ್‌ ಏರಿಕೆಯಾಗಿದೆ ಎಂದರು.

ರಾಜ್ಯದಲ್ಲಿ ಅಮುಲ್‌ ಬಂದು ಎಷ್ಟೋ ವರ್ಷಗಳಾಗಿದ್ದರೂ ಇನ್ನೂ ತನ್ನ ಮಾರುಕಟ್ಟೆ ವಿಸ್ತರಿಸಿಕೊಳ್ಳಲು ಆಗುತ್ತಿಲ್ಲ. ಇದಕ್ಕೆ ನಮ್ಮ ರೈತರು, ಗ್ರಾಹಕರು ಕೆಎಂಎಫ್‌ನ ಮೇಲೆ ಇಟ್ಟಿರುವ ವಿಶ್ವಾಸ ಹಾಗೂ ನಂಬಿಕೆಗಳೇ ಕಾರಣ. ಹೀಗಿರುವಾಗ ಇದರಲ್ಲಿ ರಾಜಕೀಯ ಮಾಡದೆ ನಂದಿನಿಯನ್ನು ಇನ್ನಷ್ಟು ಬೆಳೆಸಲು ಸಹಕಾರ ನೀಡಬೇಕು ಎಂದರು.

ನಾವು ಅಧಿಕಾರಕ್ಕೆ ಬಂದ ಅನಂತರ ಅನುಕಂಪದ ಆಧಾರದ ಮೇಲೆ ಉದ್ಯೋಗಾವಕಾಶಗಳನ್ನು ಕಲ್ಪಿಸಲಾಗಿದೆ. ಈ ಹಿಂದೆ ಯಾರೂ ಮಾಡದ ನೌಕರರ ನಿವೃತ್ತಿ ವೇತನವನ್ನು ಜಾರಿಗೆ ತರಲಾಗಿದೆ. ಪ್ರತೀ ವರ್ಷ ಇಂಧನ ಇಲಾಖೆಗೆ ವಿದ್ಯುತ್‌ ಬಿಲ್‌ಗಾಗಿಯೇ 120 ಕೋಟಿ ರೂ. ಸಂದಾಯ ಮಾಡಲಾಗುತ್ತಿದೆ. ಸೋಲಾರ ಪ್ಲಾಂಟ್‌ ನಿರ್ಮಾಣ ಮಾಡುವ ಯೋಜನೆ ರೂಪಿಸಲಾಗಿದೆ. ಇದು ಜಾರಿಯಾದರೆ ವಾರ್ಷಿಕವಾಗಿ 40 ಕೋಟಿ ರೂ.ಗಳ ಉಳಿತಾಯವಾಗಲಿದೆ ಎಂದರು.

ವಾರ್ಷಿಕ 22 ಸಾವಿರ ಕೋಟಿ ರೂ. ವಹಿವಾಟು
ಕೇಂದ್ರ ಸಚಿವ ಅಮಿತ್‌ ಶಾ ಅವರು ಕೆಎಂಎಫ್‌ ಬಲವರ್ಧನೆಗಾಗಿ ಅಮುಲ್‌ ಮಾದರಿಯಂತೆ ಮಾರುಕಟ್ಟೆಯನ್ನು ಇನ್ನಷ್ಟು ವಿಸ್ತರಿಸಲು ಸಲಹೆ ನೀಡಿದ್ದಾರೆ. ಆದರೆ ಇದನ್ನೇ ಕೆಲವರು ರಾಜಕೀಯವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಖಂಡನೀಯ. ಕೆಎಂಎಫ್‌ ವಾರ್ಷಿಕವಾಗಿ 22,000 ಕೋಟಿ ರೂ.ಗಳ ವಹಿವಾಟು ನಡೆಸಿದ್ದು, ಇದರಿಂದ ಕೆಎಂಎಫ್‌ ಮತ್ತು 15 ಜಿಲ್ಲಾ ಹಾಲು ಒಕ್ಕೂಟಗಳು ಸೇರಿ ವಾರ್ಷಿಕವಾಗಿ ಅಂದಾಜು 200 ಕೋಟಿ ರೂ.ಗಳ ಲಾಭ ನಿರೀಕ್ಷೆ ಮಾಡಲಾಗಿದೆ. ಇಂಥ ಪರಿಸ್ಥಿತಿಯಲ್ಲಿ ರೈತರಿಗೆ ನೆರವಾಗಬೇಕು. ಅದನ್ನು ಬಿಟ್ಟು ನಂದಿನಿ-ಅಮುಲ್‌ ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿಸಬಾರದು ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಟಾಪ್ ನ್ಯೂಸ್

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.