BSY ಕಡೆಗಣಿಸುವ ಪ್ರಶ್ನೆಯೇ ಇಲ್ಲ: ಅಶ್ವತ್ಥನಾರಾಯಣ
Team Udayavani, Apr 12, 2023, 7:29 AM IST
ಶಿವಮೊಗ್ಗ: ರಾಜ್ಯ ಬಿಜೆಪಿಯಲ್ಲಿ ಬಿ.ಎಸ್. ಯಡಿಯೂರಪ್ಪ ಅವರೇ ಸರ್ವೋತ್ಛ ನಾಯಕರಾಗಿದ್ದು, ಅವರನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಅಶ್ವತ್ಥನಾರಾಯಣ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ನಮಗೆಲ್ಲರಿಗೂ ಯಡಿಯೂರಪ್ಪ ಸರ್ವಶ್ರೇಷ್ಠ ನಾಯಕ. ಅವರ ಬಗ್ಗೆ ಹೆಚ್ಚಿನ ಗೌರವ ಇದೆ. ಅವರನ್ನು ಹೊರಗಿಟ್ಟು ಸಭೆ ಮಾಡುವ ವಿಚಾರವೇ ಇಲ್ಲ. ಬಿಜೆಪಿಯಲ್ಲಿ ಪ್ರತೀ ಚುನಾವಣೆ ಸಂದರ್ಭದಲ್ಲಿ ನಾಮಪತ್ರ ಸಲ್ಲಿಕೆ ಪ್ರಾರಂಭವಾದ ಮೇಲೆ ವಿವಿಧ ಚುನಾವಣ ಪ್ರಕ್ರಿಯೆಗಳು ನಡೆಯುತ್ತವೆ. ಪಕ್ಷ ಎಲ್ಲ ಜಾತಿ, ಜನಾಂಗಕ್ಕೆ ಅವಕಾಶ ನೀಡಿ ಅಭ್ಯರ್ಥಿ ಆಯ್ಕೆ ನಡೆಯಲಿದೆ ಎಂದರು.
ಈ ಬಾರಿ ಸಮ್ಮಿಶ್ರ ಸರಕಾರ ಬರಲಿದ್ದು, ನಿರ್ಣಾಯಕರು ನಾವೇ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಅವರ ಪಕ್ಷದ ಬಗ್ಗೆ ಅವರು ಹೇಳಲೇಬೇಕು. ಆದರೆ ಈ ಬಾರಿ ಬಿಜೆಪಿಗೆ ಸಂಪೂರ್ಣ ಬಹುಮತ ದೊರೆಯಲಿದೆ. ಸಮ್ಮಿಶ್ರ ಸರಕಾರದ ಪರಿಸ್ಥಿತಿಯನ್ನು ಕರ್ನಾಟಕದ ಜನ ನೋಡಿದ್ದಾರೆ. ಸುಭದ್ರ ಸರಕಾರವನ್ನು ಜನ ತರುತ್ತಾರೆ 2023ರಲ್ಲಿ ಬಿಜೆಪಿ ಸಂಪೂರ್ಣ ಬಹುಮತ ಪಡೆಯಲಿದ್ದು, ಹೆಚ್ಚಿನ ಅಂತರದಲ್ಲಿ ಗೆಲ್ಲುವುದು ನಿಶ್ಚಿತ ಎಂದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.