ರಾಜ್ಯದಲ್ಲಿ ಚುನಾವಣ ಅಕ್ರಮ: 24 ಗಂಟೆಗಳಲ್ಲಿ 4 ಕೋ.ರೂ. ಜಪ್ತಿ
Team Udayavani, Apr 14, 2023, 7:02 AM IST
ಬೆಂಗಳೂರು: ರಾಜ್ಯದಲ್ಲಿ ಚುನಾವಣ ಅಕ್ರಮಗಳ ಜಪ್ತಿ 144 ಕೋಟಿ ರೂ. ಆಗಿದ್ದು, ಕಳೆದ 24 ಗಂಟೆಗಳಲ್ಲಿನ ಜಪ್ತಿ ಅಂದಾಜು 4 ಕೋ.ರೂ. ಆಗಿದೆ.
ಚುನಾವಣ ವೇಳಾಪಟ್ಟಿ ಪ್ರಕಟವಾದ 2023ರ ಮಾ. 29ರಿಂದ ಎ. 13ರ ವರೆಗೆ ವಿಚಕ್ಷಣ ದಳ, ಸ್ಥಿರ ಕಣ್ಗಾವಲು ತಂಡಗಳು, ಪೊಲೀಸರು ಮತ್ತು ಆದಾಯ ತೆರಿಗೆ ಅಧಿಕಾರಿಗಳು ಸೇರಿ 57.36 ಕೋಟಿ ರೂ. ನಗದು, 17.93 ಕೋಟಿ ರೂ. ಮೌಲ್ಯದ ಉಚಿತ ಉಡುಗೊರೆಗಳು, 21.27 ಕೋಟಿ ರೂ. ಮೌಲ್ಯದ 53.28 ಕೆ.ಜಿ. ಬಂಗಾರ, 2.55 ಕೋಟಿ ರೂ. ಮೌಲ್ಯದ 373.79 ಕೆ.ಜಿ. ಬೆಳ್ಳಿ ವಶಪಡಿಸಿಕೊಂಡಿವೆ.
ಈ ಸಂಬಂಧ 1,182 ಎಫ್ಐಆರ್ಗಳನ್ನು ದಾಖಲಿಸಲಾಗಿದೆ. ವಿಚಕ್ಷಣ ದಳ, ಸ್ಥಿರ ಕಣ್ಗಾವಲು ತಂಡಗಳು, ಪೊಲೀಸರು ಮತ್ತು ಅಬಕಾರಿ ಅಧಿಕಾರಿಗಳ ತಂಡ ಸೇರಿ 32 ಕೋಟಿ ರೂ. ಮೌಲ್ಯದ 6.88 ಲಕ್ಷ ಲೀಟರ್ ಮದ್ಯ ವಶಪಡಿಸಿಕೊಂಡಿವೆ. 13.20 ಕೋಟಿ ರೂ. ಮೌಲ್ಯದ 577.90 ಕೆ.ಜಿ. ಮಾದಕ ದ್ರವ್ಯಗಳನ್ನು ಜಪ್ತಿ ಮಾಡಿವೆ.
ಅಬಕಾರಿ ಇಲಾಖೆಯು 1,442 ಗಂಭೀರ, ಪರವಾನಿಗೆ ಉಲ್ಲಂ ಸಿದ 1,029, ಎನ್ಡಿಪಿಎಸ್ 53 ಮತ್ತು ಅಬಕಾರಿ ಕಾಯ್ದೆ ಅನ್ವಯ ಒಟ್ಟು 5,280 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದ್ದು, 949 ವಿವಿಧ ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ರಾಜ್ಯ ಚುನಾವಣಾಧಿಕಾರಿಗಳ ಕಚೇರಿ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.