Operation Savadi ಯಶಸ್ವಿ: ಇಂದು ಸಂಜೆ ಕಾಂಗ್ರೆಸ್ ಪಕ್ಷಕ್ಕೆ ಲಕ್ಷ್ಮಣ ಸವದಿ ಸೇರ್ಪಡೆ
Team Udayavani, Apr 14, 2023, 1:32 PM IST
ಬೆಂಗಳೂರು: ಮಾಜಿ ಉಪಮುಖ್ಯಮಂತ್ರಿ, ಬೆಳಗಾವಿಯ ಪ್ರಭಾವಿ ನಾಯಕ ಲಕ್ಷ್ಮಣ ಸವದಿ ಅವರು ಇಂದು ಕಾಂಗ್ರೆಸ್ ಪಕ್ಷ ಸೇರುತ್ತಿದ್ದು, ಅವರ ನಂತರ ಇನ್ನು ಅನೇಕ ನಾಯಕರು ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಸಿದ್ದರಾಮಯ್ಯ ಅವರ ನಿವಾಸದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಲಕ್ಷ್ಮಣ ಸವದಿ ಅವರ ಜತೆ ಶುಕ್ರವಾರ ಸಮಾಲೋಚನೆ ನಡೆಸಿದ ಬಳಿಕ ಮಾಧ್ಯಮಗಳ ಜತೆ ಶಿವಕುಮಾರ್ ಅವರು ಮಾತನಾಡಿದರು.
‘ಲಕ್ಷ್ಮಣ್ ಸವದಿ ಹಿರಿಯ ನಾಯಕರು. ಅವರು ಯಾವುದೇ ಷರತ್ತು ಇಲ್ಲದೇ ಪಕ್ಷಕ್ಕೆ ಸೇರುತ್ತಿದ್ದು, ನಮ್ಮ ಕುಟುಂಬದ ಸದಸ್ಯರಾಗುತ್ತಿದ್ದಾರೆ. ಅವರು ಪಕ್ಷದ ನಾಯಕತ್ವ, ಸಿದ್ಧಾಂತ ಒಪ್ಪಿ ಪಕ್ಷ ಸೇರುತ್ತಿದ್ದು ಅವರಿಗೆ ಶಕ್ತಿ ತುಂಬುವುದು ನಮ್ಮ ಜವಾಬ್ದಾರಿ. ಇಂದು ಪಕ್ಷದ ನಾಯಕರೆಲ್ಲರೂ ಲಕ್ಷ್ಮಣ ಸವದಿ ಅವರ ಜತೆ ಚರ್ಚೆ ಮಾಡಿದ್ದೇವೆ. ಅವರನ್ನು ಪಕ್ಷದ ಎಲ್ಲಾ ನಾಯಕರು ತುಂಬು ಹೃದಯದ ಸ್ವಾಗತ ಕೋರುತ್ತೇವೆ.
ಲಕ್ಷ್ಮಣ ಸವದಿ ಅವರ ಜತೆಗೆ ಇನ್ನು ಅನೇಕ ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ. ಎಲ್ಲರನ್ನೂ ನಾವು ಒಮ್ಮತದಿಂದ ಪಕ್ಷಕ್ಕೆ ಸ್ವಾಗತಿಸುತ್ತೇವೆ. ಸವದಿ ಅವರು ಇಂದು ಸಂಜೆ 4 ಗಂಟೆಗೆ ವಿಧಾನ ಪರಿಷತ್ ಸಭಾಪತಿಗಳನ್ನು ಭೇಟಿ ಮಾಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ 4.30ಕ್ಕೆ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ’ ಎಂದು ಅವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.