Udupi ಬಂಡಾಯ: ಟ್ರಬಲ್ ಶೂಟರ್ ಯಾರು?
Team Udayavani, Apr 15, 2023, 7:19 AM IST
ಉಡುಪಿ: ಬಿಜೆಪಿ ಪಾಳೆಯದಲ್ಲಿ ಟಿಕೆಟ್ ಹಂಚಿಕೆಯ ಅನಂತರ ಸೂರ್ಯೋ ದಯದ ಹೊತ್ತಿಗೆ ಭುಗಿಲೆದ್ದಿದ್ದ ಭಿನ್ನಮತ ಸೂರ್ಯಾಸ್ತದ ವೇಳೆಗೆ ಶಮನಗೊಂಡಿತು. ಈ ಹಿನ್ನೆಲೆಯಲ್ಲಿ ಅಸಮಾಧಾನಿತರನ್ನು ಮನವೊಲಿಸುವ ಕೆಲಸದಲ್ಲಿ ಟ್ರಬಲ್ ಶೂಟರ್ ಆಗಿ ಕೆಲಸ ಮಾಡಿದವರು ಯಾರು ಎಂಬುದೇ ಕುತೂಹಲಕ್ಕೆ ಕಾರಣವಾಗಿದೆ. ಪಕ್ಷ ಸರಿಯಾಗಿ ನಡೆಸಿಕೊಳ್ಳಲಿಲ್ಲ ಎಂದು ಅಸಮಾಧಾನ ಹೊರ ಹಾಕಿದ್ದ ಶಾಸಕ ಕೆ. ರಘುಪತಿ ಭಟ್ ಅವರು ಒಂದೇ ದಿನ ದಲ್ಲಿ ಪಕ್ಷದ ಕಚೇರಿಗೆ ಆಗಮಿಸಿ ಪಕ್ಷದ ಅಭ್ಯರ್ಥಿಗೆ ಪೂರ್ಣ ಬೆಂಬಲ, ಸಹಕಾರ ಘೋಷಿಸಿದರು. ಬೈಂದೂರಿನಲ್ಲಿ ರಾತೋ ರಾತ್ರಿ ಎದ್ದಿದ್ದ ಭಿನ್ನಮತವೂ ಮರು ದಿನ ಸಂಜೆಯೊಳಗೆ ಬಹುತೇಕ ತಣ್ಣಗಾಗಿದೆ.
ಜಿಲ್ಲಾ ನಾಯಕರು ಇಷ್ಟು ಬೇಗ ಸಮಸ್ಯೆ ಸರಿಪಡಿಸಿದರೆ ಅಥವಾ ರಾಜ್ಯ ನಾಯಕರು ಪ್ರಭಾವ ಬೀರಿದರೆ? ಅಥವಾ ಕೇಂದ್ರದ ವರಿಷ್ಠರು ರಂಗ ಪ್ರವೇಶದ ಎಚ್ಚರಿಕೆ ನೀಡಿದ್ದರೆ? ಹೀಗೆ ಚರ್ಚೆಗಳು ಜನರಲ್ಲಿ ಸಾಗುತ್ತಿವೆ. ಕೀಲಿ ಕೈ ಎಲ್ಲಿದೆ ಎಂಬುದು ಸ್ಪಷ್ಟವಾಗಿ ಯಾರಿಗೂ ಗೋಚರಿಸುತ್ತಿಲ್ಲ.
ಒಂದು ಮೂಲಗಳ ಪ್ರಕಾರ ರಾಜ್ಯ ಸಂಘಟನ ಪ್ರಧಾನ ಕಾರ್ಯದರ್ಶಿ ರಾಜೇಶ್ ಅವರು ಅಸಮಾಧಾನಿತ ರೊಂದಿಗೆ ನೇರವಾಗಿ ದೂರವಾಣಿ ಮಾತುಕತೆ ನಡೆಸಿದರೆನ್ನಲಾಗಿದೆ. ಆದರೆ ಬಂಡಾಯ ಘೋಷಿಸಿದವರು ಕೇವಲ ದೂರವಾಣಿ ಕರೆಗೆ ಸುಮ್ಮನಾದರೇ ಎಂಬ ಪ್ರಶ್ನೆಯೂ ಉದ್ಭವಿಸಿದೆ. ಉಡುಪಿ ಕ್ಷೇತ್ರದ ವಿಷಯದಲ್ಲಿ ಸಂಘದ ಹಿರಿಯರು, ಬಿಜೆಪಿಯ ಹಿರಿಯ ಕಾರ್ಯಕರ್ತರು ಮತ್ತು ರಾಜ್ಯದ ನಾಯಕರು ಪ್ರಭಾವ ಬೀರಿದ್ದಾರೆ ಎನ್ನಲಾಗುತ್ತಿದೆ. ಬೈಂದೂರು ವಿಷಯವಾಗಿ ಕೇಂದ್ರ ನಾಯಕರು ಮತ್ತು ಯಡಿಯೂರಪ್ಪನವೇ ಹೆಚ್ಚು ಮಧ್ಯ ಪ್ರವೇಶಿಸಿದ್ದಾರೆ ಎನ್ನಲಾಗಿದೆ.
ಉಡುಪಿ : ಕಾಂಗ್ರೆಸ್ ನಲ್ಲಿ ಆರದ ಬಂಡಾಯ
ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಹಂಚಿಕೆ ಬಳಿಕ ಭುಗಿಲೆದ್ದಿದ್ದ ಬಂಡಾಯವನ್ನು ಪೂರ್ಣ ಪ್ರಮಾಣದಲ್ಲಿ ಶಮನ ಇನ್ನೂ ಆಗಿಲ್ಲ. ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಕೆ.ಕೃಷ್ಣಮೂರ್ತಿ ಆಚಾರ್ಯ ಅವರು ಎ.17 ರಂದು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಸಂಭವವಿದೆ.
ಕೃಷ್ಣಮೂರ್ತಿ ಆಚಾರ್ಯ ಅವರೊಂದಿಗೆ ಈಗಾಗಲೇ ಕಾಂಗ್ರೆಸ್ ಮುಖಂಡರಾದ ಬಿ.ಕೆ. ಹರಿಪ್ರಸಾದ್ ಸೇರಿದಂತೆ ಜಿಲ್ಲಾಧ್ಯಕ್ಷರು ಮತ್ತು ಅಧಿಕೃತ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಈಗಾಗಲೇ ಮಾತುಕತೆ ನಡೆಸಿದ್ದಾರೆ. ಆದರೂ ಕೃಷ್ಣಮೂರ್ತಿ ಆಚಾರ್ಯ ತಮ್ಮ ನಿರ್ಧಾರವನ್ನು ಬದಲಿಸಿಲ್ಲ. ನಾಮಪತ್ರ ಸಲ್ಲಿಕೆಯ ಅನಂತರದಲ್ಲಿ ಏನೇನಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.