Bihar: ನಕಲಿ ಮದ್ಯ ಸೇವಿಸಿ 5 ಮಂದಿ ಮೃತ್ಯು; 12 ಜನರು ಗಂಭೀರ
Team Udayavani, Apr 15, 2023, 11:48 AM IST
ಪಾಟ್ನಾ: ಬಿಹಾರದಲ್ಲಿ ನಕಲಿ ಮದ್ಯದ ಹಾವಳಿ ಮತ್ತೆ ಶುರುವಾಗಿದೆ. ನಕಲಿ ಮದ್ಯವನ್ನು ಸೇವಿಸಿದ ಪರಿಣಾಮ ಐವರು ಮೃತಪಟ್ಟಿರುವ ಘಟನೆ ಬಿಹಾರದ ಮೋತಿಹಾರಿ ಜಿಲ್ಲೆಯಲ್ಲಿ ನಡೆದಿರುವುದು ವರದಿಯಾಗಿದೆ.
ಮೋತಿಹಾರಿ ಜಿಲ್ಲೆಯ ಲಕ್ಷ್ಮೀಪುರ ಗ್ರಾಮದಲ್ಲಿ ಈ ದುರಂತ ಸಂಭವಿದೆ. ನಕಲಿ ಮದ್ಯವನ್ನು ಗ್ರಾಮದ ಅನೇಕ ಜನ ಸೇವಿಸಿದ್ದಾರೆ. ಆ ಬಳಿಕ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅಸ್ವಸ್ಥಗೊಂಡವರಲ್ಲಿ ಐವರು ಮೃತಪಟ್ಟಿದ್ದಾರೆ. ಇನ್ನೂ 12 ಜನರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವರದಿಯಾಗಿದೆ.
ಏಪ್ರಿಲ್ 2016 ರಲ್ಲಿ, ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಸರ್ಕಾರವು ರಾಜ್ಯದಲ್ಲಿ ಮದ್ಯ ಮಾರಾಟ ಮತ್ತು ಸೇವನೆಯ ಮೇಲೆ ಸಂಪೂರ್ಣ ನಿಷೇಧವನ್ನು ಹೇರಿತ್ತು. ಈ ನಿರ್ಧಾರ ಅನೇಕ ಮಹಿಳಾ ಮತದಾರರ ಗಮನ ಸೆಳೆದಿತ್ತು.
ಇದನ್ನೂ ಓದಿ: Stolen: ಕಂಪೆನಿಯವರ ಸೋಗಿನಲ್ಲಿ ಬಂದು ಮೊಬೈಲ್ ಟವರನ್ನೇ ಕಳ್ಳತನ ಮಾಡಿಕೊಂಡು ಹೋದ ಗ್ಯಾಂಗ್!
ಆದರೆ ಆ ಬಳಿಕ ನಿಧಾನವಾಗಿ ಕಾಳಸಂತೆಯಲ್ಲಿ ನಕಲಿ ಮದ್ಯ ಮಾರಾಟ ದಂಧೆ ಶುರುವಾಗಿತ್ತು. 2023 ರ ಜನವರಿಯಲ್ಲಿ ಬಿಹಾರದ ಸಿವಾನ್ನಲ್ಲಿ ನಕಲಿ ಮದ್ಯ ಸೇವಿಸಿದ ಬಳಿಕ ನಾಲ್ವರು ಮೃತಪಟ್ಟಿದ್ದರು. ಈ ಸಂಬಂಧ ಪೊಲೀಸರು 16 ಜನರನ್ನು ಬಂಧಿಸಿದ್ದಾರೆ.
ಕಳೆದ ವರ್ಷ (2022) ಡಿಸೆಂಬರ್ನಲ್ಲಿ ಛಪ್ರಾದಲ್ಲಿ ನಕಲಿ ಮದ್ಯ ಸೇವಿಸಿ 80 ಮಂದಿ ಸಾವನ್ನಪ್ಪಿದ್ದರು. ಕಾಳಸಂತೆಯಲ್ಲಿ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಸ್ಥಳೀಯ ಪೊಲೀಸರಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಮೃತರ ಕುಟುಂಬಸ್ಥರು ಆರೋಪಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಏಕ್ನಾಥ್ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಗೆ ಕ್ಯಾ| ಚೌಟ ಮನವಿ
Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.