ಈಚೆಗೆ ಕಾಂಗ್ರೆಸ್ ಸೇರಿದ ಮಾಜಿ ಸಚಿವ Revu Naik Belamagi ಗೆ ಕಾಂಗ್ರೆಸ್ ಟಿಕೆಟ್
Team Udayavani, Apr 15, 2023, 3:32 PM IST
ಕಲಬುರಗಿ: ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ತವರು ಜಿಲ್ಲೆಯ ಎಲ್ಲಒಂಭತ್ತು ಕ್ಷೇತ್ರಗಳ ಟಿಕೆಟ್ ಅಂತಿಮವಾಗಿದ್ದು, ಕಲಬುರಗಿ ಗ್ರಾಮೀಣ ಮೀಸಲು ಕ್ಷೇತ್ರಕ್ಕೆ ಈಚೆಗೆ ಕಾಂಗ್ರೆಸ್ ಸೇರಿದ್ದ ಮಾಜಿ ಸಚಿವ ರೇವು ನಾಯಕ ಬೆಳಮಗಿಗೆ ಟಿಕೆಟ್ ಅಂತಿಮಗೊಳಿಸಲಾಗಿದೆ.
ಕಳೆದ 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗದಿದ್ದಕ್ಕೆ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದ ಮಾಜಿ ಸಚಿವ ರೇವು ನಾಯಕ ಬೆಳಮಗಿ ಈಚೆಗೆ ಅಂದರೆ ಒಂದುವರೆ ತಿಂಗಳ ಹಿಂದೆ ಕಾಂಗ್ರೆಸ್ ಸೇರಿದ್ದರು. ಮೊದಲ ಪಟ್ಟಿಯಲ್ಲೇ ಜಿಲ್ಲೆಯ ಒಂಭತ್ತು ಕ್ಷೇತ್ರಗಳ ಪೈಕಿ ಆರು ಕ್ಷೇತ್ರಗಳಿಗೆ ಹಾಗೂ ಎರಡನೇ ಪಟ್ಟಿಯಲ್ಲಿ ಎರಡು ಕ್ಷೇತ್ರಗಳಿಗೆ ಅಂತಿಮಗೊಳಿಸಿ ಕಲಬುರಗಿ ಗ್ರಾಮೀಣ ಕ್ಷೇತ್ರವೊಂದೇ ಕೈ ಬಿಡಲಾಗಿತ್ತು. ಈಗ ಮೂರನೇ ಪಟ್ಟಿಯಲ್ಲಿ ಟಿಕೆಟ್ ಘೋಷಿಸಲಾಗಿದೆ.
ಟಿಕೆಟ್ ಗಾಗಿ ಕಳೆದ 2018ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ದಿವಗಂತ ಜಿ.ರಾಮಕೃಷ್ಣ ಪುತ್ರ ವಿಜಯಕುಮಾರ ರಾಮಕೃಷ್ಣ ಗೆ ಟಿಕೆಟ್ ನೀಡಲಾಗಿತ್ತು. ಆಗ ವಿಜಯಕುಮಾರ ರಾಮಕೃಷ್ಣ ಹಾಗೂ ರೇವು ನಾಯಕ ಬೆಳಮಗಿ ಪರಾಭವಗೊಂಡಿದ್ದರು. ಆಗ ಬಿಜೆಪಿಯ ಬಸವರಾಜ ಮತ್ತಿಮಡು ಗೆಲುವು ಸಾಧಿಸಿದರು. 1994ರಿಂದ 2008ರ ವರೆಗೆ ಸತತ ನಾಲ್ಕು ಸಲ ಬಿಜೆಪಿಯಿಂದ ಗೆದ್ದಿರುವ ಬೆಳಮಗಿ ಬಿಜೆಪಿ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರ ಸೇರಿ ಒಟ್ಟಾರೆ ಏಳು ವರ್ಷ ಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ.
ಜಿಲ್ಲೆಯ ಎಲ್ಲ ಒಂಭತ್ತು ಕ್ಷೇತ್ರಗಳಿಗೆ ಅಭ್ಯರ್ಥಿ ಗಳನ್ನು ಬಿಜೆಪಿಗಿಂತ ಮುಂಚೆಯೇ ಕಾಂಗ್ರೆಸ್ ಪ್ರಕಟಿಸಿದ್ದು, ಈ ಮೂಲಕ ಚುನಾವಣಾ ಕಹಳೆ ಮೊಳಗಿಸಲಾಗಿದೆ.
ಜಿಲ್ಲೆಯ ಒಂಭತ್ತು ವಿಧಾನಸಭಾ ಕ್ಷೇತ್ರಗಳ ಪೈಕಿ ಈಗ ನಾಲ್ಕರಲ್ಲಿ ಮಾತ್ರ ಕಾಂಗ್ರೆಸ್ ಶಾಸಕರಿದ್ದು, ಇದನ್ನು ಡಬಲ್ ಮಾಡುವ ಸಂಕಲ್ಪ ಕಾಂಗ್ರೆಸ್ ಹೊಂದಿದೆ.
ಜೇವರ್ಗಿಯಿಂದ ಡಾ.ಅಜಯಸಿಂಗ್, ಚಿತ್ತಾಪುರ ದಿಂದ ಪ್ರಿಯಾಂಕ್ ಖರ್ಗೆ, ಸೇಡಂ ಕ್ಷೇತ್ರದಿಂದ ಡಾ. ಶರಣ ಪ್ರಕಾಶ ಪಾಟೀಲ್, ಆಳಂದದಲ್ಲಿ ಬಿ.ಆರ್.ಪಾಟೀಲ್, ಅಫಜಲಪುರ ದಲ್ಲಿ ಎಂ.ವೈ ಪಾಟೀಲ್, ಕಲಬುರಗಿ ದಕ್ಷಿಣದಲ್ಲಿ ಅಲ್ಲಮಪ್ರಭು ಪಾಟೀಲ್, ಕಲಬುರಗಿ ಉತ್ತರ ದಲ್ಲಿ ಖನೀಜಾ ಫಾತೀಮಾ, ಚಿಂಚೋಳಿಯಲ್ಲಿ ಸುಭಾಷ ರಾಠೋಡ ಈಗಾಗಲೇ ಟಿಕೆಟ್ ನೀಡಲಾಗಿದ್ದರೆ ಅಂತೀಮವಾಗಿ ರೇವು ನಾಯಕ ಬೆಳಮಗಿಗೆ ಟಿಕೆಟ್ ಪ್ರಕಟಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.