ಕುಕನೂರು: ರುದ್ರಭೂಮಿ ಸ್ವಾಧೀನವಾಗದಿದ್ರೆ ಚುನಾವಣೆ ಬಹಿಷ್ಕಾರ

ಸಮಸ್ಯೆ ಬಗೆಹರಿಸದಿದ್ದರೆ ವಿಧಾನಸಭೆ ಚುನಾವಣೆ ಗ್ರಾಮಸ್ಥರೆಲ್ಲರೂ ಬಹಿಷ್ಕರಿಸುತ್ತೇವೆ

Team Udayavani, Apr 15, 2023, 5:59 PM IST

ಕುಕನೂರು: ರುದ್ರಭೂಮಿ ಸ್ವಾಧೀನವಾಗದಿದ್ರೆ ಚುನಾವಣೆ ಬಹಿಷ್ಕಾರ

ಕುಕನೂರು: ತಲೆಮಾರುಗಳಿಂದ ಶವ ಸಂಸ್ಕಾರಕ್ಕೆ ಬಳಸುತ್ತಿದ್ದ ರುದ್ರಭೂಮಿ ಭೂ ಸ್ವಾಧೀನಪಡಿಸಿಕೊಳ್ಳಲಾಗಿದೆ. ಅದನ್ನು ಮರಳಿ ನೀಡದಿದ್ದರೆ ಚುನಾವಣೆ ಬಹಿಷ್ಕರಿಸುವುದಾಗಿ ದ್ಯಾಂಪೂರು ಗ್ರಾಮಸ್ಥರು ತಹಶೀಲ್ದಾರ್‌ ನೀಲಪ್ರಭಾ ಅವರಿಗೆ ಮನವಿ ಸಲ್ಲಿಸಿ ಎಚ್ಚರಿಸಿದರು.

ದ್ಯಾಂಪೂರು ಗ್ರಾಮದ ಸರ್ವೇ ನಂ.225ರ ಜಮೀನಿನಲ್ಲಿ ತಲೆ ತಲಾಂತರದಿಂದ ಅಂತ್ಯಸಂಸ್ಕಾರ ಮಾಡಲಾಗುತ್ತಿದೆ. ಸದ್ಯ ಈ ಭೂಮಿಯನ್ನು ರುದ್ರಭೂಮಿಗೆ ಭೂಸ್ವಾ ಧೀನ ಮಾಡಬೇಕು ಹಾಗೂ ಕೂಡಲೇ ಪಹಣಿ 11ನೇ ಕಲಂನಲ್ಲಿ ರುದ್ರಭೂಮಿಗೆ ಭೂಸ್ವಾ ಧೀನ ಎಂದು ನಮೂದು ಮಾಡಬೇಕು ಎಂದು ಆಗ್ರಹಿಸಿದರು.

ಭೂ ಮಾಲೀಕರು ಬೇರೆಯವರಿಗೆ ಭೂಮಿ ಮಾರಾಟ ಮಾಡಿದ್ದಾರೆ. ಖಾತಾ ಬದಲಾವಣೆ ಸಂದರ್ಭದಲ್ಲಿ ಗ್ರಾಮಸ್ಥರಿಂದ ತಕರಾರು ಅರ್ಜಿ ಸಲ್ಲಿಸಲಾಗಿತ್ತು. ಅದರಂತೆ ತಾಲೂಕು ದಂಡಾಧಿಕಾರಿಗಳು ಮೂರು ಬಾರಿ ಮುದ್ದತ್‌ ನಿಗದಿಪಡಿಸಿ ವಿಚಾರಣೆ ನಡೆಸಿದ್ದಾರೆ. ಕೊನೆ ವಿಚಾರಣೆಗೆ ಮೊದಲು ದಂಡಾಧಿಕಾರಿಗಳು ಸರ್ವೇ ನಂ.225ಕ್ಕೆ ಸ್ವತಃ ಭೇಟಿ ಮಾಡಿ ಸ್ಥಿತಿಗತಿ ಅವಲೋಕಿಸಿ ಸ್ಮಶಾನ ಇರುವುದು ಸತ್ಯವೆಂದು ಮನಗಂಡಿದ್ದಾರೆ.

ಪಹಣಿ ಕಲಂ ನಂ.11ರಲ್ಲಿ ಸ್ಮಶಾನಕ್ಕಾಗಿ ಭೂ ಸ್ವಾಧೀನ ಪ್ರಕ್ರಿಯೆ ಚಾಲು ಇರುವುದೆಂದು ಕಾಣಿಸಿ ತೀರ್ಪು ಕೊಡುವುದಾಗಿ ಜನರ ಮುಂದೆ ತಿಳಿಸಿದ್ದರಿಂದ ಸಾರ್ವಜನಿಕರು ಒಪ್ಪಿದ್ದರು. ಈ ಪ್ರಕಾರ ಸರ್ವೇ ನಂ.225ರ ಪಹಣಿ ಕಾಲಂ ನಂ 11ರಲ್ಲಿ ಸ್ಮಶಾನಕ್ಕಾಗಿ ಭೂ ಸ್ವಾ ಧೀನ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ನಮೂದಿಸಬೇಕು ಎಂದು ತಿಳಿಸಿದ್ದು, ಆ ಪ್ರಕ್ರಿಯೆ ಇನ್ನೂ ಆಗಿಲ್ಲ. ಆದ್ದರಿಂದ ಸಮಸ್ಯೆ ಬಗೆಹರಿಸದಿದ್ದರೆ ವಿಧಾನಸಭೆ ಚುನಾವಣೆ ಗ್ರಾಮಸ್ಥರೆಲ್ಲರೂ ಬಹಿಷ್ಕರಿಸುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ.

ಕುಕನೂರು ಪಪಂ ಸದಸ್ಯ ಗಗನ ನೋಟಗಾರ ಮಾತನಾಡಿ, ದ್ಯಾಂಪೂರು ಗ್ರಾಮದ ರುದ್ರಭೂಮಿ ಕುಕನೂರಿನ ಮೂರ್‍ನಾಲ್ಕು ವಾರ್ಡಿನ ಜನರು ಸಹ ಅಂತ್ಯಸಂಸ್ಕಾರಕ್ಕೆ ತೆರಳುತ್ತಾರೆ. ಆದ್ದರಿಂದ ಕೂಡಲೇ ಅಧಿಕಾರಿಗಳು ಭೂಸ್ವಾಧೀನ ಮಾಡಿ ರುದ್ರಭೂಮಿ ಒದಗಿಸಿಸುವಂತೆ ಮನವಿ ಮಾಡಿದರು. ತಹಶೀಲ್ದಾರ್‌ ನೀಲಪ್ರಭಾಮನವಿ ಸ್ವೀಕರಿಸಿ ಮೇಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸುವುದಾಗಿ ತಿಳಿಸಿ, ಈಗಾಗಲೇ ರುದ್ರಭೂಮಿಗೆ ಆ ಜಮೀನಿನಲ್ಲಿ ಭೂಸ್ವಾಧೀನ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದರು.

ಈ ವೇಳೆ ಗ್ರಾಪಂ ಸದಸ್ಯರಾದ ಮುದಿಯಪ್ಪ ಬೀಡಿನಾಳ, ಬಸವರೆಡ್ಡಿ ಬೀಡಿನಾಳ, ಪ್ರೇಮರಾಜ ಮಾಲಗಿತ್ತಿ, ದೇವಪ್ಪ ಮರಡಿ, ಬಸವರಾಜ ಮಾಸೂರು, ಸಂಗಪ್ಪ ನೋಟಗಾರ, ಹನುಮಪ್ಪ ಸದರಿ, ಸುರೇಶ ಆರೇರ, ಯಲ್ಲಪ್ಪ ನೋಟಗಾರ, ಮಂಜುನಾಥ ಮರಡಿ, ಭೀಮರೆಡ್ಡಿ ಬೀಡಿನಾಳ, ವಿಜಯರೆಡ್ಡಿ ಬೀಡಿನಾಳ, ಹನುಮಪ್ಪ ನೋಟಗಾರ, ಹೊನ್ನಪ್ಪ ಮರಡಿ, ಲಕ್ಷ್ಮಣ ಆರೇರ ಇತರರಿದ್ದರು.

ಟಾಪ್ ನ್ಯೂಸ್

supreem

Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್

BGT Series: Indians Should not forget the battle of Pujara at the Gabba

BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

ಹೋಟೆಲ್ ಕೊಠಡಿಯಲ್ಲೇ ಹಿರಿಯ ವೈದ್ಯ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Rakesh Adiga in Maryade Prashne movie

Rakesh Adiga: ನಾನು ಮಿಡಲ್‌ ಕ್ಲಾಸ್‌ ಹುಡುಗ ಮರ್ಯಾದೆ ಉಳಿಸಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ

Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ

ಗಂಗಾವತಿ: ಹಳ್ಳದ ಬದಿ ಹೊಸ್ಕೇರಾ-ಡಗ್ಗಿ ದಲಿತರ ಶವ ಸಂಸ್ಕಾರ- ಅಸ್ಪ್ರಶ್ಯತೆ ಇನ್ನೂ ಜೀವಂತ!

ಗಂಗಾವತಿ: ಹಳ್ಳದ ಬದಿ ಹೊಸ್ಕೇರಾ-ಡಗ್ಗಿ ದಲಿತರ ಶವ ಸಂಸ್ಕಾರ- ಅಸ್ಪ್ರಶ್ಯತೆ ಇನ್ನೂ ಜೀವಂತ!

11-kushtagi

Kushtagi: ದ್ಯಾಮವ್ವ ದೇವಿ ಗುಡಿಗೆ ಭಕ್ತರಂತೆ ಹೋಗಿ ದರ್ಶನ ಪಡೆದ ವಾನರ

ರೀಲ್‌ನಿಂದ ರಿಯಲ್‌ ಕೃಷಿಯತ್ತ ಚಿತ್ರೋದ್ಯಮಿ ಚಿತ್ತ; ‌ಬಸವರಾಜ ಚಿತ್ರ ಮಂದಿರದ ಮಾಲೀಕ ಕೋಳೂರು!

ರೀಲ್‌ನಿಂದ ರಿಯಲ್‌ ಕೃಷಿಯತ್ತ ಚಿತ್ರೋದ್ಯಮಿ ಚಿತ್ತ; ‌ಬಸವರಾಜ ಚಿತ್ರ ಮಂದಿರದ ಮಾಲೀಕ ಕೋಳೂರು!

ದೋಟಿಹಾಳ: ಅನುದಾನವಿಲ್ಲದೆ ಮುಚ್ಚುವ ಹಂತಕ್ಕೆ ತಾಂಡಾ ನಿಗಮದ ಗ್ರಂಥಾಲಯಗಳು

ದೋಟಿಹಾಳ: ಅನುದಾನವಿಲ್ಲದೆ ಮುಚ್ಚುವ ಹಂತಕ್ಕೆ ತಾಂಡಾ ನಿಗಮದ ಗ್ರಂಥಾಲಯಗಳು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

supreem

Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್

sirsi

Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ

Yathanaa

Waqf Property: ಸಚಿವ ಜಮೀರ್‌ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್‌

ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ

ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ

BGT Series: Indians Should not forget the battle of Pujara at the Gabba

BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.