Rain Update: ರಾಜ್ಯದ ಕೆಲವೆಡೆ ಬಿರುಗಾಳಿ ಸಹಿತ ಮಳೆ-ಹವಾಮಾನ ಇಲಾಖೆ ಮುನ್ನೆಚ್ಚರಿಕೆ
Team Udayavani, Apr 16, 2023, 7:57 AM IST
ಬೆಂಗಳೂರು: ಕರಾವಳಿಯ ಎಲ್ಲ ಜಿಲ್ಲೆಗಳ ಒಂದೆರಡು ಕಡೆ, ಉತ್ತರ ಒಳನಾಡಿನ ಕೆಲ ಭಾಗಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನಿಂದ ಕೂಡಿದ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ಕೊಟ್ಟಿದೆ.
ಕರಾವಳಿಯ ಒಂದೆರಡು ಕಡೆ ಹಾಗೂ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಕಲಬುರಗಿ, ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನಿಂದ ಕೂಡಿದ ಮಳೆಯಾಗುವ ಸಾಧ್ಯತೆಗಳಿವೆ. ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ತಲುಪುವ ಸಾಧ್ಯತೆಗಳಿವೆ. ಗರಿಷ್ಠ ಉಷ್ಣಾಂಶವು ಕರಾವಳಿಯ ಕೆಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗಲಿದೆ.
ಶನಿವಾರ ಬೆಳಗಾವಿಯ ಚಿಕ್ಕೋಡಿಯಲ್ಲಿ 5, ಬೆಳಗಾವಿಯ ರಾಯಬಾಗ, ಬೈಲಹೊಂಗಲ, ಧಾರವಾಡದ ಕಲಘಟಗಿ ತಲಾ 2, ಉತ್ತರ ಕನ್ನಡದ ಹಳಿಯಾಳ, ಮುಂಡಗೋಡ, ಜಗಲಬೆಟ್, ಬೀದರ್, ಮಂಠಾಳ, ಬಾಲ್ಕಿ, ಬೆಳಗಾವಿಯ ನಿಪ್ಪಾಣಿ, ಸುತಗಟ್ಟಿ, ಮುಟ್ಟಿಕೊಪ್ಪ, ವಿಜಯಪುರದ ಇಂಡಿ, ಬಾಗಲಕೋಟೆಯ ಮಹಲಿಂಗಪುರದಲ್ಲಿ ತಲಾ 2 ಸೆಂ.ಮೀ. ಮಳೆಯಾಗಿದೆ.
ಕಲಬುರಗಿಯಲ್ಲಿ 40.9 ಡಿಗ್ರಿ ಸೆಲ್ಸಿಯಸ್ ರಾಜ್ಯದಲ್ಲೇ ಅತ್ಯಧಿಕ ತಾಪಮಾನ ದಾಖಲಾಗಿದೆ. ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ 36 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ರಾಯಚೂರು 40, ಬಳ್ಳಾರಿ 39.4, ಕೊಪ್ಪಳ 38.6, ಗದಗ 38.6, ವಿಜಯಪುರ 38.5, ದಾವಣಗೆರೆ 37.2, ಮಂಗಳೂರು 35.6 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary: ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
Covid Scam: ಕೋವಿಡ್ ಅಕ್ರಮ ವರದಿಯಿಂದ ಏನೂ ಆಗದು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ
Waqf Notice: ವಕ್ಫ್ ಬೋರ್ಡ್ ರದ್ದತಿಗೆ ಪಕ್ಷಭೇದ ಮರೆತು ಶ್ರಮಿಸಿ: ಪಲಿಮಾರು ಶ್ರೀ
By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್ ಕುಮಾರಸ್ವಾಮಿಗೋ?
Election Campaign: ಉಪ ಚುನಾವಣೆ ಬಹಿರಂಗ ಪ್ರಚಾರಕ್ಕೆ ನಾಳೆ ತೆರೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.