ಲಕ್ಷಕ್ಕೂ ಹೆಚ್ಚು ಹಣ ಡ್ರಾ ಮಾಡಿದ್ರೆ ಪರಿಶೀಲಿಸಿ
Team Udayavani, Apr 16, 2023, 2:12 PM IST
ಮಂಡ್ಯ: ಬ್ಯಾಂಕ್‌ಗಳಲ್ಲಿ ಒಂದು ಲಕ್ಷ ಅಥವಾ ಅದಕ್ಕಿಂತ ಹೆಚ್ಚಿನ ನಗದನ್ನು ಗ್ರಾಹಕರು ತೆಗೆದ ಸಂದರ್ಭದಲ್ಲಿ ಪರಿಶೀಲಿಸಬೇಕು. ಒಂದೇ ಖಾತೆ ಯಿಂದ ಹಲವು ಖಾತೆಗಳಿಗೆ ಪೇಟಿಎಂ, ಗೂಗಲ್ ಪೇ ಅಥವಾ ಇನ್ನಿತರೆ ವಿಧದಿಂದ ಹಣ ಜಮೆಯಾದರೆ ಬ್ಯಾಂಕ್‌ಗಳು ನೀಡಲಾಗಿರುವ ನಮೂನೆಗಳಲ್ಲಿ ವರದಿ ನೀಡಬೇಕು ಎಂದು ಚುನಾವಣೆ ವೆಚ್ಚ ವೀಕ್ಷಕರು ಅಧಿಕಾರಿಗಳಿಗೆ ಸೂಚಿಸಿದರು.
ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು.
ಬ್ಯಾಂಕ್ ಮ್ಯಾನೇಜರ್‌ಗಳಿಗೆ ತಿಳಿಸಿ: ಪ್ರತಿ ದಿನ ಬ್ಯಾಂಕ್‌ಗಳಿಂದ ವರದಿ ಪಡೆದುಕೊಳ್ಳಬೇಕು. ಗ್ರಾಮೀಣ ಭಾಗದಲ್ಲಿರುವ ಸಣ್ಣ ಬ್ಯಾಂಕ್‌ಗಳು, ಕೋ- ಆಪರೇಟಿವ್, ಖಾಸಗಿ ಸೇರಿದಂತೆ ಯಾವುದೇ ಬ್ಯಾಂಕ್ ಬಿಟ್ಟು ಹೋಗದಂತೆ ನೋಡಿಕೊಳ್ಳಬೇಕು. ಬ್ಯಾಂಕ್ ಮ್ಯಾನೇಜರ್‌ಗಳ ಸಭೆ ಕರೆದು ಅವರಿಗೆ ಇನ್ನೊಂದು ಬಾರಿ ವಿಷಯವನ್ನು ತಿಳಿಸಬೇಕು ಎಂದು ತಿಳಿಸಿದರು.
ಅಬಕಾರಿ ಅಕ್ರಮಗಳ ಬಗ್ಗೆ ಸೂಕ್ಷ್ಮ ನಿಗಾ ವಹಿಸಿ: ಅಬಕಾರಿ ಮಾರಾಟದಲ್ಲಿ ಡೀಲರ್ ಗಳಿಂದ ಈ ಹಿಂದಿನ ತಿಂಗಳುಗಳಲ್ಲಿ ಮಾರಾಟವಾಗುತ್ತಿದ್ದ ಮದ್ಯ ಹಾಗೂ ಪ್ರಸ್ತುತ ಮಾರಾಟವಾಗುತ್ತಿರುವ ಬಗ್ಗೆ ಪ್ರತಿದಿನ ತಾಳೆ ಮಾಡಿ ವ್ಯತ್ಯಾಸ ಕಂಡುಬಂದಲ್ಲಿ ಪರಿಶೀಲಿಸಬೇಕು. ಮಾರಾಟದಾರರು ಕೂಪನ್ ಮೂಲಕ ಮಾರಾಟ ಮಾಡುವುದು ಕಂಡು ಬಂದಲ್ಲಿ ಕ್ರಮ ವಹಿಸಬೇಕು. ಅಬಕಾರಿ ಅಕ್ರಮಗಳ ಬಗ್ಗೆ ಸೂಕ್ಷ್ಮ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಚುರುಕಾಗಿ ಕಾರ್ಯನಿರ್ವಹಿಸಿ: ಎಲ್ಲ ವಿಧಾನಸಭಾ ಕ್ಷೇತ್ರದ ಚುನಾವಣಾ ಕಾರಿಗಳು ಚುರುಕಾಗಿ ಕಾರ್ಯ ನಿರ್ವಹಿಸಬೇಕು. ಅವರ ವ್ಯಾಪ್ತಿಯಲ್ಲಿ ನಿರ್ವಹಿಸುವ ಎಸ್‌ಎಸ್‌ಟಿ, ವಿಎಎಸ್‌ಟಿ, ವಿವಿಟಿ, ಚೆಕ್‌ಪೋಸ್ಟ್ ಸೇರಿದಂತೆ ಚುನಾವಣೆಗೆ ನಿಯೋಜನೆಯಾಗಿರುವ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕೆಲಸ ನಿರ್ವಹಿಸುತ್ತಿರುವುದನ್ನು ಖಾತ್ರಿಪಡಿಸಿಕೊಳ್ಳಬೇಕು.ಈ ಬಗ್ಗೆ ಸೂಚನೆ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.
ವಿವಿಧ ಅಧಿಕಾರಿಗಳ ಬಗ್ಗೆ ಮಾಹಿತಿ: ಜಿಲ್ಲಾ ಚುನಾವಣಾ ಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಮಾತನಾಡಿ, ಜಿಲ್ಲೆಯಲ್ಲಿ ಚುನಾವಣಾ ಹಿನ್ನೆಲೆಯಲ್ಲಿ ನಿಯೋಜಿಸಲಾಗಿರುವ ಸಂಚಾರಿ ಜಾಗೃತ ದಳ, ಸೆಕ್ಟರ್ ಆಫೀಸರ್, ಐಟಿ ತಂಡ, ಚೆಕ್‌ಪೋಸ್ಟ್‌ಗಳ ವಿವರ, ಮಾದರಿ ನೀತಿ ಸಂಹಿತೆ ಜಾರಿಗೂ ಮುನ್ನ ಹಾಗೂ ಮಾದರಿ ನೀತಿ ಸಂಹಿತೆ ಜಾರಿಯಾದ ನಂತರ ವಿವಿಧ ಅಕ್ರಮಗಳಲ್ಲಿ ವಶಪಡಿಸಿಕೊಂಡಿರುವ ನಗದು, ಮದ್ಯ ಹಾಗೂ ಇನ್ನಿತರ ವಸ್ತುಗಳ ಬಗ್ಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಯತೀಶ್, ಜಿಪಂ ಸಿಇಒ ಶೇಖ್ ತನ್ವೀರ್ ಆಸೀಫ್, ಅಪರ ಜಿಲ್ಲಾ ಧಿಕಾರಿ ಡಾ.ಎಚ್.ಎಲ್.ನಾಗರಾಜು, ಲೀಡ್ ಬ್ಯಾಂಕ್ ಮ್ಯಾನೇಜರ್ ದೀಪಕ್, ಅಬಕಾರಿ ಅಧಿಕಾರಿ ಮಹಾದೇವಿ ಬಾಯಿ, ಮುಡಾ ಆಯುಕ್ತೆ ಐಶ್ವರ್ಯ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ
Maddur; ಕೆಲಸದ ಒತ್ತಡ: ಎಂಜಿನಿಯರ್ ಆತ್ಮಹ*ತ್ಯೆ
Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.