Gangavati Election: ಕಿಷ್ಕಿಂದಾ ಅಂಜನಾದ್ರಿ ಸುತ್ತ ಅಭ್ಯರ್ಥಿಗಳ ಗಿರಕಿ
ಗಾಲಿ ರೆಡ್ಡಿ ಯಿಂದ 5 ಸಾವಿರ ಕೋಟಿ ರೂ.ಯೋಜನೆ ಭರವಸೆ
Team Udayavani, Apr 16, 2023, 6:29 PM IST
ಗಂಗಾವತಿ: ಗಂಗಾವತಿ ವಿಧಾನಸಭಾ ಕ್ಷೇತ್ರದ ಚುನಾವಣಾ ಕಾವು ಏರುತ್ತಿದ್ದು ಎಲ್ಲಾ ಪಕ್ಷಗಳ ಅಭ್ಯರ್ಥಿಗಳ ಚಿತ್ತ ಇತಿಹಾಸ ಪ್ರಸಿದ್ಧ ಕಿಷ್ಕಿಂದಾ ಅಂಜನಾದ್ರಿಯ ಸುತ್ತ ನೆಟ್ಟಿದೆ. ಕಳೆದ ಎರಡು ದಶಕಗಳಿಂದ ಕಿಷ್ಕಿಂದಾ ಅಂಜನಾದ್ರಿಯಾ ಇತಿಹಾಸ ಮತ್ತು ಪ್ರಚಾರ ವ್ಯಾಪಕವಾಗಿದ್ದು ದೇಶ ವಿದೇಶದ ಭಕ್ತರು ಮತ್ತು ಪ್ರವಾಸಿಗರು ನಿತ್ಯ ಆಗಮಿಸುತ್ತಿದ್ದಾರೆ.
ಬಿಜೆಪಿ ಸೇರಿ ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳು ಪ್ರಸ್ತುತ ವಿಧಾನಸಭಾ ಚುನಾವಣೆಯಲ್ಲಿ ಕಿಷ್ಕಿಂದಾ ಅಂಜನಾದ್ರಿಯನ್ನು ತಮ್ಮ ಭಾಷಣ ಮತ್ತು ಪ್ರಚಾರದಲ್ಲಿ ವ್ಯಾಪಕವಾಗಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಗಂಗಾವತಿ ಕ್ಷೇತ್ರಕ್ಕೆ ಪ್ರಚಾರಕ್ಕೆ ಆಗಮಿಸುವ ರಾಜ್ಯ ಮತ್ತು ರಾಷ್ಟ್ರಮಟ್ಟದ ಮುಖಂಡರನ್ನು ಸ್ಥಳೀಯ ಮುಖಂಡರು ಅಂಜನಾದ್ರಿಗೆ ಪ್ರಥಮದಲ್ಲಿ ಕರೆದುಕೊಂಡು ಬಂದು ದೇವರ ದರ್ಶನ ಮಾಡಿಸುತ್ತಿದ್ದಾರೆ.
ಅಂಜನಾದ್ರಿ ಗೆ ಆಗಮಿಸುವ ಪ್ರತಿಯೊಬ್ಬನು ತಾವು ಅಂಜನಾದ್ರಿಯಲ್ಲಿ ಮೂಲ ಸೌಕರ್ಯಗಳನ್ನು ಕಲ್ಪಿಸುವ ಮೂಲಕ ಇನ್ನು ವಿಶ್ವವಿಖ್ಯಾತಿ ಮಾಡಲಾಗುತ್ತದೆ ಆದ್ದರಿಂದ ತಮ್ಮ ಅಭ್ಯರ್ಥಿಗೆ ಮತ ಚಲಾಯಿಸುವಂತೆ ಮನವಿ ಮಾಡುವ ಮೂಲಕ ಅಂಜನಾದ್ರಿಯ ಸುತ್ತ ಗಿರಕಿ ಹೊಡೆಯುತ್ತಿದ್ದಾರೆ.
ಬಿಜೆಪಿ: 2008 ಮತ್ತು 2019 ರಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಭಾರತೀಯ ಜನತಾ ಪಾರ್ಟಿಯನ್ನು ಸಂಘ ಪರಿವಾರದ ಸಂಘಟನೆಗಳ ಮೂಲಕ ಅಂಜನಾದ್ರಿಯನ್ನು ವ್ಯಾಪಕವಾಗಿ ಪ್ರಚಾರಕ್ಕೆ ತಂದಿದೆ. ಪ್ರತಿವರ್ಷ ಹನುಮ ಜಯಂತಿ ಮತ್ತು ಹನುಮದೃತ್ ಸಂದರ್ಭದಲ್ಲಿ ಸಂಘ ಪರಿವಾರದ ಯುವಕರಿಗೆ ಹನುಮಾಲೆ ಧಾರಣೆ ವೃತಾಚರಣೆ ಹಮ್ಮಿಕೊಂಡು ಧಾರ್ಮಿಕ ಕಾರ್ಯಕ್ರಮಗಳನ್ನು ಕಿಷ್ಕಿಂದಾ ಪ್ರದೇಶದಲ್ಲಿ ಆಯೋಜನೆ ಮಾಡುವ ಮೂಲಕ ವ್ಯಾಪಕ ಪ್ರಚಾರವನ್ನು ಪಡೆಯುತ್ತಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಂಜನಾದ್ರಿ ಎರಡು ಬಾರಿ ಭೇಟಿ ನೀಡಿ ಅಂಜನಾದ್ರಿಯಲ್ಲಿ ಮೂಲ ಸೌಕರ್ಯವನ್ನು ಕಲ್ಪಿಸಲು ಸುಮಾರು 125 ಕೋಟಿ ರೂ.ಯೋಜನೆಯ ನೀಲ ನಕ್ಷೆಗೆ ಯೋಜನೆಗೆ ಅಡಿಗಲ್ಲು ಹಾಕಿದ್ದರು. ಅಂಜನಾದ್ರಿ ಸುತ್ತಲೂ ಸುಮಾರು 100 ಎಕರೆಗೂ ಹೆಚ್ಚು ರೈತರ ಭೂಮಿಯನ್ನು ವಶಪಡಿಸಿಕೊಂಡು 600 ವಸತಿ ಕೊಠಡಿಗಳು ಸೇರಿದಂತೆ ಶುದ್ಧ ಕುಡಿಯುವ ನೀರು, ಪರಿಕ್ರಮ ರಸ್ತೆ ಮತ್ತು ಬೆಟ್ಟ ಹತ್ತಲು ರೂಪ್ ವೇ ನಿರ್ಮಿಸುವ ಯೋಜನೆಯನ್ನು ಅನುಷ್ಠಾನ ಮಾಡಲು ಸರಕಾರ ಸಿದ್ಧತೆ ನಡೆಸಿತ್ತು. ಪ್ರವಾಸೋದ್ಯಮ ಇಲಾಖೆಯಿಂದ ವಾಹನಗಳ ಪಾರ್ಕಿಂಗ್ ಮತ್ತು ಸಾರ್ವಜನಿಕರ ಶೌಚಾಲಯ ನಿರ್ಮಾಣ ಹೊರತುಪಡಿಸಿ ಯಾವುದೇ ಕಾಮಗಾರಿ ಆರಂಭವಾಗಿಲ್ಲ.
5 ಸಾವಿರ ಕೋಟಿ ರೆಡ್ಡಿ ಘೋಷಣೆ
ಕಲ್ಯಾಣ ರಾಜ್ಯ ಪ್ರಗತಿ ಪಾರ್ಟಿ ಸ್ಥಾಪನೆ ಮಾಡಿ ಗಂಗಾವತಿ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಬಳ್ಳಾರಿಯ ಗಣಿ ಧಣಿ ಗಾಲಿ ಜನಾರ್ದನರೆಡ್ಡಿ ಅವರು ಅಂಜನಾದ್ರಿಯಲ್ಲಿ ಮೂಲಸೌಕರ್ಯ ಕಲ್ಪಿಸುವ ಸಲುವಾಗಿ ಮುಂಬರುವ ನೂತನ ಸರ್ಕಾರದಲ್ಲಿ 5000 ಕೋಟಿ ರೂ.ಗಳನ್ನು ನೆರವು ಪಡೆಯಲಾಗುತ್ತದೆ.ಆದ್ದರಿಂದ ತಮ್ಮನ್ನು ಗಂಗಾವತಿ ಕ್ಷೇತ್ರದಿಂದ ಚುನಾಯಿಸುವಂತೆ ಪ್ರಚಾರದ ಪ್ರತಿ ಸಭೆಯಲ್ಲೂ ಮತದಾರರಲ್ಲಿ ಮನವಿ ಮಾಡುತ್ತಿದ್ದಾರೆ.
2 ಕೋಟಿಯಲ್ಲಿ ಮೆಟ್ಟಿಲು ನಿರ್ಮಾಣ: ಗಂಗಾವತಿ ಕ್ಷೇತ್ರದಿಂದ ಗೆದ್ದು ಸಚಿವರಾಗಿದ್ದ ಇಕ್ಬಾಲ್ ಅನ್ಸಾರಿ ತಾವು ಅಧಿಕಾರದಲ್ಲಿದ್ದಾಗ ಅಂಜನಾದ್ರಿ ಬೆಟ್ಟ ಮತ್ತು ಆದಿಶಕ್ತಿ ದೇಗುಲಕ್ಕೆ ತಲಾ ಎರಡು ಕೋಟಿ ರೂ.ಅನುದಾನ ಬಿಡುಗಡೆ ಮಾಡಿ ಅಂಜನಾದ್ರಿ ಬೆಟ್ಟಕ್ಕೆ ಮೆಟ್ಟಿಲು ಮತ್ತು ಬಿಸಿಲು ಬೀಳದಂತೆ ತಗಡಿನ ಹೊದಿಕೆಯನ್ನು ನಿರ್ಮಿಸಲಾಗಿದೆ.ಬಿಜೆಪಿ ಸರ್ಕಾರದವರು ಯಾವುದೇ ಅಭಿವೃದ್ಧಿಯನ್ನು ಮಾಡದೇ ಸುಳ್ಳು ಪ್ರಚಾರ ಪಡೆದುಕೊಳ್ಳುತ್ತಿದ್ದಾರೆ.ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಂಜನಾದ್ರಿ ಗೆ ಹೆಚ್ಚಿನ ಅನುದಾನ ಮಂಜೂರಾಗಿದೆ ಎಂದು ಹೇಳುತ್ತಿದ್ದಾರೆ.
ಪ್ರಸ್ತುತ ವಿಧಾನಸಭಾ ಚುನಾವಣೆಯಲ್ಲಿ ಅಂಜನಾದ್ರಿ ಬೆಟ್ಟ ಪ್ರಚಾರದ ಸರಕಾಗಿದ್ದು ಪ್ರತಿಯೊಬ್ಬ ರಾಜಕಾರಣಿಗಳನ್ನು ಮತ್ತು ಮುಖಂಡರನ್ನು ಅಂಜನಾದ್ರಿ ಬೆಟ್ಟಕ್ಕೆ ಕರೆದುಕೊಂಡು ಹೋಗಿ ಅಲ್ಲಿಂದಲೇ ಪ್ರಚಾರ ಆರಂಭಿಸಿದ್ದಾರೆ.
ಆನೆಗೊಂದಿ ಮತ್ತು ಅಂಜನಾದ್ರಿ ಭಾಗ ಹಂಪಿ ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಗೆ ಬರುವುದರಿಂದ ಇಲ್ಲಿ ಪ್ರಾಧಿಕಾರದ ನಿಯಮಗಳನ್ನು ಪಾಲನೆ ಕಡ್ಡಾಯವಾಗಿದೆ. ಯಾವುದೇ ಅಭಿವೃದ್ಧಿ ಕಾರ್ಯಗಳು ಮಾಡಲು ಬರುವುದಿಲ್ಲ.ಸುತ್ತಲಿನ 15 ಹಳ್ಳಿಗಳಲ್ಲಿ ಹಂಪಿ ಪ್ರಾಧಿಕಾರದ ನಿಯಮಗಳು ಪಾಲನೆ ಮಾಡಬೇಕಾಗಿರುವುದರಿಂದ ಪ್ರಾಧಿಕಾರದ ನಿರಾಪೇಕ್ಷಣ ಪತ್ರ ತರುವುದು ಕಡ್ಡಾಯವಾಗಿದೆ .
ಈ ನಿರಪೇಕ್ಷಣ ಪತ್ರಕ್ಕಾಗಿ ಆನೆಗೊಂದಿ ಭಾಗದ 15 ಗ್ರಾಮಸ್ಥರು ಹೊಸಪೇಟೆ ಮತ್ತು ಕಮಲಾಪುರಕ್ಕೆ ಅಲೆಯಬೇಕಾಗಿದೆ. ಇದನ್ನು ತಪ್ಪಿಸುವ ಕಾರ್ಯವನ್ನು ಕಾಂಗ್ರೆಸ್ ,ಬಿಜೆಪಿ ಮತ್ತು ಜೆಡಿಎಸ್ ಸರ್ಕಾರಗಳು ಮಾಡದೆ ಇರುವುದು ಈ ಭಾಗದ ಜನರಲ್ಲಿ ಆಕ್ರೋಕ್ಷಕ್ಕೆ ಕಾರಣವಾಗಿದೆ.
ಕೆ.ನಿಂಗಜ್ಜ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್
MUST WATCH
ಹೊಸ ಸೇರ್ಪಡೆ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.