ಅಪ್ರಾಪ್ತೆಯನ್ನು ಪುಸಲಾಯಿಸಿ ಬಲಾತ್ಕಾರ: ವಿಚಾರಣೆ ವೇಳೆ ಬೆಳಕಿಗೆ ಬಂತು ಬಾಲ್ಯ ವಿವಾಹ ಪ್ರಕರಣ

ಆಪ್ರಾಪ್ತೆಯ ಪತಿ, ತಂದೆ, ತಾಯಿ, ಅತ್ತೆ ಸೇರಿ ಬಲತ್ಕರಿಸಿದ ಆರೋಪಿ ವಿರುದ್ದ ಪ್ರಕರಣ

Team Udayavani, Apr 16, 2023, 9:25 PM IST

ಅಪ್ರಾಪ್ತೆಯನ್ನು ಪುಸಲಾಯಿಸಿ ಬಲಾತ್ಕಾರ: ವಿಚಾರಣೆ ವೇಳೆ ಬೆಳಕಿಗೆ ಬಂತು ಬಾಲ್ಯ ವಿವಾಹ ಪ್ರಕರಣ

ಕುಷ್ಟಗಿ: ಬಾಲ್ಯ ವಿವಾಹಿತೆ ಅಪ್ರಾಪ್ತೆಯನ್ನು ಪುಸಲಾಯಿಸಿ‌‌ ಬಲತ್ಕಾರ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಪ್ರಿಯಕರ ಯುವಕನಿಗೆ ಪೋಕ್ಸೋ ಕಾಯಿದೆ ಅಡಿ ಬಂಧಿಸಿದ ಘಟನೆ ತಾಲೂಕಿನ ಜೂಲಕುಂಟಿ ಗ್ರಾಮದಲ್ಲಿ ನಡೆದಿದೆ. ಬಾಲ್ಯ ವಿವಾಹಕ್ಕೆ ಪ್ರೋತ್ಸಾಹಿಸಿದ ಅರೋಪದ ಮೇರೆಗೆ ಆಪ್ರಾಪ್ತೆಯ ಪತಿ, ತಂದೆ, ತಾಯಿ, ಅತ್ತೆಯ ವಿರುದ್ದ ಪ್ರಕರಣ ದಾಖಲಾಗಿದೆ.

ಜೂಲಕುಂಟಿ ಗ್ರಾಮದ‌ 7 ವರ್ಷದ ಬಾಲಕಿಯನ್ನು ಬಾಲಕಿಯ ತಾಯಿಯ ಸಹೋದರ ಮಗ ತೆ‌ಗ್ಗಿಹಾಳ ಗ್ರಾಮದ ಯಮನಪ್ಪ ದೊಡ್ಡಪ್ಪ ಕುರಿ ಎಂಬಾತನೊಂದಿಗೆ ಬಾಲ್ಯ ವಿವಾಹವಾಗಿತ್ತು. ಮದುವೆ ಮಾಡಿಕೊಂಡಿದ್ದ ಯಮನಪ್ಪ ಕುರಿ ಮೂಕನಾಗಿದ್ದ. ಈತನೊಂದಿಗೆ ಅಪ್ರಾಪ್ತೆ ಮದುವೆ ಒಲ್ಲದ ಮದುವೆಯಾಗಿತ್ತು.

ನಂತರ 14 ವರ್ಷ 9 ತಿಂಗಳಾಗಿದ್ದ ಸಂಧರ್ಭದಲ್ಲಿ ಅಪ್ರಾಪ್ತೆಯೊಂದಿಗೆ ಅದೇ ಗ್ರಾಮದ ಪ್ರಿಯಕರ ಮಹಮ್ಮದ್ ರಫೀಕ್ ಶ್ಯಾಮೀದಸಾಬ್‌ ಪಿಂಜಾರ ಸಲುಗೆ ಬೆಳಸಿಕೊಂಡಿದ್ದ. ಕಳೆದ ಏಪ್ರಿಲ್ 8ರಂದು ತೆಗ್ಗಿಹಾಳ ಗ್ರಾಮದಿಂದ‌ ಬೈಕ್ ಮೇಲೆ ಹೊಸಪೇಟೆ ಗೆ ಕರೆದೊಯ್ದು ಅಲ್ಲಿಂದ ಬಸ್ಸಿನಲ್ಲಿ ಮಂಡ್ಯ ಜಿಲ್ಲೆ ಕೆ.ಎಂ.ದೊಡ್ಡಿಗೆ ಕರೆದೊಯ್ದಿದ್ದ. ಅಲ್ಲಿ ಬಾಡಿಗೆ ಮನೆ ಮಾಡಿ ಏಪ್ರೀಲ್ 9 ರಿಂದ ಏಪ್ರಿಲ್ 15 ರವರೆಗೂ ದಿನವೂ ಆಕೆಯ ಜೊತೆ ದೈಹಿಕ ಸಂಪರ್ಕ ಹೊಂದಿದ್ದ.

ಇತ್ತ ಪುತ್ರಿ ನಾಪತ್ತೆಯಾಗಿರುವ ಕುರಿತು ಮನೆಯವರ ದೂರಿನ ಮೇರೆಗೆ ಈ ಜೋಡಿಯನ್ನು ಪತ್ತೆ ಹಚ್ಚಿರುವ ತಾವರಗೇರಾ ಪೊಲೀಸರು, ತಾವರಗೇರಾ ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಅಪ್ರಾಪ್ತೆಗೆ ಬಾಲ್ಯ ವಿವಾಹ‌ವಾಗಿರುವ ವಿಚಾರ ಬೆಳಕಿಗೆ ಬಂದಿದೆ, ಈ ಹಿನ್ನೆಲೆಯಲ್ಲಿ ತಂದೆ ಅಮರೇಶ ಕನಸಾವಿ, ತಾಯಿ ಲಕ್ಷ್ಮವ್ವ ಅತ್ತೆ ಪಕೀರಮ್ಮ‌ ಕುರಿ ಹಾಗೂ ಬಾಲ್ಯದ ಪತಿ ಯಮನಪ್ಪ ಕುರಿ ವಿರುದ್ದ ಹಾಗೂ ಅಪ್ರಾಪ್ತೆಗೆ ಪುಸಲಾಯಿಸಿ‌‌ ಬಲತ್ಕರಿಸಿದ ಆರೋಪಿ ಮಹಮ್ಮದ್ ರಫೀಕ್ ಶ್ಯಾಮೀದ ಸಾಬ್ ಪಿಂಜಾರ ವಿರುದ್ದ ದೂರು ದಾಖಲಿಸಿಕೊಂಡಿದ್ದಾರೆ.

ತಂದೆ, ತಾಯಿ, ಅತ್ತೆ ಹಾಗೂ ಬಾಲ್ಯ ವಿವಾಹವಾಗಿರುವ ಪತಿ ವಿರುದ್ದ ಬಾಲ್ಯ ವಿವಾಹ ನಿಷೇಧ ಕಾಯ್ದೆ-2006 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು. ಅಪ್ರಾಪ್ತೆಯನ್ನು ಯಾಮಾರಿಸಿ ಬಲತ್ಕರಿಸಿದ ಪ್ರಿಯಕರನಿಗೆ ಪೋಕ್ಸೋ ಕಾಯ್ದೆ ಅಡಿಯಲ್ಲಿ ಬಂಧಿಸಲಾಗಿದೆ ಎಂದು ಸಿಪಿಐ ನಿಂಗಪ್ಪ ರುದ್ರಪ್ಪಗೋಳ ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.