Karnataka Polls: ಉಡುಪಿ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ನಾಮಪತ್ರ ಸಲ್ಲಿಕೆ
Team Udayavani, Apr 17, 2023, 12:50 PM IST
ಉಡುಪಿ: ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಅವರು ಜಿಲ್ಲಾ ಕಾಂಗ್ರೆಸ್ ಪ್ರಮುಖರೊಂದಿಗೆ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ತಾಲೂಕು ಕಚೇರಿಯವರೆಗೂ ಪಾದಯಾತ್ರಯಲ್ಲಿ ಬಂದು ನಾಮಪತ್ರ ಸಲ್ಲಿಸಿದರು.
ಕಾಂಗ್ರೆಸ್ ಭವನದ ಮುಂಭಾಗದಲ್ಲಿ ಸಭೆ ನಡೆಸಿ ಅನಂತರ ಅಲ್ಲಿಂದ ಪಾದಯಾತ್ರೆಯಲ್ಲಿ ಬಂದು ಬೆಳಗ್ಗೆ 11.15ಕ್ಕೆ ನಾಮಪತ್ರ ಸಲ್ಲಿಸಿದರು.
ಇದನ್ನೂ ಓದಿ:Karnataka poll 2023; ನಾಮಪತ್ರ ಸಲ್ಲಿಸಿದ ಅರುಣ್ ಪುತ್ತಿಲ- ಮೆರವಣಿಗೆಯಲ್ಲಿ ಜನಸ್ತೋಮ
ಈ ವೇಳೆ ಅವರ ತಾಯಿ ಸರಳಾ ಕಾಂಚನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ ಕಾಂಚನ್, ಕಾಪು ಅಭ್ಯರ್ಥಿ ವಿನಯ ಕುಮಾರ್ ಸೊರಕೆ, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿನಕರ ಹೇರೂರು ಇದ್ದರು.
ಇದಕ್ಕೂ ಮೊದಲು ಕಾಂಗ್ರೆಸ್ ಭವನದ ಮುಂಭಾಗದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಪ್ರಸಾದ್ ರಾಜ್ ಕಾಂಚನ್, ಚುನಾವಣೆ ಎದುರಿಸಲು ಸಜ್ಜಾಗಿದ್ದೇವೆ. ಕಾಂಗ್ರೆಸ್ ಪಕ್ಷದ ಕೊಡುಗೆಯಿಂದ ಉಡುಪಿಯಿಂದ ವಿಶ್ವ ಮಟ್ಟದ ಗುರುತಿಸಿಕೊಂಡಿದೆ. ವಿ.ಎಸ್ ಆಚಾರ್ಯ ಅವರ ದೈವಾಧೀನರಾದ ನಂತರ ಬಿಜೆಪಿ ಧೂಳಿಪಟವಾಗಿದೆ. ಕಾರ್ಯಕರ್ತರ ಕಷ್ಟ ಸುಖದಲ್ಲಿ ನಿರಂತರವಾಗಿ ನಿಮ್ಮ ಜತೆಗೆ ಇರುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.