ಅರ್ಜುನ್ ಜನ್ಯ ನಿರ್ದೇಶನದಲ್ಲಿ ‘ರೋಸಿ 45’: ಯೋಗಿಗೆ ಸಿಗಲ್ವಾ ‘ರೋಸಿ’ ಟೈಟಲ್
Team Udayavani, Apr 17, 2023, 1:12 PM IST
ಕೆಲವು ದಿನಗಳ ಹಿಂದಷ್ಟೇ ಯೋಗಿ ಅಭಿನಯದ “ರೋಸಿ’ ಚಿತ್ರ ಮುಹೂರ್ತ ಆಚರಿಸಿಕೊಂಡಿತ್ತು. ಈಗ ಈ ಚಿತ್ರದ ಟೈಟಲ್ ಕುರಿತು ಸಣ್ಣ ವಿವಾದ ಎದ್ದಿದೆ. ಈಗಾಗಲೇ “ರೋಸಿ 45′ ಎಂಬ ಟೈಟಲ್ ಅನ್ನು ಸೂರಜ್ ಪ್ರೊಡಕ್ಷನ್ ನೊಂದಾಯಿಸಿದ್ದು, ಈ ಟೈಟಲ್ ಅನ್ನು ಬೇರೆ ಯಾರೂ ಬಳಸುವಂತಿಲ್ಲ ಎಂದಿದೆ. ಈ ಕುರಿತು ಸೂರಜ್ ಪ್ರೊಡಕ್ಷನ್ಸ್ ಪತ್ರಿಕಾ ಪ್ರಕಟಣೆ ಹೊರಡಿಸಿದೆ.
“ಸೂರಜ್ ಪ್ರೊಡಕ್ಷನ್ಸ್ ಲಾಂಛನದ ಮೂಲಕ ರೋಸಿ 45 ಶೀರ್ಷಿಕೆಯನ್ನು ನೊಂದಾಯಿಸಲಾಗಿತ್ತು. ಈಗ ಡಿ.ವೈ.ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಚಿತ್ರಕ್ಕೂ “ರೋಸಿ’ ಎಂದು ಶೀರ್ಷಿಕೆ ಇಡಲಾಗಿದೆ. ಈ ವಿಷಯವನ್ನು ಕರ್ನಾಟಕ ವಾಣಿಜ್ಯ ಮಂಡಳಿ ಗಮನಕ್ಕೆ ತರಲಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮೊದಲು ಶೀರ್ಷಿಕೆ ನೊಂದಾಯಿಸಿದವರು ಮಾತ್ರ ಶೀರ್ಷಿಕೆ ಬಳಸಿಕೊಳ್ಳಬಹುದು ಎಂದು ಹೇಳಿದೆ.
ಹಾಗಾಗಿ ಸೂರಜ್ ಪ್ರೊಡಕ್ಷನ್ಸ್‌ಗೆ ರೋಸಿ 45 ಶೀರ್ಷಿಕೆ ಸೇರಿದೆ. ಇನ್ನು ಮುಂದೆ ಯಾರು ಕೂಡ ರೋಸಿ ಶೀರ್ಷಿಕೆ ಬಳಸುವ ಹಾಗಿಲ್ಲ ಹಾಗೂ ಶೀರ್ಷಿಕೆ ಪಕ್ಕದಲ್ಲಿ ಬೇರೆ ಪದ ಹಾಗೂ ನಂಬರ್‌ಗಳನ್ನಾಗಲೀ ಸೇರಿಸಿಕೊಂಡು ಸಹ ಬಳಸುವ ಹಾಗಿಲ್ಲ’ ಎಂದು “ರೋಸಿ 45′ ಚಿತ್ರದ ನಿರ್ಮಾಪಕ ರಮೇಶ್ ರೆಡ್ಡಿ ಹಾಗೂ ನಿರ್ದೇಶಕ ಅರ್ಜುನ್ ಜನ್ಯ ತಿಳಿಸಿದ್ದಾರೆ.
ಅಂದಹಾಗೆ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ “ರೋಸಿ 45′ ಚಿತ್ರ ನಿರ್ದೇಶಿಸುತ್ತಿದ್ದು, ಶಿವರಾಜ್‌ಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈಗಾಗಲೇ “ಗಾಳಿಪಟ-2′ ಸೇರಿದಂತೆ ಕೆಲವು ಚಿತ್ರಗಳನ್ನು ನಿರ್ಮಿಸಿರುವ ರಮೇಶ್ ರೆಡ್ಡಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.