ಲೆಕ್ಕಕ್ಕಿಲ್ಲದಂತಾದ ಪೊಲೀಸ್‌ ದೂರು ಪ್ರಾಧಿಕಾರ 


Team Udayavani, Apr 17, 2023, 1:46 PM IST

tdy-8

ಬೆಂಗಳೂರು: ಜನ ಸಾಮಾನ್ಯರು ನ್ಯಾಯಕ್ಕಾಗಿ ಠಾಣೆ ಮೆಟ್ಟಿಲೇರಿದರೂ ಕೆಲವೊಮ್ಮೆ ಪೊಲೀಸ್‌ ಅಧಿಕಾರಿಗಳು ದುರ್ನಡತೆ ತೋರುವುದು, ತನಿಖೆ ನಡೆಸದಿರುವುದು, ಅವಾಚ್ಯ ಶಬ್ದಗಳಿಂದ ನಿಂದನೆ ಇತ್ಯಾದಿ ಕಿರುಕುಳ ನೀಡುತ್ತಾರೆ. ಇಂತಹ ಪೊಲೀಸರ ವಿರುದ್ಧ ದೂರು ನೀಡಲೆಂದಿರುವ “ರಾಜ್ಯ ಪೊಲೀಸ್‌ ದೂರುಗಳ ಪ್ರಾಧಿಕಾರ’ದಲ್ಲಿ ಅಧ್ಯಕ್ಷರೇ ಇಲ್ಲದೇ ಆಟಕ್ಕುಂಟು, ಲೆಕ್ಕಕ್ಕಿಲ್ಲ ಎಂಬಂತಿದೆ.

ರಾಜ್ಯ ಪೊಲೀಸ್‌ ದೂರುಗಳ ಪ್ರಾಧಿಕಾರದಲ್ಲಿ ಕಳೆದ 8 ತಿಂಗಳಿನಿಂದ ಅಧ್ಯಕ್ಷರು ಹಾಗೂ ಇಬ್ಬರು ಸದಸ್ಯರ ಹುದ್ದೆಗಳು ಖಾಲಿ ಇವೆ. ಪರಿಣಾಮ ಜನ ಸಾಮಾನ್ಯರು ಪೊಲೀಸರ ವಿರುದ್ಧ ನೀಡಿರುವ 534 ದೂರುಗಳು ಇತ್ಯರ್ಥವಾಗದೇ ಬಾಕಿ ಉಳಿದಿವೆ. ರಾಜ್ಯ ಸರ್ಕಾರ ಈ ಹುದ್ದೆಗಳನ್ನು ಭರ್ತಿ ಮಾಡಬೇಕಿದ್ದು, ಸರ್ಕಾರ ಅಂತಿಮ ತೀರ್ಮಾನ ತೆಗೆದುಕೊಂಡು ಮುಖ್ಯಮಂತ್ರಿಗಳ ಲಿಖೀತ ಸಹಿ ಬೀಳಬೇಕಿದೆ. ಸದ್ಯ ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಪ್ರಾಧಿಕಾರದ ಅಧ್ಯಕ್ಷರ ಆಯ್ಕೆ ಇನ್ನೂ 2 ತಿಂಗಳು ವಿಳಂಬವಾಗುವ ಸಾಧ್ಯತೆಗಳಿವೆ ಎಂದು ಉನ್ನತ ಮೂಲಗಳು “ಉದಯವಾಣಿ’ಗೆ ತಿಳಿಸಿವೆ.

ಪೊಲೀಸರಿಂದ ಕಿರುಕುಳಕ್ಕೊಳಗಾದವರ ಪರದಾಟ: ರಾಜ್ಯದ ವಿವಿಧ ವಲಯಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಐಪಿಎಸ್‌ ಅಧಿಕಾರಿಗಳು, ಹಲವು ಡಿವೈಎಸ್‌ಪಿ, ಇನ್‌ಸ್ಪೆಕ್ಟರ್‌ ಗಳ ವಿರುದ್ಧ ರಾಶಿ-ರಾಶಿ ದೂರುಗಳು ಪ್ರಾಧಿಕಾರಕ್ಕೆ ಬಂದಿವೆ. ಪ್ರಕರಣ ವಿಲೇವಾರಿ ಮಾಡದ ಹಿನ್ನೆಲೆಯಲ್ಲಿ ದೂರಿನ ಅರ್ಜಿಗಳು ಹಲವು ತಿಂಗಳುಗಳಿಂದ ಕಚೇರಿ ಕಡತಗಳಲ್ಲಿ ಹಾಗೆಯೇ ಉಳಿದುಕೊಂಡಿವೆ. ಮತ್ತೂಂದೆಡೆ ಆರೋಪ ಹೊತ್ತಿರುವ ಪೊಲೀಸರು ದೂರು ಕೊಟ್ಟವರಿಗೆ ಕಿರುಕುಳ ಕೊಡುವ ಚಾಳಿ ಮುಂದುವರಿಸಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ. ಶೀಘ್ರವೇ ಇದಕ್ಕೆ ಪರಿಹಾರ ಕಂಡುಕೊಳ್ಳದಿದ್ದರೆ ಪೊಲೀಸರಿಂದ ಅನ್ಯಾಯಕ್ಕೊಳಗಾದ ಅಮಾಯಕ ಜನ ನ್ಯಾಯಕ್ಕಾಗಿ ಪರದಾಡಿ ಹೈರಾಣಾಗುವ ಸ್ಥಿತಿ ಒಂದೊದಗಲಿದೆ ಎಂದು ದೂರುದಾರರು ಆರೋಪಿಸಿದ್ದಾರೆ.

ಪ್ರಾಧಿಕಾರದ ರಚನೆ ಹೇಗೆ ?: ರಾಜ್ಯ ಪೊಲೀಸ್‌ ದೂರುಗಳ ಪ್ರಾಧಿಕಾರಕ್ಕೆ ಹೈಕೋರ್ಟ್‌ ನಿವೃತ್ತ ನ್ಯಾಯಾಧೀಶರು ಅಧ್ಯಕ್ಷರಾಗಿದ್ದು, ಇವರ ನೇತೃತ್ವದಲ್ಲಿ ಸಭೆ ನಡೆಸಿ ಆರೋಪವಿರುವ ಪೊಲೀಸ್‌ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುತ್ತದೆ. ಪೊಲೀಸ್‌ ಇಲಾಖೆಯ ಸಾರ್ವಜನಿಕ ಕುಂದುಕೊರತೆ ಹಾಗೂ ಮಾನವ ಹಕ್ಕುಗಳ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾ ನಿರ್ದೇಶಕರು ಪ್ರಾಧಿಕಾರದ ಸದಸ್ಯ ಕಾರ್ಯ ದರ್ಶಿಯಾಗಿರುತ್ತಾರೆ. ಪುಧಾನ ಕಾರ್ಯದರ್ಶಿ ಅಥವಾ ಅದಕ್ಕಿಂತ ಉನ್ನತ ಮಟ್ಟದ ನಿವೃತ್ತ ಸರ್ಕಾರಿ ಅಧಿಕಾರಿಯೊಬ್ಬರು, ಸಮಾಜ ಸೇವಾಸಕ್ತ ನಾಗರಿಕರೊಬ್ಬರು ಹಾಗೂ ಸೇವಾನಿರತ ಹಿರಿಯ ಮಹಿಳಾ ಪೊಲೀಸ್‌ ಅಧಿಕಾರಿ ಸೇರಿ ದಂತೆ ಮೂವರು ಸದಸ್ಯರಿರುತ್ತಾರೆ. ರಾಜ್ಯ ಮಟ್ಟದ‌ಲ್ಲಿ ಒಂದು ಪ್ರಾಧಿಕಾರ ಹಾಗೂ ಪ್ರತಿ ಜಿಲ್ಲಾ ಮಟ್ಟದಲ್ಲೂ ಒಂದೊಂದು ಪ್ರಾಧಿಕಾರಗಳಿರುತ್ತವೆ. ಪೊಲೀಸ್‌ ವರಿಷ್ಠಾಧಿಕಾರಿ (ಎಸ್‌ಪಿ), ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ (ಎಎಸ್‌ಪಿ) ಶ್ರೇಣಿ ಗಿಂತ ಮೇಲಿನ ಅಧಿಕಾರಿಗಳ ವಿರುದ್ಧ ರಾಜ್ಯ ಪೊಲೀಸ್‌ ಪ್ರಾಧಿಕಾರಕ್ಕೆ ದೂರು ಕೊಡಬಹುದು. ಕಾನ್‌ಸ್ಟೇಬಲ್‌ನಿಂದ ಡಿವೈಎಸ್‌ಪಿ ಹುದ್ದೆಯವರೆಗಿನ ಪೊಲೀಸರ ವಿರುದ್ಧ ಆಯಾ ಜಿಲ್ಲಾ ಪ್ರಾಧಿಕಾರದಲ್ಲಿ ದೂರು ನೀಡಬಹುದು.

ಪ್ರಾಧಿಕಾರಕ್ಕೆ ಬಂದ ದೂರುಗಳು ಯಾವುವು ?:

 ಪೊಲೀಸ್‌ ಅಧಿಕಾರಿಗಳು ಕರ್ತವ್ಯ ಲೋಪ ಎಸಗಿರುವುದು.

 ಸಾರ್ವಜನಿಕರು ನೀಡುವ ದೂರು ಸ್ವೀಕರಿಸದಿರುವುದು, ಎಫ್ಐಆರ್‌ ದಾಖಲಿಸದಿರುವುದು.

 ಎಫ್ಐಆರ್‌ ದಾಖಲಿಸಿದ ಬಳಿಕ ಯಾವುದೇ ಕ್ರಮ ಕೈಗೊಳ್ಳದಿರುವುದು.

 ವರಿಷ್ಠಾಧಿಕಾರಿಗಳ ಗಮನಕ್ಕೆ ತಂದ ಬಳಿಕ ಎಫ್ಐಆರ್‌ ದಾಖಲಿಸಿ ತನಿಖೆ ನಡೆಸದಿರುವುದು.

 ವಿವಿಧ ಆಮೀಷಗಳಿಗೆ ಒಳಗಾಗಿ ಅಧಿಕಾರ ದುರುಪಯೋಗ ಪಡಿಸಿಕೊಳ್ಳುವುದು.

 ದೂರುದಾರರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ, ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಕೆ.

 ಆರೋಪಿಗಳ ಜೊತೆಗೆ ಶಾಮೀಲಾಗುವುದು. ಭ್ರಷ್ಟಾಚಾರ, ಲಂಚಕ್ಕೆ ಬೇಡಿಕೆ.  ಆಪಾದಿತರ ವಿರುದ್ಧ ದೂರಿನ ಮೇಲೆ “ಬಿ’ ರಿಪೋರ್ಟ್‌ ದಾಖಲಿಸುವುದು.

 ಅಕ್ರಮ ಬಂಧನ, ಹಲ್ಲೆ ನಡೆಸಿ ಗಾಯಗೊಳಿಸುವುದು.

ಉಚ್ಛ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಮೇ 30ರ ಬಳಿಕ ಖಾಲಿ ಇರುವ ಅಧ್ಯಕ್ಷರ ಹುದ್ದೆ ಭರ್ತಿ ಮಾಡುವ ಸಾಧ್ಯತೆಗಳಿವೆ. ಸರ್ಕಾರದ ಸೂಚನೆಯಂತೆ ಕ್ರಮ ಕೈಗೊಳ್ಳಲಾಗುವುದು. -ಕುಮಾರ್‌, ಅಧೀನ ಕಾರ್ಯದರ್ಶಿ, ರಾಜ್ಯ ಪೊಲೀಸ್‌ ದೂರುಗಳ ಪ್ರಾಧಿಕಾರ.

-ಅವಿನಾಶ ಮೂಡಂಬಿಕಾನ

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Ayurvedic Doctor: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದ ಆಯುರ್ವೇದಿಕ್‌ ವೈದ್ಯ…

Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್‌ ವೈದ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.