ಕನಕಗಿರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಿವರಾಜ ತಂಗಡಗಿ ನಾಮಪತ್ರ ಸಲ್ಲಿಕೆ
Team Udayavani, Apr 17, 2023, 3:53 PM IST
ಕನಕಗಿರಿ: ಕನಕಗಿರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಿವರಾಜ ತಂಗಡಗಿ ಚುನಾವಣಾಧಿಕಾರಿ ಸಮೀರ್ ಮುಲ್ಲಾ ಅವರಿಗೆ ಸೋಮವಾರ (ಎ.17) ನಾಮ ಪತ್ರ ಸಲ್ಲಿಸಿದರು.
ಅವರು ಇಲ್ಲಿನ ಕೆಪಿಎಸ್ ಪ್ರೌಡ ಶಾಲೆಯಲ್ಲಿರುವ ಚುನಾವಣಾ ಕಚೇರಿ ಆಗಮಿಸಿ ನಾಮಪತ್ರ ಸಲ್ಲಿಕೆ ಮಾಡಿದರು.
ಬೆಳಗ್ಗೆ ಸುವರ್ಣಗಿರಿ ಸಂಸ್ಥಾನ ವಿರಕ್ತಮಠದ ಮುಂಬಾಗದಿಂದ ರಾಜಬೀದಿ ಮುಖಾಂತರವಾಗಿ ಶ್ರೀಕನಕಾಚಲ ಪತಿ ದೇವಸ್ಥಾನ ಮಾರ್ಗವಾಗಿ ಸಹಸ್ರಾರು ಕಾರ್ಯಕರ್ತರೊಂದಿಗೆ ಇಲ್ಲಿನ ಚುನಾವಣಾ ಕಚೇರಿಗೆ ಆಗಮಿಸಿದರು.
ಬಳಿಕ ಮಾತನಾಡಿದ ಅವರು, ಬಿಜೆಪಿ ಪಕ್ಷ ಸುಳ್ಳಿನ ಕಂತೆಯಾಗಿದೆ. ನಿಮ್ಮ ಮನೆ ಮಗ ಶಿವರಾಜ ತಂಗಡಗಿ ಕ್ಷೇತ್ರದಲ್ಲಿ ಜನಪರ ಕಾರ್ಯಗಳನ್ನು ಮಾಡಿದ್ದೇನೆ. ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು, ನನಗೆ ಶಕ್ತಿ ನೀಡಿ ಚುನಾವಣೆಯಲ್ಲಿ ಭಾರಿ ಅಂತರದಿಂದ ಗೆಲ್ಲಿಸಬೇಕು ಎಂದು ಹೇಳಿದರು.
ವೇಳೆಯಲ್ಲಿ ಮಾಜಿ ಸಂಸದ ಶಿವರಾಮೇಗೌಡ, ಕನಕಗಿರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ ಸ್ವಾಮಿ ಕಲುಬಾಗಿಲಮಠ, ಕಾರಟಗಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಶರಣೇಗೌಡ ಪಾಟೀಲ್, ಮಾಜಿ ಎಪಿಎಂಸಿ ಅಧ್ಯಕ್ಷ ಶಿವರೆಡ್ಡಿ ವಕೀಲ್, ಮಾಜಿ ಜಿಪ ಸದಸ್ಯರಾದ ವೀರೇಶ ಸಮಗಂಡಿ, ಅಮರೇಶ ಗೋನಾಳ, ಮಾಜಿ ತಾಪ ಅಧ್ಯಕ್ಷರಾದ ಬಸವಂತಗೌಡ, ಮಹ್ಮದ್ ರಫಿ, ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ದೊಡ್ಡಪ್ಪ ದೇಸಾಯಿ, ಕನಕಗಿರಿ ವಿಧಾನ ಸಭಾ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷ ರಮೇಶ ನಾಯಕ, ಪಪ ಸದಸ್ಯರಾದ ಸಂಗಪ್ಪ ಸಜ್ಜನ, ಅನಿಲ್ ಬಿಜ್ಜಳ, ಶರಣೇಗೌಡ ಪಾಟೀಲ್, ರಾಕೇಶ ಕಂಪ್ಲಿ, ಸಿದ್ದೇಶ ಕಲುಬಾಗಿಲಮಠ, ರಾಜಾಸಾಬ ನಂದಾಪುರ, ಪ್ರಮುಖರಾದ ನಿವೃತ್ತ ಪೋಲಿಸ್ ಅಧಿಕಾರಿ ಜನಗಂಡೆಪ್ಪ ಪೂಜಾರ, ಪ್ರಮುಖರಾದ ಹನುಮೇಶ ನಾಯಕ, ಶರಣಪ್ಪ ಭತ್ತದ, ಹೊನ್ನುರಸಾಬ ಮೇಸ್ತ್ರಿ, ಸೇರಿದಂತೆ ಇತರರು ಇದ್ದರು.
ಡಿಒಎಸ್ ಪಿ ಶೇಖರಯ್ಯ, ಸಿಪಿಐ ಜಗದೀಶ ನೇತೃತ್ವದ ತಂಡ ಭದ್ರತೆ ನೀಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.