ಸಿಗದ ಟಿಕೆಟ್: ಅಸಮಾಧಾನ, ಪಕ್ಷಾಂತರ
Team Udayavani, Apr 17, 2023, 4:41 PM IST
ತುಮಕೂರು: ರಾಜ್ಯದಲ್ಲಿ ಚುನಾವಣಾ ಕಾವು ರಂಗೇರಿದಂತೆ ಕಲ್ಪತರು ನಾಡಿನಲ್ಲಿ ಪûಾಂತರ ಪರ್ವ ಜೋರು ಜೋರಾಗಿದೆ. ಬಿಜೆಪಿಯಿಂದ ಟಿಕೆಟ್ ವಂಚಿತರು ಹೆಚ್ಚಿನ ಸಂಖ್ಯೆಯಲ್ಲಿ ಜೆಡಿಎಸ್ ಬಾಗಿಲು ತಟ್ಟುತ್ತಿದ್ದಾರೆ. ಜೆಡಿಎಸ್-ಬಿಜೆಪಿಯಲ್ಲಿ ಅಸಮಾ ಧಾನ ಹೊಂದಿರುವ ನಾಯಕರು, ಕಾಂಗ್ರೆಸ್ ಮನೆ ಸೇರಿದ್ದಾರೆ. ಇನ್ನೂ ಕೆಲವು ಟಿಕೆಟ್ ವಂಚಿತರು ಬಂಡಾಯವೇಳಲು ಮುಂದಾಗಿದ್ದಾರೆ.
ಸಿದ್ಧಾಂತ ಗಾಳಿಗೆ: ಹಲವು ವರ್ಷ ಒಂದೇ ಪಕ್ಷದಲ್ಲಿದ್ದು ಆ ಪಕ್ಷದ ಸಿದ್ಧಾಂತವನ್ನು ಮೈ ಗೂಡಿಸಿಕೊಂಡಿದ್ದ ನಾಯಕರು ಪ್ರಮುಖ ಹುದ್ದೆ ಅಲಂಕರಿಸಿದ್ದರು. ಆದರೆ, ಈ ಬಾರಿ ಟಿಕೆಟ್ ಸಿಗಲಿಲ್ಲ ಎನ್ನುವ ಕಾರಣಕ್ಕೆ ಸ್ವ ಪಕ್ಷದ ಸಿದ್ಧಾಂತಕ್ಕೆ ತಿಲಾಂಜಲಿ ಹೇಳಿ ಪûಾಂತರ ಮಾಡುತ್ತಿದ್ದಾರೆ. ರಾಜಕೀಯ ಪಕ್ಷಗಳಲ್ಲಿ ಉಳಿದುಕೊಳ್ಳಲು ಟಿಕೆಟ್ ಒಂದೇ ಮಾನದಂಡ ಎಂಬಂತೆ ಆಗಿದೆ. ಈಗಾಗಲೇ ಅಧಿಕಾರ ಅನುಭವಿಸಿರುವ ಹಾಗೂ ಅಧಿಕಾರಕ್ಕಾಗಿ ಹಾತೊರೆಯುತ್ತಿರುವ ರಾಜಕಾರಣಿಗಳು ಪಕ್ಷದಿಂದ ಪಕ್ಷಕ್ಕೆ ಹಾರಲು ಮುಂದಾಗಿರುವುದು ರಾಜಕೀಯ ಪಕ್ಷಗಳ ನಾಯಕರಿಗೆ ತಲೆನೋವಾಗಿ ಪರಿಣಮಿಸಿದೆ.
ಕಾಂಗ್ರೆಸ್ ಮನೆಯಲ್ಲಿ ಕೆ.ಎಸ್.ಕಿರಣ್ ಕುಮಾರ್: ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ಕೆ.ಎಸ್. ಕಿರಣ್ ಕುಮಾರ್ ಕಳೆದ 40 ವರ್ಷಗಳಿಂದ ಪಕ್ಕಾ ಆರ್‌ಎಸ್‌ಎಸ್ ಕಾರ್ಯಕರ್ತ. ಈ ಹಿಂದೆ ವಲಸೆ ಬಂದಿದ್ದ ಸಚಿವ ಜೆ.ಸಿ.ಮಾಧುಸ್ವಾಮಿ ಅವರಿಗೆ ಪಕ್ಷ ಹೆಚ್ಚು ಮಣೆ ಹಾಕುತ್ತಿದೆ. ಹೀಗಾಗಿ ಬೇಸತ್ತು ಇಷ್ಟು ವರ್ಷದ ತಮ್ಮ ಸಿದ್ಧಾಂತ ಮರೆತು ಕಾಂಗ್ರೆಸ್ ಸೇರಿ ಅಭ್ಯರ್ಥಿಯಾಗಿದ್ದಾರೆ.
ತುರುವೇಕೆರೆ ಬೆಮೆಲ್ ಕಾಂತರಾಜ್: ತುರುವೇಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬೆಮೆಲ್ ಕಾಂತರಾಜು ಮೂಲ ಜೆಡಿಎಸ್. ಈ ಪಕ್ಷದಿಂದ ವಿಧಾನ ಪರಿಷತ್ ಸದಸ್ಯರಾಗಿದ್ದರು, ಜೆಡಿಎಸ್ ನಲ್ಲಿ ಮುಖಂಡರ ನಡೆಗೆ ಅಸಮಾಧಾನ ಗೊಂಡು ಕಾಂಗ್ರೆಸ್ ಸೇರಿದ್ದಾರೆ.
ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಕೆ: ಜತೆಗೆ ತುಮಕೂರು ಜಿಲ್ಲಾ ಕಾಂಗ್ರೆಸ್ ನ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಹಾಗೂ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಅತೀಕ್ ಅಹಮದ್ ಸಹ ಕಾಂಗ್ರೆಸ್‌ಗೆ ವಿದಾಯ ಹೇಳಿದ್ದಾರೆ. ಈಗಾಗಲೇ ಜಿಲ್ಲಾಧ್ಯಕ್ಷರಿಗೆ ಪ್ರಾಥಮಿಕ ಸದಸ್ಯತ್ವ ಹಾಗೂ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಜೆಡಿಎಸ್‌ಗೆ ಹೋಗಲು ಸಿದ್ಧತೆ ನಡೆಸಿದ್ದಾರೆ. ಗುಬ್ಬಿ, ಚಿಕ್ಕನಾಯಕನಹಳ್ಳಿ ಮತ್ತು ತುಮಕೂರು ನಗರ ವಿಧಾನಸಭಾ ಕ್ಷೇತ್ರದಲ್ಲಿ ಪ್ರಭಾವಿ ನಾಯಕರು ಪಕ್ಷಾಂತರ ಮಾಡಿರುವುದು ಈ ಕ್ಷೇತ್ರಗಳಲ್ಲಿ ಕಾಂಗ್ರೆಸ್ -ಜೆಡಿಎಸ್‌ಗೆ ಅನುಕೂಲವಾಗಲಿದೆ ಎಂದು ಸ್ವ ಪಕ್ಷಗಳ ಮುಖಂಡರು ಅಭಿಪ್ರಾಯ ಪಟ್ಟಿದ್ದಾರೆ.
ಬಂಡಾಯದ ಬಿಸಿ: ಪ್ರಮುಖ ಪಕ್ಷಗಳಲ್ಲಿ ಟಿಕೆಟ್ ಕೇಳಿ ವಂಚಿತರಾದವರು ಪಕ್ಷದ ವಿರುದ್ಧ ಸಿಡಿದೆದ್ದು ಪಕ್ಷೇತರರಾಗಿ ನಿಲ್ಲಲು ಸಿದ್ಧತೆ ನಡೆಸಿದ್ದಾರೆ. ಅದರಲ್ಲಿ ಪ್ರಮುಖವಾಗಿ ಜೆಡಿಎಸ್‌ನಿಂದ ಟಿಕೆಟ್ ವಂಚಿತರಾದ ನರಸೇಗೌಡ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಕುಣಿಗಲ್‌ನಲ್ಲಿ ಬಿಜೆಪಿಯಿಂದ ಟಿಕೆಟ್ ವಂಚಿತ ರಾಜೇಶ್‌ಗೌಡರು ಪಕ್ಷೇತರವಾಗಿ ನಾಮಪತ್ರ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ.
ಜಿಲ್ಲೆಯ ಯಾವ ಕ್ಷೇತ್ರಗಳಲ್ಲಿ ಪಕ್ಷಾಂತರ? : ಜಿಲ್ಲೆಯ ಬಹುತೇಕ ವಿಧಾನಸಭಾ ಕ್ಷೇತ್ರಗಳಲ್ಲಿ ಟಿಕೆಟ್ ವಂಚಿತರು ಬಂಡಾಯವೆದ್ದು ಬೇರೆ ಪಕ್ಷಗಳತ್ತ ಮುಖ ಮಾಡಿದ್ದಾರೆ. ಅದರಲ್ಲಿ ಪ್ರಮುಖವಾಗಿ ಗುಬ್ಬಿ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯವಾಗಿ ಬದ್ಧ ವೈರಿಗಳಂತೆ ವರ್ತಿಸುತ್ತಿದ್ದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಹೊನ್ನಗಿರಿಗೌಡ ಮತ್ತು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಜಿ.ಎನ್. ಬೆಟ್ಟಸ್ವಾಮಿ ಟಿಕೆಟ್ ಕೈ ತಪ್ಪುತ್ತಿದ್ದಂತೆ ಜೆಡಿಎಸ್‌ನತ್ತ ಮುಖ ಮಾಡಿದ್ದು, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಸಮಾವೇಶದಲ್ಲಿ ಅಧಿಕೃತವಾಗಿ ತೆನೆ ಹೊತ್ತಿರುವುದು ಗುಬ್ಬಿ ಕ್ಷೇತ್ರದಲ್ಲಿ ರಾಜಕೀಯವಾಗಿ ತೀವ್ರ ಸಂಚಲನ ಮೂಡಿಸಿದೆ.
ಇನ್ನು ಕಾಂಗ್ರೆಸ್ ವಿರುದ್ಧ ಗದಾ ಪ್ರಹಾರ ಮಾಡುತ್ತಿದ್ದ ಮಾಜಿ ಶಾಸಕ ಎಸ್.ಆರ್.ಶ್ರೀನಿವಾಸ್ ತೆನೆ ಇಳಿಸಿ ಕೈ ಹಿಡಿದಿದ್ದಾರೆ. ಈ ಮೂಲಕ, ಮೂಲ- ವಲಸಿಗ ಕಾಂಗ್ರೆಸ್ಸಿಗರ ನಡುವೆ ಹೊಂದಾಣಿಕೆ ಸಾಧ್ಯವಾಗದೆ ಹೊನ್ನಗಿರಿಗೌಡ ಕಾಂಗ್ರೆಸ್ ತೊರೆದು ಜೆಡಿಎಸ್ ಮನೆ ಸೇರಿದ್ದಾರೆ.
ಇನ್ನು 2013ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಹೊನ್ನಗಿರಿಗೌಡರು ಪರಾಭವಗೊಂಡಿದ್ದರು. 2018ರಲ್ಲಿ ಟಿಕೆಟ್ ಆಕಾಂಕ್ಷಿ ಯಾಗಿದ್ದರು. ಆಗ ಬಾಲಾಜಿ ಕುಮಾರ್ ರಿಗೆ ಪಕ್ಷ ಟಿಕೆಟ್ ನೀಡಿತು. ಆ ಚುನಾವಣೆಯಲ್ಲಿ ಅವರು ಪರಾಭವಗೊಂಡಿದ್ದರು. ಈ ಬಾರಿ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದರು. ಆದರೆ, ಬದಲಾದ ರಾಜಕೀಯ ಸನ್ನಿವೇಶದಲ್ಲಿ ಜೆಡಿಎಸ್ ಶಾಸಕರಾಗಿದ್ದ ಎಸ್.ಆರ್.ಶ್ರೀನಿವಾಸ್ ಕಾಂಗ್ರೆಸ್ ಸೇರಿದ್ದರಿಂದ ಕಾಂಗ್ರೆಸ್ ನಾಯಕರು ಶ್ರೀನಿವಾಸ್‌ರನ್ನು ಅಭ್ಯರ್ಥಿ ಯನ್ನಾಗಿ ಘೋಷಿಸಿತು. ಇದರಿಂದ ಬೇಸರಗೊಂಡ ಹೊನ್ನಗಿರಿಗೌಡ ಜೆಡಿಎಸ್ ಸೇರಿದ್ದಾರೆ. ಇನ್ನು ಗುಬ್ಬಿ ಕ್ಷೇತ್ರದ ಬಿಜೆಪಿ ಪ್ರಭಾವಿ ನಾಯಕರಾಗಿದ್ದ ಜಿ.ಎನ್. ಬೆಟ್ಟಸ್ವಾಮಿ 2013ರ ವಿಧಾನಸಭಾ ಚುನಾವಣೆ ಯಲ್ಲಿ ಕೆಜೆಪಿಯಿಂದ, 2018 ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ಈ ಎರಡು ಚುನಾವಣೆಯಲ್ಲೂ ಗುಬ್ಬಿ ತಾಲೂಕಿನ ಲಿಂಗಾಯತ ಸಮುದಾಯ ಇವರ ಬೆಂಬಲಕ್ಕೆ ನಿಂತಿತ್ತು. ಆದರೆ, ಇದೀಗ ಪಕ್ಷ ತೊರೆದು ತೆನೆಹೊತ್ತಿರುವುದಕ್ಕೆ ಕೆಲ ಮುಖಂಡರು ಬೇಸರ ವ್ಯಕ್ತಪಡಿಸಿದ್ದಾರೆ.
ಹಾಗೆಯೇ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಮತ್ತೂಬ್ಬ ಮುಖಂಡ ಜಿ.ಎಸ್. ಪ್ರಸನ್ನಕುಮಾರ್ ಪಕ್ಷಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಅಲ್ಲದೆ ಇವರೊಂದಿಗೆ ಇನ್ನೂ ಹಲವು ಕಾಂಗ್ರೆಸ್ ಮುಖಂಡರು ಮುಖಂಡರು, ಕಾರ್ಯಕರ್ತರು ಪಕ್ಷ ತೊರೆಯಲು ಸನ್ನದ್ಧರಾಗುತ್ತಿದ್ದಾರೆ.
ಸೊಗಡು ತುಮಕೂರು ತೆನೆ ಅಭ್ಯರ್ಥಿ ಸಾಧ್ಯತೆ: ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಹಿರಿಯ ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಸೊಗಡು ಶಿವಣ್ಣ ಜೆಡಿಎಸ್‌ನತ್ತ ಮುಖ ಮಾಡಿದ್ದು, ಸದ್ಯದಲ್ಲೇ ತೆನೆ ಹೊರುವ ಸಾಧ್ಯತೆ ಇದೆ. ಈಗಾಗಲೇ ಜೆಡಿಎಸ್ ನಾಯಕ ಹಾಗೂ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಸೊಗಡು ಶಿವಣ್ಣ ಒಂದೆರಡು ದಿನದಲ್ಲಿ ಜೆಡಿಎಸ್ ಮನೆ ಸೇರಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ಇನ್ನು ನಗರ ವಿಧಾನಸಭಾ ಕ್ಷೇತ್ರದಿಂದ ಇವರೇ ಜೆಡಿಎಸ್ ಅಭ್ಯರ್ಥಿ ಯಾರಗಲಿದ್ದಾರೆ ಎಂದೂ ಹೇಳಲಾಗುತ್ತಿದೆ. ಈಗಾಗಲೇ ಜೆಡಿಎಸ್ ಅಭ್ಯರ್ಥಿಯಾಗಿರುವ ಗೋವಿಂದರಾಜು ಅವರಿಗೆ ಪಕ್ಷ ಬಿ ಫಾರಂ ನೀಡಿದೆ. ನಾಮಪತ್ರ ಸಲ್ಲಿಸಲು ಸಿದ್ಧತೆ ಮಾಡಿಕೊಂಡ ಬೆನ್ನಲ್ಲೇ ಮಹಿಳೆಯರೊಂದಿಗೆ ದೂರವಾಣಿಯಲ್ಲಿ ಅನುಚಿತವಾಗಿ ಸಂಭಾಷಣೆ ಮಾಡಿದ್ದಾರೆ ಎನ್ನಲಾದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಟಿಕೆಟ್ ಅವರಿಗೆ ಮುಳುವಾಗುವ ಸಾಧ್ಯತೆಯಿದೆ. 45 ವರ್ಷ ಜನಸಂಘದಿಂದ ಬಂದು, ಆರ್‌ಎಸ್‌ಎಸ್ ಕಾರ್ಯಕರ್ತರಾಗಿ, 4 ಬಾರಿ ಬಿಜೆಪಿ ಶಾಸಕರಾಗಿ, 2 ಬಾರಿ ಸಚಿವರಾಗಿದ್ದ ಸೊಗಡು ಶಿವಣ್ಣ ಅವರಿಗೆ ಬಿಜೆಪಿ ಟಿಕೆಟ್ ವಂಚನೆ ಮಾಡಿದೆ. ಇದರಿಂದ ಶಿವಣ್ಣ ಒಲ್ಲದ ಮನಸ್ಸಿ ನಿಂದಲೇ ಜೆಡಿಎಸ್ ಸೇರಲು ನಿರ್ಧಾರ ಮಾಡಿದ್ದಾರೆ.
ನಾನು ಕೊರಟಗೆರೆ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯಲ್ಲಿ ಟಿಕೆಟ್ ಆಕಾಂಕ್ಷಿ ಆಗಿದ್ದೆ. ಆದರೆ, ವರಿಷ್ಠರು ಟಿಕೆಟ್ ನೀಡಿಲ್ಲ. ಆದರೂ, ನಾನು ಪಕ್ಷದ ವಿರುದ್ಧ ಸ್ಪರ್ಧೆ ಮಾಡಲ್ಲ. – ಡಾ.ಜೆ.ಲಕ್ಷ್ಮೀಕಾಂತ್, ಕೊರಟಗೆರೆ ಬಿಜೆಪಿ ಮುಖಂಡ
– ಚಿ.ನಿ.ಪುರುಷೋತ್ತಮ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್: ಸಚಿವ ಡಾ| ಜಿ. ಪರಮೇಶ್ವರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Police Raid: ಮಾದಕವಸ್ತು, ಅಕ್ರಮ ಮದ್ಯಮಾರಾಟದ ವಿರುದ್ಧ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.