292.83 ಕೋಟಿ ಆಸ್ತಿಯ ಒಡೆಯ ಶಾಮನೂರು ಶಿವಶಂಕರಪ್ಪ
Team Udayavani, Apr 17, 2023, 8:16 PM IST
ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಹಾಲಿ ಶಾಸಕ, ಕಾಂಗ್ರೆಸ್ ಅಭ್ಯರ್ಥಿ ಶಾಮನೂರು ಶಿವಶಂಕರಪ್ಪ ಒಟ್ಟು 292.83 ಕೋಟಿ ಒಡೆಯ. ಪುತ್ರ, ದಾವಣಗೆರೆ ಉತ್ತರ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಎಸ್.ಎಸ್. ಮಲ್ಲಿಕಾರ್ಜುನ್ ಅವರಗಿಂತಲೂ 140.11 ಕೋಟಿಯಷ್ಟು ಹೆಚ್ಚು ಆಸ್ತಿ ಹೊಂದಿದ್ದಾರೆ.
ಸೋಮವಾರ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಶಾಸಕ ಶಾಮನೂರು ಶಿವಶಂಕ ರಪ್ಪ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ಕೈಯಲ್ಲಿ 8.01 ಲಕ್ಷ ನಗದು, ವಿವಿಧ ಬ್ಯಾಂಕ್, ಹಣಕಾಸು ಸಂಸ್ಥೆಯಲ್ಲಿ 63.96 ಕೋಟಿ ಠೇವಣಿ ಹಾಗೂ 85.32 ಕೋಟಿ ಮೊತ್ತದ ಷೇರು, ಡಿಬೆಂಚರ್ ಹೂಡಿಕೆ ಮಾಡಲಾಗಿದೆ ಎಂಬ ಮಾಹಿತಿ ನೀಡಿದ್ದಾರೆ.
ಒಟ್ಟು 292.83 ಕೋಟಿ ಒಡೆಯರಾಗಿದ್ದರೂ ಶಾಮನೂರು ಶಿವಶಂಕರಪ್ಪ ವೈಯಕ್ತಿಕವಾಗಿ 15.71 ಕೋಟಿ ಹಾಗೂ ಅವಿಭಕ್ತ ಕುಟುಂಬದ ಹೆಸರಲ್ಲಿ 2.02 ಕೋಟಿ ಸಾಲ ಹೊಂದಿದ್ದಾರೆ. 35 ಕೋಟಿ ರೂಪಾಯಿ ಮೌಲ್ಯದ ಕೃಷಿಯೇತರ ಭೂಮಿ, 25 ಲಕ್ಷ ರೂಪಾಯಿ ಮೌಲ್ಯದ ವಾಸದ ಮನೆ, 2.25 ಕೋಟಿ ಮೌಲ್ಯದ ಚಿನ್ನ, ಬೆಳ್ಳಿ, ಇತರೆ ಆಭರಣ, 73.26 ಲಕ್ಷ ಮೌಲ್ಯದ ವಾಹನಗಳಿವೆ ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ರಾಯಬಾಗ: ತಪ್ಪಿದ ಕೈ ಟಿಕೆಟ್; ನಿವೃತ್ತ IAS ಅಧಿಕಾರಿ ಪಕ್ಷೇತರರಾಗಿ ಕಣಕ್ಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.