Sand Mining: ಮರಳು ಮಾಫಿಯಾ ಪರಿಶೀಲಿಸಲು ತೆರಳಿದ್ದ ಅಧಿಕಾರಿಗಳನ್ನೇ ಅಟ್ಟಾಡಿಸಿ ಹಲ್ಲೆಗೈದರು
Team Udayavani, Apr 18, 2023, 8:57 AM IST
ಪಾಟ್ನಾ: ಅಕ್ರಮ ಮರಳುಗಾರಿಕೆಯನ್ನು ಪರಿಶೀಲಿಸಲು ಬಂದ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ, ಕಲ್ಲು ತೂರಾಟ ನಡೆಸಿರುವ ಘಟನೆ ಸೋಮವಾರ (ಏ.17 ರಂದು) ಮಧ್ಯಾಹ್ನ ಪಾಟ್ನಾದ ಮನೇರ್ ಪ್ರದೇಶದಲ್ಲಿ ನಡೆದಿದೆ.
ಗಣಿಗಾರಿಕೆ ಇಲಾಖೆಯ ಅಧಿಕಾರಿಗಳ ತಂಡವೊಂದು ಪಾಟ್ನಾದಿಂದ 30 ಕಿಮೀ ದೂರದಲ್ಲಿರುವ ಮನೇರ್ನಲ್ಲಿರುವ ಕೊಯಿಲ್ವಾರ್ ಸೇತುವೆಯ ಬಳಿ ಅಕ್ರಮ ಮರಳುಗಾರಿಕೆ ದಂಧೆ ನಡೆಯುತ್ತಿದೆ ಎನ್ನುವ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಅದನ್ನು ಪರಿಶೀಲಿಸಲು ತೆರಳಿದೆ. ಈ ವೇಳೆ ಇಬ್ಬರು ಮಹಿಳಾ ಅಧಿಕಾರಿ ಸೇರಿ ಒಟ್ಟು ಮೂವರು ಅಧಿಕಾರಿಗಳಿಗೆ ಅಲ್ಲಿದ್ದ ಜನರು ಬೆದರಿಕೆಯನ್ನು ಹಾಕಿದ್ದಾರೆ. ಇದಾದ ಬಳಿಕ ಅವರೊಂದಿಗೆ ವಾಗ್ವಾದ ನಡೆಸಿ ಹಲ್ಲೆ ನಡೆಸಿದ್ದಾರೆ.
ಮೊದಲು ಕಲ್ಲು ತೂರಾಟ ನಡೆಸಿ, ಆ ಬಳಿಕ ಹಲ್ಲೆ ಮಾಡಿದ್ದಾರೆ. ಒಬ್ಬ ಮಹಿಳಾ ಅಧಿಕಾರಿಯನ್ನು ಕೆಳಕ್ಕೆ ಹಾಕಿ ಕೂದಲು ಹಿಡಿದು ಎಳೆದುಕೊಂಡು ಹೋಗಿದ್ದಾರೆ. ಅಧಿಕಾರಿಗಳು ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಯತ್ನಿಸಿದ್ದರೂ ಅಲ್ಲಿದ್ದ ಗುಂಪು ಅಧಿಕಾರಿಗಳನ್ನು ಕಲ್ಲು, ಕೋಲಿನಿಂದ ಹಲ್ಲೆಗೈದು ಅಟ್ಟಾಡಿಸಿಕೊಂಡು ಹೊಡೆದಿದೆ.
ಅಮಿಯಾ ಕುಮಾರಿ, ಫರ್ಹೀನ್ ,ಶೋಧ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದ ಜಿಲ್ಲಾ ಗಣಿ ಅಧಿಕಾರಿ ಗೌರವ್ ಕುಮಾರ್ ಅವರ ಮೇಲೆ ಹಲ್ಲೆ ನಡೆದಿದ್ದು,ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನೆ ಬಗ್ಗೆ ಮಾಹಿತಿ ಪಡೆದ ಪೊಲೀಸರು, 44 ಜನರ ವಿರುದ್ಧ ಕೇಸ್ ದಾಖಲಿಸಿ, 50 ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ವರದಿ ತಿಳಿಸಿದೆ.
ಹಲ್ಲೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.