Tragic: ಮೂರು ಅಂತಸ್ತಿನ ಅಕ್ಕಿ ಗಿರಣಿ ಕಟ್ಟಡ ಕುಸಿದು ನಾಲ್ವರು ಮೃತ್ಯು
ಕೆಲಸ ಮುಗಿಸಿ ಮಲಗಿದ್ದ ವೇಳೆ ನಡೆದ ದುರಂತ
Team Udayavani, Apr 18, 2023, 9:37 AM IST
ಚಂಡಿಗಢ: ಮೂರು ಅಂತಸ್ತಿನ ಅಕ್ಕಿ ಗಿರಣಿಯ ಕಟ್ಟಡ ಕುಸಿದು ನಾಲ್ವರು ಕಾರ್ಮಿಕರು ಮೃತಪಟ್ಟು 20 ಮಂದಿ ಗಾಯಗೊಂಡಿರುವ ಘಟನೆ ಹರ್ಯಾಣದ ಕರ್ನಾಲ್ ಜೆಲ್ಲೆಯ ತಾರೋರಿಯಲ್ಲಿ ಸೋಮವಾರ-ಮಂಗಳವಾರದ ಮಧ್ಯರಾತ್ರಿಯಲ್ಲಿ ನಡೆದಿರುವುದು ವರದಿಯಾಗಿದೆ.
ಹರ್ಯಾಣದ ಕರ್ನಾಲ್ ಜೆಲ್ಲೆಯ ತಾರೋರಿಯಲ್ಲಿರುವ ಮೂರು ಅಂತಸ್ತಿನ ಶಿವಶಕ್ತಿ ರೈಸ್ ಮಿಲ್ ಕುಸಿದು ಬಿದ್ದಿರುವ ಕಟ್ಟಡ. ಮಿಲ್ ನಲ್ಲಿ ರಾತ್ರಿ ಪಾಳಿಯ ಕೆಲಸವನ್ನು ಮಾಡಿ 100 ಹೆಚ್ಚಿನ ಕಾರ್ಮಿಕರು ಮಲಗಿದ್ದರು. ಈ ವೇಳೆ ಕಟ್ಟಡ ಕುಸಿದು ಬಿದ್ದಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ: Sand Mining: ಮರಳು ಮಾಫಿಯಾ ಪರಿಶೀಲಿಸಲು ತೆರಳಿದ್ದ ಅಧಿಕಾರಿಗಳನ್ನೇ ಅಟ್ಟಾಡಿಸಿ ಹಲ್ಲೆಗೈದರು
ಕಟ್ಟಡ ಕುಸಿದ ಪರಿಣಾಮ 4 ಜನರು ಮೃತಪಟ್ಟಿದ್ದು, 20 ಮಂದಿಗೆ ಗಾಯವಾಗಿದೆ ಎನ್ನಲಾಗಿದೆ. ಎನ್ ಡಿಆರ್ ಎಫ್, ಎಸ್ ಡಿಆರ್ ಎಫ್ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಿದ್ದಾರೆ. ಇದುವರೆಗೆ 100 ಮಂದಿಯನ್ನು ರಕ್ಷಿಸಲಾಗಿದ್ದು, ಅವಶೇಷದಡಿ ಇನ್ನು ಹಲವರು ಸಿಲುಕಿದ್ದಾರೆ ಎಂದು ಶಂಕಿಸಲಾಗಿದೆ.
ಕಟ್ಟಡದಲ್ಲಿ ಕೆಲ ದೋಷಗಳು ಇರುವುದು ಕಂಡು ಬಂದಿದೆ.ಇದರ ಬಗ್ಗೆ ತನಿಖೆ ನಡೆಸಲು ಸಮಿತಿಯೊಂದನ್ನು ರಚಿಸಲಾಗುವುದು.ಕಟ್ಟಡ ಮಾಲಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆಂದು ಕರ್ನಾಲ್ ನ ಜಿಲ್ಲಾಧಿಕಾರಿ ಅನೀಶ್ ಯಾದವ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wikipedia: ಪಕ್ಷಪಾತ, ತಪ್ಪು ಮಾಹಿತಿ ದೂರು: ವಿಕಿಪೀಡಿಯಾಗೆ ಕೇಂದ್ರದಿಂದ ನೋಟಿಸ್
Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
MUST WATCH
ಹೊಸ ಸೇರ್ಪಡೆ
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.