Karnataka Election 2023; ಮುಂದುವರಿದ ನಾಮಪತ್ರ ಭರಾಟೆ
Team Udayavani, Apr 19, 2023, 7:55 AM IST
ಮಂಗಳೂರು: ಜಿಲ್ಲೆಯಲ್ಲಿ ನಾಮಪತ್ರ ಭರಾಟೆ ಮಂಗಳವಾರವೂ ಮುಂದುವರಿದಿದೆ. 15 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ಬಹುತೇಕ ಅಭ್ಯರ್ಥಿಗಳ ಪ್ರಚಾರವೂ ತೀವ್ರಗೊಂಡಿದ್ದು, ಸುಡುಬಿಸಿಲು ಲೆಕ್ಕಿಸದೆ ಕಾರ್ಯಕರ್ತರು ಪ್ರಚಾರದಲ್ಲಿ ತೊಡಗಿದ್ದಾರೆ.
ಸುಳ್ಯ: ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯಕುಕ್ಕೆಗೆ ಭೇಟಿ ನೀಡಿದರು. ಬಳಿಕ ಸುಳ್ಯದಲ್ಲಿ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಕೆ.ಅಣ್ಣಾಮಲೈ ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ, ಸಚಿವ ಎಸ್. ಅಂಗಾರ ಸಹಿತ ಹಲವು ಮುಖಂಡರಿದ್ದರು. ಕಾಂಗ್ರೆಸ್ ಅಭ್ಯರ್ಥಿ ಜಿ. ಕೃಷ್ಣಪ್ಪ ನಾಮಪತ್ರ ಸಲ್ಲಿಕೆ ಮೆರವಣಿಗೆಯಲ್ಲಿ ಮಾಜಿ ಸಚಿವ ಯು.ಟಿ. ಖಾದರ್, ಪಕ್ಷದ ವಕ್ತಾರೆ ಭವ್ಯ ನರಸಿಂ ಹಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.
ಪುತ್ತೂರು: ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಅವರು ವಿವಿಧ ದೇವಾಲಯಗಳಿಗೆ ಭೇಟಿ ನೀಡಿದರು. ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಅವರು ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ಅವರ ಮನೆಗೆ ಭೇಟಿ ನೀಡಿ ಹೆತ್ತವರ ಆಶೀರ್ವಾದ ಪಡೆದರು. ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ವಿವಿಧೆಡೆ ಕಾರ್ಯಕರ್ತರನ್ನು ಭೇಟಿ ಮಾಡಿದರು.
ಬಂಟ್ವಾಳ: ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ಬಿ.ರಮಾನಾಥ ರೈ ಅವರು ಮಂಗಳೂರು ಕೊಲ್ಲೂರು, ಕುದ್ರೋಳಿ ಮೊದಲಾದ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಬಿಜೆಪಿ ಅಭ್ಯರ್ಥಿ ಶಾಸಕ ರಾಜೇಶ್ ನಾಯ್ಕ ಉಳಿಪಾಡಿಗುತ್ತು ಅವರು ವಾಮದಪದವು ಭಾಗದಲ್ಲಿ ಗೇರು ಬೀಜ ಕಾರ್ಖಾನೆಗಳಿಗೆ ತೆರಳಿ ಮತ ಯಾಚಿಸಿದರು.
ಬೆಳ್ತಂಗಡಿ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಹಾಗೂ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ವಿವಿಧೆಡೆ ಪ್ರಚಾರ ನಡೆಸಿದರು.ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಜೆಡಿಎಸ್‌ನ ನಿಖೀಲ್ ಭೇಟಿ ನೀಡಿ ಧರ್ಮಾಧಿಕಾರಿ ಡಾ|ಡಿ.ವೀರೇಂದ್ರ ಹೆಗ್ಗಡೆ ಆಶೀರ್ವಾದ ಪಡೆದರು. ಬಳಿಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದರು.
ಮೂಡುಬಿದಿರೆ: ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಮತ್ತು ಇತರೆ ಮುಖಂಡರ ಸಮ್ಮುಖ ಬಳುRಂಜೆ ಭಾಗದ ಕ್ರೈಸ್ತ ಸಮುದಾಯದ ಯುವಕರು ಬಿಜೆಪಿ ಸೇರಿದರು. ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಮನೆ ಮನೆ ಭೇಟಿಯಲ್ಲಿ ತೊಡಗಿದ್ದಾರೆ.
ಮಂಗಳೂರು ನಗರ ಉತ್ತರ: ಬಿಜೆಪಿ ಅಭ್ಯರ್ಥಿ ಡಾ|ವೈ ಭರತ್ ಶೆಟ್ಟಿ ನಾಮಪತ್ರ ಸಲ್ಲಿಕೆ ಸಂದರ್ಭ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸೇರಿದಂತೆ ಹಲವು ಮುಖಂಡರು ಇದ್ದರು. ಕಾಂಗ್ರೆಸ್‌ನ ನಾಲ್ಕನೇ ಪಟ್ಟಿ ಬಿಡುಗಡೆ ಯಾದರೂ ಅದರಲ್ಲಿ ಮಂಗಳೂರು ಉತ್ತರ ಕ್ಷೇತ್ರಕ್ಕೆ ಇನ್ನೂ ಅಭ್ಯರ್ಥಿಯನ್ನು ಘೋಷಿಸಲಿಲ್ಲ.
ಹುರಿಯಾಳುಗಳ ನಾಮಪತ್ರ ಸಲ್ಲಿಕೆ
ಉಡುಪಿ: ಜಿಲ್ಲೆಯಲ್ಲೂ ನಾಮಪತ್ರ ಸಲ್ಲಿಕೆಯದ್ದೇ ಭರಾಟೆ. ಒಟ್ಟು 9 ಮಂದಿ ನಾಮಪತ್ರ ಸಲ್ಲಿಸಿದರು.
ಕಾಪು: ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ಅವರು ಉಡುಪಿ ಶ್ರೀ ಕೃಷ್ಣ ಮಠ ಸೇರಿದಂತೆ ವಿವಿಧ ಧರ್ಮಗಳ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಿದರು. ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರು ಕ್ಷೇತ್ರದ ವಿವಿಧೆಡೆ ಕಾರ್ಯಕರ್ತರ ಸಭೆ ನಡೆಸಿ, ಬಳಿಕ ಶೃಂಗೇರಿ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿದರು.
ಕಾರ್ಕಳ: ಕಾಂಗ್ರೆಸ್ ಅಭ್ಯರ್ಥಿ ಉದಯ ಕುಮಾರ ಶೆಟ್ಟಿ ಮುನಿ ಯಾಲು ಸ್ಥಳೀಯ ದೇವಸ್ಥಾನ ಗಳಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಬಿಜೆಪಿ ಅಭ್ಯರ್ಥಿ ವಿ. ಸುನಿಲ್ ಕುಮಾರ್ ದುರ್ಗ, ಕುಕ್ಕುಂದೂರುವಿನಲ್ಲಿ ಪ್ರಚಾರ ಸಭೆ ನಡೆಸಿದರು.
ಬೈಂದೂರು: ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ಸಮಾವೇಶ ನಡೆಸಿದರು. ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ವಿವಿಧೆಡೆ ಪ್ರಚಾರ ನಡೆಸಿದರು. ಸೌಕೂರು ಸಹಿತ ವಿವಿಧ ದೇಗುಲಗಳಿಗೆ ಭೇಟಿ ನೀಡಿದರು.
ಉಡುಪಿ: ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಕ್ಷೇತ್ರ ವ್ಯಾಪ್ತಿಯ ನಾಗಬನ, ಭಜನ ಮಂದಿರಕ್ಕೆ ಭೇಟಿ ನೀಡಿದರು. ಬ್ರಹ್ಮಾವರ, ಕರ್ಜೆ, ಚಾಂತಾರು ಭಾಗದ ಕಾರ್ಯಕರ್ತರ ಸಭೆ ನಡೆಸಿದರು. ಬಿಜೆಪಿ ಅಭ್ಯರ್ಥಿ ಯಶ್‌ಪಾಲ್ ಸುವರ್ಣ ಸಂಘಟನೆಗಳೊಂದಿಗೆ ಚರ್ಚಿಸಿದರು.
ಕುಂದಾಪುರ: ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಹೆಗ್ಡೆ ಮೊಳಹಳ್ಳಿ ಪ್ರಚಾರದಲ್ಲಿ ನಿರತರಾಗಿದ್ದರು. ಬಿಜೆಪಿ ಅಭ್ಯರ್ಥಿ ಕಿರಣ್ ಕೊಡ್ಗಿ ಅವರು ವಿವಿಧೆಡೆ ಕಾರ್ಯಕರ್ತರ ಸಭೆ ನಡೆಸಿದರು. ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangalore: ಪ್ರಯಾಣಿಕರಿಗಾಗಿ ಸಿಗ್ನಲ್‌ಗಳಲ್ಲೇ ಬಸ್ ನಿಲುಗಡೆ; ಅನಾಹುತಕ್ಕೆ ಎಡೆ
Mangaluru: ನಿಷ್ಪ್ರಯೋಜಕವಾಗಿದೆ ಸ್ಥಳ ಸೂಚನ ಫಲಕಗಳು
Baikampady: ಇಲ್ಲಿ ಅಜ್ಜಿಯರೂ ರೈಲಿನಡಿ ನುಸುಳಿಯೇ ಹಳಿ ದಾಟಬೇಕು!
Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ
Niveus Mangalore Marathon 2024: ನ.10: ನೀವಿಯಸ್ ಮಂಗಳೂರು ಮ್ಯಾರಥಾನ್
MUST WATCH
ಹೊಸ ಸೇರ್ಪಡೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.