ನೀತಿ ಸಂಹಿತೆ ಉಲ್ಲಂಘನೆ; ಜೆಡಿಎಸ್ ಅಭ್ಯರ್ಥಿ ವಿರುದ್ಧ ದೂರು ದಾಖಲು
ಚುನಾವಣಾ ಪ್ರಚಾರದಲ್ಲಿ ಮಕ್ಕಳ ಬಳಕೆ ವಿರುದ್ಧ ದೂರು ದಾಖಲಿಸಿದ ಚುನಾವಣಾಧಿಕಾರಿಗಳು
Team Udayavani, Apr 19, 2023, 11:16 AM IST
ಗಂಗಾವತಿ: ಗಂಗಾವತಿ ಮತಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮತ್ತು ಜೆಡಿಎಸ್ ಕಾರ್ಯಕರ್ತರ ವಿರುದ್ಧ ಚುನಾವಣಾಧಿಕಾರಿಗಳು ದೂರು ದಾಖಲಿಸಿದ್ದಾರೆ .
ಮಂಗಳವಾರ ಜೆಡಿಎಸ್ ಅಭ್ಯರ್ಥಿ ಎಚ್.ಆರ್.ಚನ್‌ಕೇಶವ ಉಮೇದುವಾರಿಕೆಯ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಆಯೋಜಿಸಿದ್ದ ಜೆಡಿಎಸ್ ಕಾರ್ಯಕರ್ತರ ಮೆರವಣಿಗೆಯಲ್ಲಿ 10 ವರ್ಷಕ್ಕಿಂತ ಕೆಳಗಿರುವ ಮಕ್ಕಳನ್ನು ಬಳಕೆ ಮಾಡಲಾಗಿದೆ ಎಂದು ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ತಂಡದ ಅಧಿಕಾರಿಗಳು ನಗರ ಠಾಣೆಗೆ ದೂರು ಸಲ್ಲಿಸಿ ಆರೋಪಿತರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ.
ಜೆಡಿಎಸ್ ಅಭ್ಯರ್ಥಿ ಎಚ್ ಆರ್ ಚನ್ನಕೇಶವವರು ಮಂಗಳವಾರ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಶ್ರೀ ಚನ್ನಬಸವ ಸ್ವಾಮಿ ಗಂಜ್ ಮುಂಭಾಗದ ಗೇಟಿನಿಂದ ಶ್ರೀ ಚನ್ನಬಸವ ಸ್ವಾಮಿ ವೃತ್ತ ಮಹಾವೀರ ವೃತ್ತ ,ಗಾಂಧಿವೃತ್ತ ,ದುರ್ಗಮ್ಮ ದೇವಾಲಯದ ಹತ್ತಿರ ಮೆರವಣಿಗೆ ಸಂದರ್ಭದಲ್ಲಿ 10 ವರ್ಷದ ಒಳಗಿನ ಮಕ್ಕಳನ್ನು ಮೆರವಣಿಗೆಯಲ್ಲಿ ಬಳಸಿದ್ದಕ್ಕಾಗಿ ಚುನಾವಣಾ ಅಧಿಕಾರಿಗಳಾದ ಗುರುಪ್ರಸಾದ,ಶೇಖರಯ್ಯ,ರಾಜಪ್ಪ,ಶಂಕರಗೌಡ ಅಧಿಕಾರಿಗಳ ತಂಡ ಮೆರವಣಿಗೆಯಲ್ಲಿ ಮಕ್ಕಳಿರುವುದನ್ನು ಗಮನಿಸಿ ನಗರ ಠಾಣೆ ಗೆ ದೂರು ಸಲ್ಲಿಸಿದ್ದಾರೆ.
ಮೆರವಣಿಗೆಯ ಪರವಾನಿಗೆಗಾಗಿ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಶೇಖನಬಿ ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ ಮಕ್ಕಳನ್ನು ಮೆರವಣಿಗೆಯಲ್ಲಿ ಬಳಕೆ ಮಾಡದಂತೆ ನಿರ್ಭಂಧ ವಿಧಿಸಿದ್ದರೂ ನಿಯಮ ಉಲ್ಲಂಘನೆ ಮಾಡಿದ್ದ ರಿಂದ 188 ಐಪಿಸಿ ಮತ್ತು14 ಬಾಲಕಾರ್ಮಿಕ ನಿಷೇಧ ಕಾಯ್ದೆ ಅನ್ವಯ ಜೆಡಿಎಸ್ ಕಾರ್ಯಕರ್ತರ ವಿರುದ್ದ ಕೇಸ್ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
MUST WATCH
ಹೊಸ ಸೇರ್ಪಡೆ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.