Karnataka Election: ಡಾ.ಜಿ.ಪರಮೇಶ್ವರ್ ನಾಮಪತ್ರ ಸಲ್ಲಿಕೆ
Team Udayavani, Apr 19, 2023, 2:06 PM IST
ತುಮಕೂರು: ಮಾಜಿ ಉಪಮುಖ್ಯ ಮಂತ್ರಿ ಡಾ.ಜಿ.ಪರಮೇಶ್ವರ್ ಕೊರಟಗೆರೆ ವಿಧಾನ ಸಭಾ ಕ್ಷೇತ್ರದಿಂದ ಬುಧವಾರ ನಾಮಪತ್ರ ಸಲ್ಲಿಸಿದರು.
ಅಪಾರ ಬೆಂಬಲಿಗರೊಂದಿಗೆ ಪಟ್ಟಣದಲ್ಲಿ ಮೆರವಣಿಗೆ ಮಾಡಿ ನಂತರ ತಾಲ್ಲೂಕು ಕಚೇರಿಯಲ್ಲಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.
ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನಾನು ಇಂದು ನಾಮಪತ್ರ ಸಲ್ಲಿಸಿದ್ದೇನೆ ಎಂದರು.
ಕಾನೂನಿನ ಚೌಕಟ್ಟಿನಲ್ಲಿ, ಸಂವಿಧಾನ ಚೌಕಟ್ಟಿನಲ್ಲಿ ಚುನಾವಣೆ ನಡೆಸಲು ಒಪ್ಪಿಕೊಂಡಿದ್ದೇವೆ. ಅದರನ್ವಯ ನಾನು ಇಂದು ನಾಮಪತ್ರ ಸಲ್ಲಿಸಿದ್ದೇನೆ. ಈ ಚುನಾವಣೆಯಲ್ಲಿ ನಾನು ಗೆದ್ದೇ ಗೆಲ್ಲುತ್ತೇನೆ ಎನ್ನುವ ಆತ್ಮವಿಶ್ವಾಸದಿಂದ ನಾಮಪತ್ರ ಸಲ್ಲಿಸಿದ್ದೇನೆ ಎಂದು ನುಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಎಲ್ಲಾ ಸೂಚನೆ ಇದೆ. ಮತದಾರರಿಗೆ ಮನವಿ ಮಾಡ್ತೀವಿ ಮೇ 10 ರಂದು ನನಗೆ ಮತಕೊಡಿ ಎಂದು ಕೊರಟಗೆರೆ ಕ್ಷೇತ್ರದ ಜನರಲ್ಲಿ ಮನವಿ ಮಾಡಿದ್ದೇನೆ ಎಂದು ಹೇಳಿದರು.
ಕೊರಟಗೆರೆಯಿಂದ ಇಂದು ನಾಮಪತ್ರ ಸಲ್ಲಿಸಿದ್ದು ಇದು ಐತಿಹಾಸಿಕ ದಿನ ಆಗಲಿ ಎಂದು ಅಭಿಮಾನಿಗಳು ಬಯಸೋದು ಸ್ವಾಭಾವಿಕ.
ನಾನು ಉನ್ನತ ಹುದ್ದೇಗೆ ಏರಲಿ ಎಂದು ಅಭಿಮಾನಿಗಳು ಆಸೆ ಇಟ್ಟುಕೊಂಡಿರುತ್ತಾರೆ ಅದು ಅಹಜ ಹೊಸದೇನಲ್ಲ.
ಈ ಕ್ಷೇತ್ರದಿಂದ ನಾನು ಗೆಲ್ಲುತ್ತೇನೆ ಎಂಬ ಅಚಲ ವಿಶ್ವಾಸ ಇದೆ ಎಂದರು.
ಕಾಂಗ್ರೆಸ್ ಗೆ ವಲಸೆ ಬರೋರ ಸಂಖ್ಯೆ ಹೆಚ್ಚಾಗಿರೋದು ಶುಭ ಸೂಚನೆ. ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಅನ್ನೋ ಸೂಚನೆ ಇರೋದರಿಂದ ಬರ್ತಾ ಇದ್ದಾರೆ.
ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ ಅಂತಹ ಹಿರಿಯ ನಾಯಕರು ಬಂದಿರೋದು ಪಕ್ಷ ಅಧಿಕಾರಕ್ಕೆ ಬರುತ್ತೆ ಅನ್ನೋ ಮುನ್ಸೂಚನೆ. ಇನ್ನೂ ಕೂಡ ತುಂಬಾ ಜನ ಕಾಂಗ್ರೆಸ್ ಗೆ ಬರುವವರಿದ್ದಾರೆ.
ರಾಮದಾಸ್ ಕೂಡಾ ಬಿಜೆಪಿ ತೊರೆದು ಕಾಂಗ್ರೆಸ್ ಬಂದರೆ ಆಶ್ಚರ್ಯ ಪಡಬೇಕಂತಿಲ್ಲ ಎಂದು ನುಡಿದರು.
ತುಮಕೂರು ಜಿಲ್ಲೆಯ ಬೇರೆ ಬೇರೆ ಪಕ್ಷದ ಮುಖಂಡರು ನನ್ನ ಸಂಪರ್ಕದಲ್ಲಿ ಇದ್ದಾರೆ. ಸಿದ್ದರಾಮಯ್ಯ ಅವರು ಕೂಡಾ ಕೊರಟಗೆರೆ ಕ್ಷೇತ್ರದ ಪ್ರಚಾರಕ್ಕೆ ಬರ್ತಾರೆ. ಈಗ ತಾನೇ ಅವರಿಗೆ ಪೋನ್ ನಲ್ಲು ಮಾತನಾಡಿ ಶುಭ ಹಾರೈಸಿದ್ದೇನೆ, ಅವರು ಕೂಡಾ ನನಗೆ ಶುಭವಾಗಲಿ ಎಂದು ಹೇಳಿದ್ದಾರೆ.
ದಲಿತ ಸಿಎಂ ಕುರಿತು ನಾನು ಪ್ರತಿಕ್ರಿಯೆ ಮಾಡಲು ಹೋಗಲ್ಲ. ನಮಗೆ ಬೇಕಾಗಿರೋದು ಕಾಂಗ್ರೇಸ್ ಅಧಿಕಾರಕ್ಕೆ ಬರೋದು ಎಂದರು. ಅದರ ಬಗ್ಗೆ ಟಿಪ್ಪಣಿ ಮಾಡೋದು ನನಗೆ ಇಷ್ಟ ಇಲ್ಲ. ಸಿಎಂ ಕಾಂಗ್ರೆಸ್ ಮುಳುಗುವ ಹಡಗು ಹೇಳಿಕೆ ವಿಚಾರ ವಾಗಿ ಪ್ರತಿಕ್ರಿಯಿಸಿದ ಅವರೇ ಹೇಳಿದ ಹಾಗೇ ಯಾರು ಮುಳುಗುತ್ತಾರೆ 13 ನೇ ತಾರೀಕಿನಂದು ಗೊತ್ತಾಗುತ್ತೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Koratagere: ಕಂದಾಯ ಇಲಾಖೆ ಸಿಬ್ಬಂದಿ ಸೇರಿ ನಾಲ್ವರ ಮೇಲೆ ಹೆಜ್ಜೇನು ದಾಳಿ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.