ಮಂಗಳೂರು: ಚಾಲಕನ ಕೊಲೆ ಪ್ರಕರಣ; ನಾಲ್ವರನ್ನು ಬಂಧಿಸಿದ ಪೊಲೀಸರು


Team Udayavani, Apr 19, 2023, 3:17 PM IST

1–dsdsad

ಮಂಗಳೂರು: ನಗರದ ಸ್ಟೇಟ್ ಬ್ಯಾಂಕ್ ನಲ್ಲಿರುವ ಪುಟ್ಬಾಲ್ ಮೈದಾನದ ಬಳಿ ಮಲಗಿದ್ದ ಕಾರು ಚಾಲಕ ಜನಾರ್ದನ ಪೂಜಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು‌ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಕೇರಳ ಮೂಲದ ಪ್ರಶಾಂತ್ (40), ಕುಶಲನಗರದ ಜಿ.ಕೆ ರವಿಕುಮಾರ್ @ ನಂದೀಶ (38), ಕೊಣಾಜೆಯ ವಿಜಯ ಕುಟಿನ್ಹಾ (28) ,ಬಂಟ್ವಾಳದ ಶರತ್.ವಿ (36) ಎಂದು ಗುರುತಿಸಲಾಗಿದೆ.

ಮೊಬೈಲ್ ಸುಲಿಗೆ ಉದ್ದೇಶದಿಂದ ಕೊಲೆ: ಮಂಗಳವಾರ (ಏ.18 ರಂದು) ಸಂಜೆ ಸ್ಟೇಟ್ ಬ್ಯಾಂಕ್ ನಲ್ಲಿರುವ ಪುಟ್ಬಾಲ್ ಮೈದಾನದ ಬಳಿ ಮಲಗಿದ್ದ ಜನಾರ್ದನ ಪೂಜಾರಿ ಅವರ ಹತ್ತಿರ ಬಂದು ಆರೋಪಿಗಳು ಜನಾರ್ದನ ಅವರ ಮೊಬೈಲ್‌ ಕೊಡುವಂತೆ ಹೇಳಿದ್ದಾರೆ. ಇದೇ ಮಾತಿಗೆ ಆರೋಪಿಗಳ ಜೊತೆ ಘರ್ಷಣೆ ಉಂಟಾಗಿದೆ. ಈ ವೇಳೆ ಒಬ್ಬಾತ ತನ್ನ ಕಾಲಿನಿಂದ ಜನಾರ್ದನ ಪೂಜಾರಿ ಅವರ ಎದೆಗೆ ಒದ್ದಾಗ ಅವರು ಸುಮಾರು 6 ಅಡಿ ಮೇಲಿನಿಂದ ಕೆಳಗಡೆ ಬಿದ್ದಿದ್ದಾರೆ. ಬಳಿಕ ಪುನಃ ನಾಲ್ಕು ಜನ ಆರೋಪಿಗಳು ಜನಾರ್ದನ ಪೂಜಾರಿ ಅವರು ಬಿದ್ದಿದ್ದಲ್ಲಿಗೆ ಹೋಗಿ, ತಮ್ಮ ಕೈಗಳಿಂದ ಜನಾರ್ದನ ಪೂಜಾರಿ ಅವರಿಗೆ ಹಲ್ಲೆ ಮಾಡಿ ತಮ್ಮ ಕಾಲಿನಿಂದ ತುಳಿದು ಕೊಲೆಯನ್ನು ಮಾಡಿದ್ದಾರೆ. ಈ ಬಗ್ಗೆ ಜನಾರ್ದನ ಪೂಜಾರಿ ರವರ ಅಣ್ಣ ಉಮೇಶ್ ಪೂಜಾರಿ ದೂರು ನೀಡಿದ್ದಾರೆ.

ಮಂಗಳೂರು ದಕ್ಷಿಣ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೊಬೈಲ್ ಸುಲಿಗೆ ಉದ್ದೇಶದಿಂದಲೇ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಆರೋಪಿಗಳ ಕ್ರಿಮಿನಲ್‌ ಹಿನ್ನೆಲೆ: ಬಂಧಿತರಾಗಿರುವ ಆರೋಪಿಗಳ ಮೇಲೆ ಈಗಾಗಲೇ ಹಲವು ಕ್ರಿಮಿನಲ್‌ ಕೇಸ್‌ ದಾಖಲಾಗಿದ್ದು,ಜಿ.ಕೆ. ರವಿಕುಮಾರ್  ಎಂಬಾತನ ಮೇಲೆ 2009 ರಲ್ಲಿ ಕುಶಾಲನಗರ ಪೊಲೀಸ್‌ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಶರತ್ ಎಂಬಾತನ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣೆಯಲ್ಲಿ 2007 ರಲ್ಲಿ ಮನೆ ಕಳವು ಪ್ರಕರಣ, ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸ್ ಠಾಣೆಯಲ್ಲಿ 2022 ರಲ್ಲಿ ಸುಲಿಗೆ ಪ್ರಕರಣ ದಾಖಲಾಗಿದೆ. ಈತ ಜೈಲಿನಿಂದ ಇತ್ತೀಚೆಗೆ ಬಿಡುಗಡೆಯಾಗಿದ್ದ.  ಆರೋಪಿ ವಿಜಯ ಕುಟಿನ್ಹಾ ಎಂಬಾತನ ಮೇಲೆ ಕೋಣಾಜೆ ಪೊಲೀಸ್‌ ಠಾಣೆಯಲ್ಲಿ 2022 ರಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿರುತ್ತದೆ.

ಟಾಪ್ ನ್ಯೂಸ್

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Kiccha Sudeep’s max movie releasing on Dec 25th

Kiccha Sudeepa: ಕ್ರಿಸ್ಮಸ್‌ ಗೆ ಬರುತ್ತಿದೆ ʼಮ್ಯಾಕ್ಸ್‌ʼ

ಸಿಎಸ್‌ ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ

Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ

Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ

Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ

MNG-Falnir

Mangaluru: ಬೊಲೆರೋ ವಾಹನಕ್ಕೆ ಆಕಸ್ಮಿಕ‌ ಬೆಂಕಿ

Mulki: ಮತ್ತೆ ಚಿರತೆ ಪ್ರತ್ಯಕ್ಷ, ಹೆಚ್ಚಿದ ಭೀತಿ

Mulki: ಮತ್ತೆ ಚಿರತೆ ಪ್ರತ್ಯಕ್ಷ, ಹೆಚ್ಚಿದ ಭೀತಿ

Mulki: ರೈಲು ಪ್ರಯಾಣಿಕನ ಹಂತಕ ಅಂತಾರಾಜ್ಯ ಕುಖ್ಯಾತ ಪಾತಕಿMulki: ರೈಲು ಪ್ರಯಾಣಿಕನ ಹಂತಕ ಅಂತಾರಾಜ್ಯ ಕುಖ್ಯಾತ ಪಾತಕಿ

Mulki: ರೈಲು ಪ್ರಯಾಣಿಕನ ಹಂತಕ ಅಂತಾರಾಜ್ಯ ಕುಖ್ಯಾತ ಪಾತಕಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Kiccha Sudeep’s max movie releasing on Dec 25th

Kiccha Sudeepa: ಕ್ರಿಸ್ಮಸ್‌ ಗೆ ಬರುತ್ತಿದೆ ʼಮ್ಯಾಕ್ಸ್‌ʼ

ಸಿಎಸ್‌ ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.