BJP, JDS ಅಭ್ಯರ್ಥಿಗಳಿಗೆ ಠೇವಣಿ ಸಿಗಬಾರದು: ನಾಮಪತ್ರ ಸಲ್ಲಿಸಿ ಪರಮೇಶ್ವರ್ ಕಿಡಿ

ಕೊರಟಗೆರೆಯಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ..

Team Udayavani, Apr 19, 2023, 6:55 PM IST

1-csadsdad

ಕೊರಟಗೆರೆ: 40% ಕಮಿಷನ್ ಹೊಡೆದು ಬಿಜೆಪಿ ಸರಕಾರ ಬಡಜನರ ಜೀವನದ ಜೊತೆ ಚೆಲ್ಲಾಟ ಆಡ್ತೀದೆ. ಬಿಜೆಪಿ ಪಕ್ಷದ ಜಗದೀಶ್ ಶೆಟ್ರು ಮತ್ತು ಲಕ್ಷ್ಮಣ್ ಸವದಿ ಅಂತಹ ಹಿರಿಯ ನಾಯಕರ ಆಗಮನದಿಂದ ಕಾಂಗ್ರೆಸ್ ಪಕ್ಷಕ್ಕೆ ಮತ್ತಷ್ಟು ಶಕ್ತಿ ಬಂದಿದೆ. ತುಮಕೂರು ಜಿಲ್ಲೆಯ ಬೇರೆ ಬೇರೆ ಪಕ್ಷದ ನಾಯಕರು ನನ್ನ ಸಂಪರ್ಕದಲ್ಲಿ ಇದ್ದಾರೇ. ಈಗ ರಾಮದಾಸ್ ನಮ್ಮ ಪಕ್ಷಕ್ಕೆ ಬಂದರೂ ಆಶ್ಚರ್ಯವಿಲ್ಲ ಎಂದು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ ತಿಳಿಸಿದರು.

ಕೊರಟಗೆರೆ ಪಟ್ಟಣದ ಕಂದಾಯ ಇಲಾಖೆ ಕಚೇರಿಯಲ್ಲಿ ಚುನಾವಣಾ ಅಧಿಕಾರಿ ಹಾಲ ಸಿದ್ದಪ್ಪ ಪೂಜೇರಿಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ತನ್ನ ಉಮೇದುವಾರಿಕೆ ಸಲ್ಲಿಸಿದ ನಂತರ ಕೊರಟಗೆರೆ ಬ್ಲಾಕ್ ಕಾಂಗ್ರೆಸ್ ಪಕ್ಷದಿಂದ ಬುಧವಾರ ಬೃಹತ್ ಮೆರವಣಿಗೆಯನ್ನು ಉದ್ದೇಶಿಸಿ ಮಾತನಾಡಿದರು.

ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ನನ್ನ ಕೊರಟಗೆರೆ ಕ್ಷೇತ್ರಕ್ಕೆ ಪ್ರಚಾರಕ್ಕೆ ಬರ್ತಾರೇ. ದಲಿತ ಸಿಎಂ ಕುರಿತು ನಾನು ಪ್ರತಿಕ್ರಿಯೆ ನೀಡೋದಿಲ್ಲ. ನಮಗೇ ಬೇಕಾಗಿರೋದು ಕಾಂಗ್ರೆಸ್ ಅಧಿಕಾರಿಕ್ಕೆ ತರೋದು. ಸಿಎಂ ಬಗ್ಗೆ ಟೀಕೆ ಟಿಪ್ಪಣಿ ಮಾಡೋದು ನನಗೇ ಇಷ್ಟ ಇಲ್ಲ. ಕಾಂಗ್ರೆಸ್ ಸರಕಾರ ಏನಾದ್ರು ಅಕ್ಕಿ ಕೊಡದೇ ಹೋಗಿದ್ರೇ ಜನ ಹಸಿವಿನಿಂದ ಸಾಯ್ತಿದ್ರು. ಮೇ.13 ಕ್ಕೆ ಸಿಎಂ ಬೊಮ್ಮಾಯಿ ಅವರಿಗೆ ಗೊತ್ತಾಗುತ್ತೇ ಯಾವ ಸರಕಾರ ಅಧಿಕಾರಕ್ಕೆ ಬರುತ್ತೇ ಅಂತಾ ಅಲ್ಲಿಯವರೆಗೆ ಕಾದುನೋಡಲಿ ಎಂದರು.

ಕೊರಟಗೆರೆ ಕ್ಷೇತ್ರದಲ್ಲಿ ಪರಮೇಶ್ವರ ಮೂರನೇ ಸ್ಥಾನಕ್ಕೆ ಹೋಗ್ತಾರೇ ಅಂದವರಿಗೆ ಇವತ್ತು ಜನರೇ ಉತ್ತರ ಕೊಟ್ಟಿದ್ದಾರೆ. ಇತಿಹಾಸದಲ್ಲಿ ಎಂದು ಸಹ ನಾಮಪತ್ರ ಸಲ್ಲಿಸೋದಕ್ಕೆ ಇಷ್ಟು ಜನ ಸೇರಿರಲಿಲ್ಲ. ಮುಂದೆ ನಿಮ್ಮ ಸೇವೆ ಮಾಡಿ ನಿಮ್ಮ ಋಣ ತೀರಿಸ್ತಿನಿ. ೫ವರ್ಷದಲ್ಲಿ 2500 ಸಾವಿರ ಕೋಟಿ ತಂದಿದ್ದೇನೆ. ಮುಂದೆ ನಿಮ್ಮ ಆರ್ಶಿವಾದ ಸಿಕ್ಕ ಮೇಲೆ 5 ಸಾವಿರ ಕೋಟಿ ತರುತ್ತೇನೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತೇ. ಕೊರಟಗೆರೆ ಕ್ಷೇತ್ರದಲ್ಲಿ ನಾನು ಗೆದ್ದೇ ಗೇಲ್ತಿನಿ. ಯಾವುದೇ ಅನುಮಾನ ಬೇಡ ಎಂದರು.

ಮಧುಗಿರಿ ಕ್ಷೇತ್ರದಲ್ಲಿ ನನ್ನ ಮುಂದೆ ಚುನಾವಣೆಗೆ ಸ್ಪರ್ಧಿಸಿದ 5 ಜನ ಡಿಪಾಸಿಟ್ ಬಂದಿರಲಿಲ್ಲ. ಕೊರಟಗೆರೆ ಕ್ಷೇತ್ರದಲ್ಲಿಯೂ 2023 ಕ್ಕೆ ಯಾರಿಗೂ ಡಿಪಾಸಿಟ್ ಬರಬಾರದು. ಜೆಡಿಎಸ್ ಮತ್ತು ಬಿಜೆಪಿಗೆ ನೀವು ತಕ್ಕಪಾಠ ಕಲಿಸಬೇಕಿದೆ. ಪ್ರತಿ ಹಳ್ಳಿಯ ಬೂತ್‌ನಲ್ಲಿ ಯಾರ್ ಏನ್ ಮಾಡ್ತಾರೇ ಎಂದು ಕಾವಲು ಕಾಯಬೇಕು. ಬಿಜೆಪಿ ಮತ್ತು ಜೆಡಿಎಸ್ ಪಕ್ಷದವರು ತಿರುಗಿ ನೋಡ್ಕೊಬೇಕು ಹಾಗೇ ಲೀಡ್ ಕೋಡಬೇಕು ನನಗೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರಗೌಡ, ತುಮಕೂರು ನಗರ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಅಹಮ್ಮದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕೆರೆಶಂಕರ್, ಮಹಿಳಾ ಅಧ್ಯಕ್ಷೆ ಜಯಮ್ಮ, ಯುವಾಧ್ಯಕ್ಷ ವಿನಯ್, ಮುಖಂಡರಾದ ಎಂಎನ್‌ಜೆ ಮಂಜುನಾಥ, ಪ್ರಸನ್ನಕುಮಾರ್, ಗಂಗಾಧರಪ್ಪ, ರಾಜಣ್ಣ, ಹುಲೀಕುಂಟೆ ಪ್ರಸಾದ್, ಓಬಳರಾಜು, ಆನಂದ್, ಕವಿತಾ, ಜಯರಾಂ, ಮೂರ್ತಪ್ಪ ಸೇರಿದಂತೆ ಇತರರು ಇದ್ದರು.

ಸ್ವಾಮೀಜಿಗಳ ಆರ್ಶಿವಾದ ಪಡೆದ ಮಾಜಿ ಡಿಸಿಎಂ
ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ ನಾಮಪತ್ರ ಸಲ್ಲಿಸುವ ಮುನ್ನಾ ತುಮಕೂರು ಸಿದ್ದಗಂಗಾ ಕ್ಷೇತ್ರದ ಶ್ರೀಸಿದ್ದಗಂಗಾ ಸ್ವಾಮೀಜಿಗಳು, ಸಿದ್ದರಬೆಟ್ಟದ ಶ್ರೀವೀರಭದ್ರ ಶಿವಚಾರ್ಯ ಸ್ವಾಮೀಜಿ, ಎಲೆರಾಂಪುರದ ಡಾ.ಹನುಮಂತನಾಥ ಸ್ವಾಮೀಜಿ ಮತ್ತು ಬೆಳ್ಳಾವಿ ಶ್ರೀಕಾರದ ಮಠದ ಶ್ರೀಕಾರದ ವೀರಬಸವ ಸ್ವಾಮೀಜಿ, ತಂಗನಹಳ್ಳಿ ಶ್ರೀಮಠದ ಶ್ರೀಬಸವ ಮಹಾಲಿಂಗ ಸ್ವಾಮೀಜಿಯವರ ಆರ್ಶಿವಾದ ಪಡೆದರು.

35 ಸಾವಿರಕ್ಕೂ ಅಧಿಕ ಕಾಂಗ್ರೆಸ್ ಕಾರ್ಯಕರ್ತರು

ಕೊರಟಗೆರೆ ಪಟ್ಟಣದ ಸರಕಾರಿ ಬಸ್ ನಿಲ್ದಾಣದಿಂದ ೩೫ಸಾವಿರಕ್ಕೂ ಅಧಿಕ ಕಾಂಗ್ರೆಸ್ ಕಾರ್ಯಕರ್ತರ ಜೊತೆ ತಾಲೂಕು ಕಛೇರಿವರೆಗೂ ರೋಡ್‌ಶೋ ನಡೆಸಿ ಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶಿಸಿದರು. ರೂಡ್‌ಶೋನಲ್ಲಿ ೧೫ಕ್ಕೂ ಅಧಿಕ ಜೆಸಿಬಿಗಳಿಂದ ಎಂಎನ್‌ಜೆ ಮಂಜುನಾಥ ಮತ್ತು ಅಭಿಮಾನಿಗಳು ಮಾಜಿ ಡಿಸಿಎಂ ಪರಮೇಶ್ವರಗೆ ಹೂವಿನ ಸುರಿಮಳೆ ಹಾಕುವ ಮೂಲಕ ಕಾಂಗ್ರೆಸ್ ಪಕ್ಷದ ಪರವಾಗಿ ಅದ್ದೂರಿಯಾಗಿ ಪ್ರಚಾರ ನಡೆಸಿದರು.

ಮಹಿಳಾ ಪೇದೆ ಮೇಲೆ ಕಲ್ಲೆಸೆದ ಕಿಡಿಗೇಡಿ

ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ ನಾಮಪತ್ರ ಸಲ್ಲಿಸುವ ವೇಳೆ ಮಹಿಳಾ ಪೊಲೀಸ್ ಪೇದೆ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೋರಾಟ ನಡೆದಿದೆ. ಪರಮೇಶ್ವರ ಜೊತೆ ನಾಮಪತ್ರ ಸಲ್ಲಿಸಲು ಒಳಗೇ ಬಿಡಲಿಲ್ಲ ಎಂದು ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ವಾಗ್ದಾದ ನಡೆದಿದೆ. ನಂತರ ಹೊರಗಡೆಯಿಂದ ಕಿಡಿಗೇಡಿಗಳು ಪೊಲೀಸರ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ. ಮಹಿಳಾ ಪೇದೆಯ ತಲೆಗೆ ಪೆಟ್ಟಾಗಿ ಕೊರಟಗೆರೆ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ತುಮಕೂರು ಎಸ್ಪಿ ರಾಹುಲ್‌ಕುಮಾರ್ ಶಹಾಪುರ್ ವಾಡ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Shimoga; Omini caught fire while filling with petrol

Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

4-kunigal

Kunigal: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ

14-kunigal

Kunigal: ಟೈರ್ ಸ್ಪೋಟಗೊಂಡು ಕಾರು ಪಲ್ಟಿ: ಐಟಿ ಉದ್ಯೋಗಿ ದುರ್ಮರಣ

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

koratagere

Koratagere: ಗೃಹ ಸಚಿವರ ಸ್ವ ಕ್ಷೇತ್ರದಲ್ಲೇ ಮಲ ಹೊತ್ತ 10 ವರ್ಷದ ಬಾಲಕ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

4(1)

Lupus Nephritis: ಲೂಪಸ್‌ ನೆಫ್ರೈಟಿಸ್‌ ರೋಗಿಗಳಿಗೆ ಒಂದು ಮಾರ್ಗದರ್ಶಿ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.