ಸತ್ತರೆ ಶಿಗ್ಗಾವಿ ಮಣ್ಣಲ್ಲೇ ಅಂತ್ಯಸಂಸ್ಕಾರ ಮಾಡಿ: CM ಬೊಮ್ಮಾಯಿ
ಮತದಾರರಿಗೆ ಭಾವುಕರಾಗಿ ಮನವಿ ಮಾಡಿದ ಬೊಮ್ಮಾಯಿ
Team Udayavani, Apr 20, 2023, 7:32 AM IST
ಹಾವೇರಿ: ಬಿಜೆಪಿ ಮೇ 13ರಂದು 125ಕ್ಕೂ ಹೆಚ್ಚು ಸ್ಥಾನಗಳೊಂದಿಗೆ ಮತ್ತೆ ಅ ಧಿಕಾರಕ್ಕೆ ಬರಲಿದೆ. ಮತ್ತೆ ಕನ್ನಡ ಮಾತೆಯ ಸೇವೆ ಮಾಡಲಿದೆ. ನನ್ನ ಸಾವಾದರೆ ಶಿಗ್ಗಾವಿ ಮಣ್ಣಿನಲ್ಲೇ ಅಂತ್ಯಸಂಸ್ಕಾರ ಮಾಡಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ನೆರೆದಿದ್ದ ಜನರಿಗೆ ಭಾವುಕರಾಗಿ ಹೇಳಿದರು.
ಜಿಲ್ಲೆಯ ಶಿಗ್ಗಾವಿ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಬೃಹತ್ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರ ಎಲ್ಲ ರಂಗಗಳಲ್ಲೂ ವಿಫಲವಾಗಿತ್ತು. ಮೂಲ ಸೌಕರ್ಯದ ಕೊರತೆ, ನೀರಿನ ಸಮಸ್ಯೆ ವ್ಯಾಪಕವಾಗಿತ್ತು. ಕ್ಷೇತ್ರದಲ್ಲಿ 2 ಏತ ನೀರಾವರಿ ಯೋಜನೆ ಅನುಷ್ಠಾನದ ಮೂಲಕ 100ಕ್ಕೂ ಹೆಚ್ಚು ಕೆರೆಗಳಿಗೆ ನೀರು ತುಂಬಿಸಲಾಗಿದೆ. ಗ್ರಾಮೀಣ, ಜಿಲ್ಲಾ ರಸ್ತೆ, ರಾಜ್ಯ, ರಾಷ್ಟ್ರೀಯ ಹೆದ್ದಾರಿ ಸೇರಿ 2 ಸಾವಿರ ಕಿ.ಮೀ. ರಸ್ತೆಗಳ ನಿರ್ಮಾಣವಾಗಿದೆ ಎಂದರು.
ಬಡತನ ಶಾಪವಲ್ಲ. ಸಾಯುವವರೆಗೆ ಬಡತನ ಇರಬೇಕಿಲ್ಲ. ಪ್ರಾಮಾಣಿಕತೆಯಿಂದ ದುಡಿಯಲು ಅವಕಾಶ ಕೊಟ್ಟಿದ್ದೇವೆ. ಈ ಭಾಗದಲ್ಲಿ ಅತಿ ಹೆಚ್ಚು ಮನೆಗಳನ್ನು ನಿರ್ಮಿಸಿ ಕೊಡಲಾಗುತ್ತಿದೆ. ಶಹರಗಳ ಸಂಪೂರ್ಣ ಅಭಿವೃದ್ಧಿ, ಪ್ರತಿ ಮನೆಗೆ ನಳದಿಂದ ನೀರು ಕೊಡುತ್ತಿದ್ದೇವೆ. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರ ಜಲಜೀವನ್ ಮಿಷನ್ ಅಡಿ ಎಲ್ಲ ಹಳ್ಳಿಗಳಿಗೂ ನೀರಿನ ಸೌಕರ್ಯ ಕೊಡುತ್ತಿದೆ. ಹೀಗಾಗಿ ಅಭಿವೃದ್ಧಿಗಾಗಿ ಜನರು ನಮಗೆ ಆಶೀರ್ವಾದ ಮಾಡಲಿದ್ದಾರೆ ಎಂದರು.
ಬೊಮ್ಮಾಯಿ ಮಾಮಗೆ ಬೆಂಬಲ ನೀಡಿ
ಚಿತ್ರನಟ ಕಿಚ್ಚ ಸುದೀಪ್ ಮಾತನಾಡಿ, ಜನಮನ ಗೆದ್ದ ಸಿಎಂ ಬೊಮ್ಮಾಯಿ ಮಾಮಗೆ ಕೆಲಸ ಮಾಡಲು ಇನ್ನಷ್ಟು ಸಮಯ ಬೇಕಿದೆ. ಜನರ ಒಳಿತಿಗಾಗಿ ಅವರನ್ನು ಬೆಂಬಲಿಸಬೇಕು. ನಾನು ಒಬ್ಬ ಭಾರತೀಯನಾಗಿ ಪ್ರಧಾನಿ ಮೋದಿ ಕೆಲಸಗಳನ್ನು ಮೆಚ್ಚುತ್ತೇನೆ. ನಿಮ್ಮ ನಂಬಿಕೆ ಇದ್ದರೆ ಕೆಲಸ ಚೆನ್ನಾಗಿ ಆಗುತ್ತದೆ. “ಗೆದ್ದೇ ಗೆಲ್ಲುವೆ ಒಂದು ದಿನ, ಗೆಲ್ಲಲೇ ಬೇಕು ಒಳ್ಳೆತನ’ ಹಾಡನ್ನು ಉದಾಹರಿಸಿದರು.
ಓಡಿ ಹೋಗುವ ಮುಖ್ಯಮಂತ್ರಿ ನಾನಲ್ಲ
ಜೀವನದ ಕೊನೆ ಉಸಿರು ಇರುವವರೆಗೂ ನಿಮ್ಮ ಸೇವೆ ಮಾಡುತ್ತೇನೆ. ಕ್ಷೇತ್ರ ಬದಲಿಸುವ, ಓಡಿ ಹೋಗುವ ಮುಖ್ಯಮಂತ್ರಿ ನಾನಲ್ಲ. ಏನೇ ಆದರೂ ನನ್ನ ಜನರ ಮುಂದೆ ತೀರ್ಮಾನ ಆಗಬೇಕು. ನೀವೇ ಮಾಲಕರು ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ನಾಮ್ ಕೆ ವಾಸ್ತೆ ಅಲ್ಲ ಕಾಮ್ ಕೆ ವಾಸ್ತೆ ಸಿಎಂ: ಸುದೀಪ್
ಸುಂದರವಾಗಿ ಸುಸ್ವಾಗತ ನೀಡಿ ಪ್ರೀತಿ ತೋರಿದ್ದೀರಿ. ಬೊಮ್ಮಾಯಿ ಮಾಮ ಅವರು ಕಡಿಮೆ ಅವ ಧಿಯಲ್ಲಿ ತುಂಬಾ ಕೆಲಸ ಮಾಡಿದ್ದಾರೆ. ಇವರು ನಾಮ್ ಕೆ ವಾಸ್ತೆ ಅಲ್ಲ, ಕಾಮ್ ಕೆ ವಾಸ್ತೆ ಸಿಎಂ ಎಂದು ನಾಯಕ ನಟ ಕಿಚ್ಚ ಸುದೀಪ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.