Sudan Clash: ಸೂಡಾನ್ ಸಂಘರ್ಷ ಭಾರತೀಯರಿಗೆ ಭೀತಿ
Team Udayavani, Apr 20, 2023, 7:42 AM IST
ಹೊಸದಿಲ್ಲಿ: ಸಂಘರ್ಷಪೀಡಿತ ಸೂಡಾ ನ್‌ನಲ್ಲಿ ಸತತ 5ನೇ ದಿನವೂ ಸೇನಾ ಪಡೆಗಳ ನಡುವಿನ ಭೀಕರ ಕಾಳಗ ಮುಂದುವರಿದಿದೆ. ಒಂದೆಡೆ ಪರಿಸ್ಥಿತಿ ವಿಕೋಪಕ್ಕೇರಿದ್ದರೆ ಮತ್ತೂಂದೆಡೆ ಸೂಡಾ ನ್‌ನಲ್ಲಿ ಸಿಲುಕಿರುವ ಭಾರತೀಯರ ಪರಿಸ್ಥಿತಿ ಅತಂತ್ರವಾಗಿದ್ದು, ಅವರ ಸುರಕ್ಷತೆಗಾಗಿ ಭಾರತ ನೆರೆ ರಾಷ್ಟ್ರಗಳ ನೆರವು ಕೋರಿದೆ.
ಈಗಾಗಲೇ ಸಂಘರ್ಷದಲ್ಲಿ ಭಾರತೀ ಯರೊಬ್ಬರು ಮೃತಪಟ್ಟಿದ್ದು, ಕರ್ನಾಟಕ ಬುಡಕಟ್ಟು ಜನಾಂಗದ 31 ಮಂದಿಯ ಸಹಿತ ಹಲವಾರು ಭಾರತೀಯರು ಪ್ರದೇಶದಲ್ಲಿ ಸಿಲುಕಿದ್ದಾರೆ. ಆದರೆ ಯುದ್ಧ ಸಂದರ್ಭ ಹಿನ್ನೆಲೆ ಪ್ರಜೆಗಳ ಸ್ಥಳಾಂತರ ಸಾಧ್ಯವಿಲ್ಲದ ಕಾರಣ, ತತ್‌ಕ್ಷಣಕ್ಕೆ ಅಗತ್ಯವಿರುವ ಸ್ಥಳೀಯ ನೆರವು ನೀಡಲು ಭಾರತ ಸರಕಾರ ಮುಂದಾಗಿದೆ.
ಈ ನಿಟ್ಟಿನಲ್ಲಿ ಭಾರತದ ವಿದೇಶಾಂಗ ಸಚಿವಾಲಯವು ಅಮೆರಿಕ, ಸೌದಿ, ಯುಎಇ, ಬ್ರಿಟನ್‌ಗಳ ನೆರವು ಕೋರಿದೆ ಎಂದು ಮೂಲಗಳು ತಿಳಿಸಿವೆ. ಇನ್ನು ಭಾರತೀಯ ರಾಯಭಾರ ಕಚೇರಿ ಕೂಡ ಸಿಲುಕಿರುವ ಭಾರತೀಯರ ಜತೆಗೆ ನಿರಂತರ ಸಂಪರ್ಕದಲ್ಲಿದ್ದು, ಸೂಚನೆ ಗಳನ್ನು ನೀಡುತ್ತಿದೆ. ಅಲ್ಲದೇ ಅಗತ್ಯಸೇವೆ ಗಳನ್ನು ಪೂರೈಸುವ ನಿಟ್ಟಿನಲ್ಲಿ ಸಹಾಯ ವಾಣಿಯನ್ನೂ ಸ್ಥಾಪಿಸಿದೆ. ಕದನ ವಿರಾಮ ಮಾಡುವಂತೆ ವಿಶ್ವಸಂಸ್ಥೆಯ ಮನವಿಗೂ ಬಂಡುಕೋರರು ಸ್ಪಂದಿಸಿಲ್ಲ.
ಸಿದ್ದರಾಮಯ್ಯ ಪರ ಜೈರಾಮ್
ಸೂಡಾನ್‌ನಲ್ಲಿ ಸಿಲುಕಿರುವ ಕರ್ನಾಟಕ ಮೂಲದ ಹಕ್ಕಿಪಿಕ್ಕಿ ಬುಡಕಟ್ಟು ಜನಾಂಗದ 31 ಮಂದಿಯನ್ನು ಮರಳಿ ಕರೆತರಲು ಮನವಿ ಮಾಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ವಿದೇಶಾಂಗ ಸಚಿವ ಎಸ್.ಜೈಶಂಕರ್, ಪರಿಸ್ಥಿತಿಯನ್ನು ನಿಮ್ಮ ಲಾಭಕ್ಕೆ ಬಳಸಿಕೊಳ್ಳಬೇಡಿ ಎಂದಿದ್ದರು. ಈ ಬಗ್ಗೆ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಆಕ್ಷೇಪ ವ್ಯಕ್ತಪಡಿಸಿ, ಜೈಶಂಕರ್ ಅವರನ್ನು ಬಹಳ ಹಿಂದಿನಿಂದ ನೋಡುತ್ತಿದ್ದೆ. ಆದರೆ ಅವರ ವರ್ತನೆ ಈಗ ಅಸಹ್ಯವೆನಿಸುತ್ತಿದೆ ಎಂದು ಟೀಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.