Mangaluru: ಪಾರ್ಟ್ಟೈಂ ಉದ್ಯೋಗ ಆಮಿಷ: ವ್ಯಕ್ತಿಗೆ 5.66 ಲ.ರೂ. ವಂಚನೆ
Team Udayavani, Apr 21, 2023, 6:35 AM IST
ಮಂಗಳೂರು: ಪಾರ್ಟ್ಟೈಂ ಉದ್ಯೋಗ ನೀಡುವುದಾಗಿ ವಾಟ್ಸ್ ಆ್ಯಪ್ ಸಂಖ್ಯೆಗೆ ಮೆಸೇಜ್ ಕಳುಹಿಸಿ ಅನಂತರ ಒಂದೊಂದೇ ಟಾಸ್ಕ್ ನೀಡಿ ಹಣವನ್ನು ವರ್ಗಾವಣೆ ಮಾಡಿ ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರುದಾರ ವ್ಯಕ್ತಿಗೆ ಫೆ. 4ರಂದು ಮಧ್ಯಾಹ್ನ BIT Company Private Limited ಎಂಬ ಸಂಸ್ಥೆಯಲ್ಲಿ ಅರೆಕಾಲಿಕ ಕೆಲಸ ಇದೆಯೆಂದು 8412871317 ಮೊಬೈಲ್ ಸಂಖ್ಯೆಯಿಂದ ವಾಟ್ಸ್ ಆ್ಯಪ್ ಮೆಸೇಜ್ ಬಂದಿತ್ತು. ಇದನ್ನು ನಂಬಿದ ದೂರುದಾರ ವ್ಯಕ್ತಿಯು ಆ ಸಂಖ್ಯೆಯನ್ನು ಸಂಪರ್ಕಿಸಿದರು. ಅನಂತರ ಟಾಸ್ಕ್ ನೀಡಲಾಯಿತು. ಅದನ್ನು ಪೂರ್ತಿಗೊಳಿಸಿದಾಗ ಹಂತ ಹಂತವಾಗಿ 240 ರೂ. ಮತ್ತು 2,232 ರೂ.ಗಳನ್ನು ಅವರ ಖಾತೆಗೆ ಜಮೆ ಮಾಡಲಾಯಿತು. ಮತ್ತೆ ಮುಂದಿನ ಟಾಸ್ಕ್ ನೀಡಲಾಯಿತು. ಹಂತ ಹಂತವಾಗಿ ಟಾಸ್ಕ್ನೊಂದಿಗೆ ಫೆ. 4ರಿಂದ ಮಾ. 10ರ ವರೆಗೆ ದೂರುದಾರ ವ್ಯಕ್ತಿಯ ಖಾತೆಯಿಂದ ಒಟ್ಟು 5,66,664 ರೂ.ಗಳನ್ನು ವರ್ಗಾಯಿಸಿಕೊಳ್ಳಲಾಯಿತು. ಮತ್ತಷ್ಟು ಹಣದ ಬೇಡಿಕೆ ಇಟ್ಟಾಗ ದೂರುದಾರರಿಗೆ ತಾನು ಮೋಸ ಹೋಗಿರುವುದು ಅವರಿಗೆ ಗೊತ್ತಾಗಿ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ
ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್ಒ ವಿರುದ್ಧ ಕ್ರಮಕ್ಕೆ ಒತ್ತಾಯ
Mangaluru: ಭಾರತ ಬಲಿಷ್ಠವಾಗಲು ಕೌಶಲಯುತ ಶಿಕ್ಷಣ ಅಗತ್ಯ: ಡಾ| ನಿರ್ಮಲಾನಂದನಾಥ ಸ್ವಾಮೀಜಿ
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Mangaluru: ಪಿ.ಎಂ. ರಾವ್ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ
Amparu: ಬೈಕ್ ಸ್ಕಿಡ್; ಸವಾರ ಚಿಕಿತ್ಸೆಗೆ ಸ್ಪಂದಿಸದೆ ಸಾವು
KAUP: ಧರ್ಮಗ್ರಂಥಗಳಷ್ಟೇ ಸಂವಿಧಾನವೂ ಪವಿತ್ರ: ನಿಕೇತ್ ರಾಜ್ ಮೌರ್ಯ
Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.