ಹಿಂದುತ್ವದ ರಕ್ಷಣೆಗೆ ಸದಾ ಬದ್ಧ: ಆಶಾ ತಿಮ್ಮಪ್ಪ ಗೌಡ
ಸಹಸ್ರಾರು ಕಾರ್ಯಕರ್ತರೊಂದಿಗೆ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ನಾಮಪತ್ರ ಸಲ್ಲಿಕೆ
Team Udayavani, Apr 21, 2023, 6:25 AM IST
ಪುತ್ತೂರು: ನಗರದ ರಸ್ತೆಯುದ್ದಕ್ಕೂ ಕೇಸರಿ ಧ್ವಜ, ಬಿಜೆಪಿ ಬಾವುಟದ ಹಾರಾಟದೊಂದಿಗೆ ಸಹಸ್ರಾರು ಕಾರ್ಯಕರ್ತರ ಘೋಷಣೆ ಯೊಂದಿಗೆ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಅವರು ಮೆರವಣಿಗೆಯ ಮೂಲಕ ಸಾಗಿ ಗುರುವಾರ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ಬೆಳಗ್ಗೆ ಕಲ್ಲಾರೆ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠ, ಮಹಾಮಾಯಿ ದೇವಸ್ಥಾನ, ಶ್ರೀ ಲಕ್ಷ್ಮಿವೆಂಕಟರಮಣ ದೇವಸ್ಥಾನ, ಶ್ರೀ ಮಹಾತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು, ಸಂಸದ ತೇಜಸ್ವಿ ಸೂರ್ಯ, ನಟಿ ಶ್ರುತಿ ಅವರ ಉಪಸ್ಥಿತಿಯಲ್ಲಿ ಅಪಾರ ಕಾರ್ಯಕರ್ತರೊಂದಿಗೆ ಮೆರವಣಿಗೆ ಪ್ರಾರಂಭಗೊಂಡಿತು.
ನಾನು ಸಂಘದ ಕಾರ್ಯಕರ್ತೆ
ನಾಮಪತ್ರ ಸಲ್ಲಿಸಿದ ಬಳಿಕ ಕಿಲ್ಲೆ ಮೈದಾನದಲ್ಲಿ ನೆರೆದಿದ್ದ ಕಾರ್ಯ ಕರ್ತರನ್ನು ಉದ್ದೇಶಿಸಿ ಮಾತನಾಡಿದ ಅಭ್ಯರ್ಥಿ ಆಶಾ ತಿಮ್ಮಪ್ಪ, ಹಿಂದುತ್ವ ಪ್ರತಿಪಾದಿಸುವ ಬಿಜೆಪಿ ಪಕ್ಷವು ನನಗೆ ಅವಕಾಶ ನೀಡಿದೆ. ಹಿಂದೂಗಳಿಗೆ ಯಾ ವುದೇ ಸಂದರ್ಭದಲ್ಲಿಯು, ಯಾವುದೇ ಹೊತ್ತಿನಲ್ಲಿಯು ರಕ್ಷಣೆ ನೀಡಲು ನಾನು ಕಟಿಬದ್ದಳಾಗಿದ್ದೇನೆ ಎಂದರು.
50 ಸಾವಿರ ಮತಗಳ ಗೆಲುವು
ಬಿಜೆಪಿ ಯುವಮೋರ್ಚಾ ರಾ. ಅಧ್ಯಕ್ಷ ತೇಜಸ್ವಿ ಸೂರ್ಯ ಮಾತನಾಡಿ, ರಾಜ್ಯದಲ್ಲಿ ಈ ಬಾರಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಆಡಳಿತಕ್ಕೆ ಬರಲಿದೆ. ಪ್ರತೀ ಕ್ಷೇತ್ರದಲ್ಲಿಯೂ ಬಿಜೆಪಿ ಗೆಲ್ಲುವ ಮೂಲಕ ರಾಷ್ಟ್ರೀಯ ವಿಚಾರಧಾರೆಗಳಿಗೆ ಶಕ್ತಿ ತುಂಬಬೇಕು. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ 8 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ. ಈ ಬಾರಿ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದ ಆಶಾ ತಿಮ್ಮಪ್ಪ ಅವರು 50 ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದರು.
ಚಿತ್ರನಟಿ, ಬಿಜೆಪಿ ಮುಖಂಡೆ ಶ್ರುತಿ ಮಾತನಾಡಿ, ಸಮಾಜದಲ್ಲಿ ಮಹಿಳೆಗೆ ಸ್ಥಾನಮಾನ ನೀಡಿದ ಏಕೈಕ ಪಕ್ಷ ಬಿಜೆಪಿ. ತಾಯಿಯಂತೆ ಮಹಿಳೆಯರನ್ನು ಪೂಜಿಸುವ ಪಕ್ಷವೊಂದಿದ್ದರೆ ಅದು ಬಿಜೆಪಿ ಎಂದರು.
ವೇದಿಕೆಯಲ್ಲಿ ಶಾಸಕ ಸಂಜೀವ ಮಠಂದೂರು, ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ, ಸುಳ್ಯ ಅಭ್ಯರ್ಥಿ ಭಾಗೀರಥಿ ಮುರುಳ್ಯ, ಹಿರಿಯ ಮುಖಂಡರಾದ ಅಪ್ಪಯ್ಯ ಮಣಿಯಾಣಿ, ರಾಧಾಕೃಷ್ಣ ಬೂಡಿಯಾರ್, ಆರ್.ಸಿ.ನಾರಾಯಣ, ರಾಜೇಶ್ ಕಾವೇರಿ ಉಪಸ್ಥಿತರಿದ್ದರು. ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜಾ ರಾಧಾಕೃಷ್ಣ ಆಳ್ವ ಸ್ವಾಗತಿಸಿದರು. ನಗರ ಮಂಡಲ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್ ವಂದಿಸಿದರು. ರಾಜೇಶ್ ಬನ್ನೂರು ನಿರೂಪಿಸಿದರು.
ಸಂಚಲನ ಮೂಡಿಸಿದ ತೇಜಸ್ವಿ ಸೂರ್ಯ ಭೇಟಿ
ಬಿಜೆಪಿ ಯುವ ಮೂರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಮತ್ತು ಚಲನಚಿತ್ರ ನಟಿ ಶ್ರುತಿ ಪುತ್ತೂರು ಹೊರವಲಯದ ಹನುಮಗಿರಿಗೆ ಹೆಲಿಕಾಪ್ಟರ್ ಮೂಲಕ ಆಗಮಿಸಿದರು. ಹನುಮಗಿರಿಗೆ ತೆರಳಿ ಬಳಿಕ ಪುತ್ತೂರಿಗೆ ಆಗಮಿಸಿದರು. ಈ ಭೇಟಿ ಕಾರ್ಯಕರ್ತರಲ್ಲಿಯು ಸಂಚಲನ ಮೂಡಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.