Lingayat ಡ್ಯಾಮ್ ನಲ್ಲಿ ಎಷ್ಟು ನೀರಿದೆ ಅಂತ ಮೇ 13 ಕ್ಕೆ ಗೊತ್ತಾಗುತ್ತದೆ..!
ಡಿಕೆಶಿಗೆ ತಿರುಗೇಟು ನೀಡಿದ ಸಿಎಂ ಬೊಮ್ಮಾಯಿ
Team Udayavani, Apr 21, 2023, 4:08 PM IST
ಬೆಂಗಳೂರು : ರಾಜ್ಯದಲ್ಲಿ ಚುನಾವಣ ಕಾವು ದಿನದಿಂದ ದಿನಕ್ಕೆ ತೀವ್ರವಾಗುತ್ತಿದ್ದು ಸದ್ಯ ಲಿಂಗಾಯತ ಸಮುದಾಯದ ವಿಚಾರಕ್ಕಾಗಿ ಕಾಂಗ್ರೆಸ್-ಬಿಜೆಪಿ ಹೊಸ ಸಮರ ನಡೆಸಿ ಮತಬೇಟೆಗೆ ಮುಂದಾಗಿವೆ. ಸಿಎಂ ಬಸವರಾಜ್ ಬೊಮ್ಮಾಯಿ ಟ್ವೀಟ್ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ತಿರುಗೇಟು ನೀಡಿದ್ದಾರೆ.
”ಡಿ.ಕೆ.ಶಿವಕುಮಾರ್ ಅವರೇ ಲಿಂಗಾಯತ ಡ್ಯಾಮಿನ ಬಗ್ಗೆ ಮಾತನಾಡಿದ್ದೀರಿ. ಇದು ಎಷ್ಟು ಗಟ್ಟಿ ಇದೆ ಎಂದು ಅರಿವು ನಿಮಗಿಲ್ಲ. ನೀವು ಅದನ್ನು ಒಡೆಯುವ ಭ್ರಮೆಯಲ್ಲಿದ್ದೀರಿ. 2018 ರಲ್ಲಿ ನಿಮ್ಮ ಸರ್ಕಾರ ಇದ್ದು ಇದನ್ನು ಒಡೆಯಲು ಸಾಧ್ಯವಾಗಿಲ್ಲ. ಈಗೇನು ಮಾಡಲು ಸಾಧ್ಯ.ಮೊದಲು ನಿಮ್ಮ ಕಾಂಗ್ರೆಸ್ಸಿನ ಗುಂಡಿಯಲ್ಲಿ ನೀರಿಲ್ಲ. ಅದರ ಬಗ್ಗೆ ಚಿಂತನೆ ಮಾಡಿ, ನಿಮ್ಮ ಹೇಳಿಕೆನ್ನು ಸವಾಲಾಗಿ ಸ್ವೀಕರಿಸಿದ್ದೇವೆ. ಮೇ 13 ಕ್ಕೆ ಯಾರ್ ಯಾರ ಡ್ಯಾಮ್ ನಲ್ಲಿ ಎಷ್ಟು ನೀರಿದೆ ಅಂತ ಗೊತ್ತಾಗುತ್ತದೆ. ನಿಮ್ಮ ಹೇಳಿಕೆಯಿಂದ ಲಿಂಗಾಯತ ಧರ್ಮವನ್ನು ಒಡೆಯುವ ಮತ್ತೊಂದು ಹುನ್ನಾರ ಬಯಲಾಗಿದೆ.” ಎಂದು ಟ್ವೀಟ್ ಮಾಡಿ ಆಕ್ರೋಶ ಹೊರ ಹಾಕಿದೆ.
ಮಾಜಿ ಸಿಎಂ ಜಗದೀಶ್ ಶಟ್ಟರ್ ಮತ್ತು ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಬಿಜೆಪಿಯಲ್ಲಿ ಯಡಿಯೂರಪ್ಪ ಸೇರಿ ಲಿಂಗಾಯತ ನಾಯಕರನ್ನು ಮೂಲೆಗುಂಪು ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ನಿರಂತರ ಆರೋಪ ಮಾಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ಹೊಸ ಸೇರ್ಪಡೆ
Karkala: ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ 24*7 ಸಿಟಿ ಸ್ಕ್ಯಾನ್ ಸೌಲಭ್ಯ ಉದ್ಘಾಟನೆ
Manipal: ಡಿಸಿ ಕಚೇರಿ ಆವರಣದಲ್ಲೂ ಬೀದಿನಾಯಿ ಉಪಟಳ
Malpe: ಕೋಡಿಬೆಂಗ್ರೆ-ಹಂಗಾರಕಟ್ಟೆ ಸಂಪರ್ಕ ಇನ್ನು ದೂರ
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.