ಮದ್ಯದ ನಶೆ ಕೊಲೆಯಲ್ಲಿ ಅಂತ್ಯ
Team Udayavani, Apr 22, 2023, 5:23 AM IST
ಉಡುಪಿ: ಮದ್ಯದ ನಶೆಯಲ್ಲಿ ವ್ಯಕ್ತಿಗಳಿಬ್ಬರ ನಡುವೆ ಉಂಟಾದ ಜಗಳ ಒಬ್ಬನ ಕೊಲೆಯಲ್ಲಿ ಅಂತ್ಯವಾದ ಘಟನೆ ಉದ್ಯಾವರ ಸಮೀಪದ ಪಿತ್ರೋಡಿಯಲ್ಲಿ ಗುರುವಾರ ರಾತ್ರಿ ನಡೆದಿದೆ.
ಪಿತ್ರೋಡಿ ನಿವಾಸಿ ದಯಾನಂದ ಸಾಲ್ಯಾನ್ (40) ಮೃತರು. ಅವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಕೊಲೆ ಆರೋಪಿ ಭರತ್ (40)ನನ್ನು ಕಾಪು ಪೊಲೀಸರು ಬಂಧಿಸಿದ್ದಾರೆ.
ಘಟನೆ ವಿವರ
ಗುರುವಾರ ರಾತ್ರಿ ಉದ್ಯಾವರ ಪಿತ್ರೋಡಿ ಹಳೆ ಸಿಂಡಿಕೇಟ್ ಬ್ಯಾಂಕ್ ಬಳಿಯ ಬಾರ್‌ವೊಂದರಲ್ಲಿ ಕುಡಿದ ನಶೆಯಲ್ಲಿ ಕ್ಷುಲ್ಲಕ ವಿಚಾರಕ್ಕೆ ಮಾತಿಗೆ ಮಾತು ಬೆಳೆದಿದ್ದು, ಬಾರ್‌ನಿಂದ ಹೊರಗಡೆ ಬಂದ ದಯಾನಂದ ಮತ್ತು ಭರತ್ ಪರಸ್ಪರ ಜಗಳ ಮಾಡಿಕೊಂಡಿದ್ದರು. ಈ ವೇಳೆ ಭರತ್ ತನ್ನ ಕೈ ಬೆರಳಿನಲ್ಲಿದ್ದ ಕಬ್ಬಿಣದ ಪಂಚ್‌ನಿಂದ ದಯಾನಂದನ ಮುಖ ಹಾಗೂ ಕೆನ್ನೆಯ ಭಾಗಕ್ಕೆ ಬಲವಾಗಿ ಜಜ್ಜಿ ಬಳಿಕ ತಲೆಗೆ ಹೊಡೆದಿದ್ದ. ದತ್ತಾತ್ರೇಯ ಭಜನ ಮಂದಿರದಲ್ಲಿ ಭಜನ ಮಂಗಳ ನಡೆಯುತ್ತಿದ್ದು, ಇಲ್ಲಿಯೇ ಸಮೀಪ ಕೊಲೆ ನಡೆದಿದೆ. ತೀವ್ರವಾಗಿ ಗಾಯಗೊಂಡ ದಯಾನಂದ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ.
ಹಲ್ಲೆ ನಡೆಸಿದ ಭರತ್ ಘಟನೆಯ ಅನಂತರ ಸ್ಥಳದಿಂದ ಪರಾರಿಯಾಗಿದ್ದು, ಸ್ಥಳೀಯರ ಸಹಕಾರದಿಂದ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಡಿವೈಎಸ್‌ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಆರೋಪಿಗೆ ಗಾಂಜಾ ನಂಟು; ಗ್ರಾಮಸಭೆಯಲ್ಲೂ ಪ್ರಸ್ತಾವ
ಆರೋಪಿ ಭರತ್ ಪಿತ್ರೋಡಿಯ ಫಿಶ್‌ಮಿಲ್‌ವೊಂದರಲ್ಲಿ ಕೆಲಸ ಮಾಡಿಕೊಂಡಿದ್ದ. ಈತನ ವಿರುದ್ಧ ಈ ಹಿಂದೆಯೂ ಹಲ್ಲೆ ಸಹಿತ ಹಲವಾರು ಪ್ರಕರಣಗಳು ದಾಖಲಾಗಿತ್ತು. ಗಾಂಜಾ ವ್ಯಸನಿಯಾಗಿದ್ದ ಈತ ಇದೇ ಮತ್ತಿನಲ್ಲಿ ಗಲಾಟೆ, ಹೊಡೆದಾಟದಂತಹ ಕೃತ್ಯದಲ್ಲಿ ಭಾಗಿಯಾಗುತ್ತಿದ್ದ. ಪಿತ್ರೋಡಿ ಭಾಗದಲ್ಲಿ ಗಾಂಜಾ ಚಟುವಟಿಕೆ ಹೆಚ್ಚಿನ ಪ್ರಮಾಣದಲ್ಲಿ ನಡೆಯುತ್ತಿರುವ ಬಗ್ಗೆ ಗ್ರಾಮಸಭೆಯಲ್ಲಿಯೂ ಹಲವಾರು ಬಾರಿ ಚರ್ಚೆ ನಡೆದಿತ್ತು. ಆದರೂ ಪೊಲೀಸರು ಇದುವರೆಗೂ ಯಾವುದೇ ಕ್ರಮ ತೆಗೆದುಕೊಳ್ಳದ ಕಾರಣ ಗಲಾಟೆಗಳು ಕೊಲೆಯ ಹಂತಕ್ಕೆ ತಲುಪುತ್ತಿವೆ. ಇನ್ನಾದರೂ ಈ ಭಾಗದಲ್ಲಿ ನಡೆಯುವ ಗಾಂಜಾ ಚಟುವಟಿಕೆಗಳಿಗೆ ಕಡಿವಾಣ ಹಾಕುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Election: ಆಪ್ ಸೋಲಿಸಲು ಬಿಜೆಪಿ ಜತೆ ಕಾಂಗ್ರೆಸ್ ಮೈತ್ರಿ: ಕೇಜ್ರಿವಾಲ್
ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ
Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.