Goa ಕೈ ತೊರೆದು ಬಿಜೆಪಿ ಸೇರಿದ್ದ ಶಾಸಕರಲ್ಲಿ ಕೆಲವರಿಗೆ ಸಚಿವ ಸ್ಥಾನ

ಕೆಲ ಹಾಲಿ ಸಚಿವರಲ್ಲಿ ಸ್ಥಾನ ಕಳೆದುಕೊಳ್ಳುವ ಆತಂಕ...!

Team Udayavani, Apr 22, 2023, 5:05 PM IST

1-dasdadsa

ಪಣಜಿ: ಕಳೆದ ವರ್ಷ ಗೋವಾದ ಎಂಟು ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಿದ್ದರು. ಈ ಎಂಟು ಶಾಸಕರಲ್ಲಿ ಕೆಲವರಿಗೆ ಸಚಿವ ಸ್ಥಾನ ನೀಡಲು ಬಿಜೆಪಿ ಹೈಕಮಾಂಡ್ ಒಪ್ಪಿಗೆ ಸೂಚಿಸಿದೆ  ಎನ್ನಲಾಗಿದೆ. ರಾಜ್ಯ ಸಚಿವ ಸಂಪುಟ ಪುನರ್ ರಚನೆಯಾದರೆ ಯಾವ ಇಬ್ಬರು ಶಾಸಕರಿಗೆ ಅವಕಾಶ ಸಿಗಲಿದೆ ಎಂಬ ಊಹಾಪೋಹ ಗೋವಾ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಹಿರಿಯ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ದಿಗಂಬರ್ ಕಾಮತ್ ಹಾಗೂ ಶಾಸಕ ಅಲೆಕ್ಸ್ ಸಿಕ್ವೇರಾ ಅವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ದಿಗಂಬರ್ ಕಾಮತ್, ಅಲೆಕ್ಸ್ ಸಿಕ್ವೇರಾ, ರುಡಾಲ್ಫ್ ಫರ್ನಾಂಡಿಸ್ , ಸಂಕಲ್ಪ್ ಅಮೋನ್ಕರ್, ದಿಲಾಯಲಾ ಲೋಬೋ, ಮೈಕಲ್ ಲೋಬೋ, ರಾಜೇಶ್ ಫಲ್ದೇಸಾಯಿ ಮತ್ತು ಕೇದಾರ್ ನಾಯ್ಕ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಆದರೆ ಇದುವರೆಗೂ ಸಂಪುಟ ಪುನರ್ ರಚನೆಯಾಗದ ಕಾರಣ ಇವರು ಸಚಿವ ಸ್ಥಾನದಿಂದ ವಂಚಿತರಾಗಿದ್ದರು.

ಇದೀಗ ಇಬ್ಬರು ಶಾಸಕರಿಗೆ ಸಚಿವ ಸ್ಥಾನ ಲಭಿಸಿದೆ ಎಂಬ ಮಾತು ಕೇಳಿಬರುತ್ತಿದೆ. ಕಳೆದ ಸುಮಾರು ಐದಾರು ತಿಂಗಳಿಂದ ಸಚಿವ ಸಂಪುಟ ಪುನರ್ರಚನೆ ಕುರಿತು  ಸಾಕಷ್ಟು ಚರ್ಚೆ ನಡೆಯುತ್ತಲೇ ಇದೆ. ಆದರೆ ಇನ್ನೂ ಸಚಿವ ಸಂಪುಟ ವಿಸ್ತರಣೆ ಅಥವಾ ಸಚಿವ ಸಂಪುಟದಲ್ಲಿ ಬದಲಾವಣೆ ಆಗಿಲ್ಲ.  ಇದರಿಂದಾಗಿ ಕೆಲ ಶಾಸಕರಲ್ಲಿ ಅಸಮಾಧಾನದ ಮಾತು ಕೇಳಿಬಂದಿದೆ. ಬಿಜೆಪಿ ಸೇರ್ಪಡೆಯಾದ ಶಾಸಕರಲ್ಲಿ ಕೇವಲ ಇಬ್ಬರು ಶಾಸಕರಿಗೆ ಮಾತ್ರ ಸಚಿವ ಸ್ಥಾನ ನೀಡಲು ಬಿಜೆಪಿ ಕೇಂದ್ರ ನಾಯಕರು  ಅವರಿಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.  ಮುಂದಿನ ವಾರಗಳಲ್ಲಿ ಸಚಿವ ಸಂಪುಟ ಪುನರ್ ರಚನೆಯಾಗುವ ನಿರೀಕ್ಷೆ ಇದೆ ಎನ್ನಲಾಗಿದೆ.

ಇತ್ತೀಚೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗೋವಾದ ಫರ್ಮಾಗುಡಿಯಲ್ಲಿ ಬೃಹತ್ ಬಹಿರಂಗ ಸಭೆ ನಡೆಸಿದ್ದರು. ಈ ವೇಳೆ ದಿಗಂಬರ ಕಾಮತ್ ಜತೆ ಚರ್ಚಿಸಿದ್ದರು. ಕಾಮತ್ ಕೂಡ ದೆಹಲಿಗೆ ಭೇಟಿ ನೀಡಿ ಶಾ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ದಕ್ಷಿಣ ಗೋವಾದಲ್ಲಿ ಬಿಜೆಪಿಯನ್ನು ಬಲಪಡಿಸಲು ಕಾಮತ್ ಅವರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ಇದೆ. ಅಲೆಕ್ಸ್ ಸಿಕ್ವೇರಾ ಅವರು ನುವೆಮ್ ಕ್ಷೇತ್ರದ  ಮಾಜಿ ಸಚಿವ ಮತ್ತು ಶಾಸಕರಾಗಿದ್ದಾರೆ. ಅಲ್ಪಸಂಖ್ಯಾತರ ಪ್ರತಿನಿಧಿಗಳಾಗಿ ಅವರಿಗೆ ಸಚಿವ ಸ್ಥಾನ ನೀಡಬಹುದು ಎಂದು ಹೇಳಲಾಗುತ್ತಿದೆ. ರಾಜ್ಯ ಸಚಿವ ಸಂಪುಟದಲ್ಲಿ ಹೊಸ ಶಾಸಕರಿಗೆ ಸಚಿವ ಸ್ಥಾನ ನೀಡಬೇಕಾರೆ, ಈಗಾಗಲೇ ಇರುವ ಸಚಿವರನ್ನು ಅವರ ಸಚಿವ ಸ್ಥಾನದಿಂದ ಕೈ ಬಿಡುವ ಅನಿವಾರ್ಯತೆಯಿದೆ. ಇದರಿಂದಾಗಿ ಬಿಜೆಪಿ ಸಚಿವರಲ್ಲಿಯೂ ತಮ್ಮ ಸಚಿವ ಸ್ಥಾನ ಕಳೆದುಕೊಳ್ಳುವ ಆತಂಕ ಎದುರಾಗಿದೆ.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.