Election 2023: ಈ ಬಾರಿಯೂ BSY ಹೆಚ್ಚು ಸುತ್ತಾಟ
Team Udayavani, Apr 23, 2023, 7:37 AM IST
ಬೆಂಗಳೂರು: ಚುನಾವಣ ಅಖಾಡಕ್ಕೆ ಇನ್ನಷ್ಟು ಪರಿಣಾಮಕಾರಿಯಾಗಿ ಧುಮುಕಲು ಬಿಜೆಪಿ ಸಿದ್ಧತೆ ನಡೆಸಿದ್ದು, ರವಿವಾರದಿಂದ ಘಟಾನುಘಟಿ ನಾಯಕರ ಪ್ರವಾಸ ಆರಂಭವಾಗಲಿದೆ. ಈ ಬಾರಿಯ ಚುನಾವಣೆಯಲ್ಲೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಪಕ್ಷದ ಪರ ಭರ್ಜರಿ ಬ್ಯಾಟಿಂಗ್ ನಡೆಸಲಿದ್ದು, ಎ. 23ರಿಂದ ಮೇ 6ರ ವರೆಗೆ ಒಟ್ಟು 80 ಸಭೆಗಳಲ್ಲಿ ಭಾಗವಹಿಸಲಿದ್ದಾರೆ.
ಪ್ರವಾಸ, ಸಭೆ-ಸಮಾವೇಶ, ರೋಡ್ ಶೋ ಹಾಗೂ ಚುನಾವಣಾ ತಂತ್ರಗಾರಿಕೆಗೆ ಸಂಬಂಧಪಟ್ಟಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಶುಕ್ರವಾರ ತಡರಾತ್ರಿಯವರೆಗೂ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಪಕ್ಷದ ಮುಖಂಡರ ಜತೆಗೆ ಸಭೆ ನಡೆದಿದ್ದು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ಕನಕಪುರ ವಿಧಾನಸಭಾ ಕ್ಷೇತ್ರಕ್ಕೆ ಕರೆಸಿ ಬೃಹತ್ ಸಮಾವೇಶ ನಡೆಸುವ ಬಗ್ಗೆ ಸಭೆಯಲ್ಲಿ ಚರ್ಚೆಯಾಗಿದೆ. ಹಳೆ ಮೈಸೂರು ಹಾಗೂ ಕರಾವಳಿ ಭಾಗದಲ್ಲಿ ಯೋಗಿ ಆದಿತ್ಯನಾಥ ಕೇಸರಿ ರಣಕಹಳೆ ಮೊಳಗಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಪ್ರವಾಸ ಎ.28ರಿಂದ ಆರಂಭವಾಗುತ್ತದೆ.
ಸಿಎಂ ಬೊಮ್ಮಾಯಿ 75 ಸಭೆಗಳಲ್ಲಿ, ಬಿ.ಎಲ್.ಸಂತೋಷ್ ಹಾಗೂ ನಳಿನ್ ಕುಮಾರ್ ಕಟೀಲು 50ಕ್ಕೂ ಮೇಲ್ಪಟ್ಟ ಸಭೆಗಳಲ್ಲಿ ಭಾಗಿಯಾಗುತ್ತಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.